ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ.
ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ರವಿಕುಮಾರ್ ರಾಜೀನಾಮೆ ನೀಡಿದ್ದಾಗಿದೆ.
ಸಿದ್ದರಾಮಯ್ಯ 65 ಕೋಟಿ ರೂ.ಗಳನ್ನು ಭೋವಿ ಸಮಾಜಕ್ಕೆ ಘೋಷಣೆ ಮಾಡಿದ್ದಾರೆ. ಆದರೆ ಕೇವಲ 13 ಕೋಟಿ ರೂ. ಬಿಡುಗಡೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ್ ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ,ಆದರೆ ಅವರು ಭೋವಿ ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕಾಗಿತ್ತು, ಆದರೆ ಅವರೇ ಶೇ.60 ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರೆಂಬ ವಿಡಿಯೋ ಸಿಕ್ಕಿದೆ ಎಂದು ವೆಂಕಟೇಶ್
ದೂರಿದ್ದರು.