ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

(ವರದಿ:ಸಿಬಿಎಸ್‌)

ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದ ಕೂಡಲೇ ಕೆಲಕಾಲ ಆತಂಕದ ವಾತಾವರಣ‌ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಪೊಲೀಸರು‌ ಸ್ಥಳಕ್ಜೆ ಧಾವಿಸಿ ದರು.

ಬೆದರಿಕೆ ಮೇಲ್‌ನ ಸಾರಾಂಶದ ಪ್ರಿಂಟೌಟ್ ತೆಗೆದು ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ಹೊರಡಿಸಿದ್ದರು.

ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ ನಡುವೆಯೂ ಜಿಲ್ಲಾಧಿಕಾರಿಗಳು ಸಭೆ ಮುಂದುವರೆಸಿದ್ದಾರೆ.