ಮೈಸೂರು: ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಸಾಧನೆಗೆ ನೀಡುವ ಗೌರವ, ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಚಿನ್ಮಯ ಪಿಯು ಕಾಲೇಜಿನ ಪ್ರಾಂಶುಪಾಲರಾದ ಎಂ ಎನ್ ಶರತ್ ಕುಮಾರ್ ಹೇಳಿದರು.
ನಗರದ ಸರಸ್ವತಿಪುರಂನಲ್ಲಿರುವ
ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 83 ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.
ಈ ಪುರಸ್ಕಾರ ಇತರೆ, ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತದೆ,ವಿದ್ಯಾರ್ಥಿಗಳೇ ಸಮಾಜದ ಆಸ್ತಿ, ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಲಿದೆ ಎಂದು ತಿಳಿಸಿದರು
ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿಅವರು ಮಾತನಾಡಿ,
ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಎನ್ ಗೋಪಾಲಕೃಷ್ಣನ್, ಗೌರವ ಕಾರ್ಯದರ್ಶಿ ಗುರುಪ್ರಸಾದ್, ಪಿ ಎಸ್ ಚಂದ್ರಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಖಜಾಂಜಿ ಎಮ್ ರಾಘವೇಂದ್ರ ರಾವ್, ಶ್ರೀವತ್ಸ, ಮಂಗಳ ಮತ್ತಿತರರು ಭಾಗವಹಿಸಿದ್ದರು.