ಬಿಪಿಎಲ್ ಕಾರ್ಡ್‌ ರದ್ದು ಗೊಂದಲಕ್ಕೆ ತರೆ ಎಳೆದ ಸಿದ್ದರಾಮಯ್ಯ

Spread the love

ಬೆಂಗಳೂರು: ಬಿಪಿಎಲ್ ಕಾರ್ಡ್‌ ರದ್ದು ಗೊಂದಲಕ್ಕೆ ಸ್ವತಃ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೇ‌ ತೆರೆ ಎಳೆದಿದ್ದಾರೆ.

ರದ್ದಾದ ಅರ್ಹ ಬಿಪಿಎಲ್‌ ಕಾರ್ಡ್‌ ಗಳನ್ನು
ವಾಪಸ್‌‌ ನೀಡುವಂತೆ ಸಿದ್ದರಾಮಯ್ಯ ತುರ್ತು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರ ಪಡಿತರ ಚೀಟಿಗಳನ್ನು ರದ್ದು ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ್ದಾರೆ.

ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಿಎಂ ಕಡಕ್ ಎಚ್ವರಿಕೆ ನೀಡಿದ್ದಾರೆ.