ಬ್ರಿಗೇಡ್ ರಸ್ತೆಯಲ್ಲಿ ಎಚ್ ಎಂ ಟವರ್ಸ್ ಪುಟ್ ಪಾತ್ ಒತ್ತುವರಿ:ಆಪ್ ಆಕ್ರೋಶ

Spread the love

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಬ್ರಿಗೇಡ್ ರೋಡ್ ಪಕ್ಕದ ಮಾರ್ಕಮ್ ರಸ್ತೆಯಲ್ಲಿ ಐದಾರು ವರ್ಷಗಳಿಂದ ಹೆಚ್ ಎಂ ಟವರ್ಸ್ ಕಂಪನಿ ಪಾದಚಾರಿ ಮಾರ್ಗವನ್ನು ಅತಿಕ್ರಮಣ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಪ್ ಪಕ್ಷದ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಿವಕುಮಾರ್.ವಿ ನಾಯ್ಡು ಅವರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದರಿಂದ ಜನ ಓಡಾಡಲು ಸಾಧ್ಯವಿಲ್ಲದೆ ತೀವ್ರ ತೊಂದರೆ ಪಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕೂಡಲೇ ಪಾದಚಾರಿ ಮಾರ್ಗ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಅಧಿಕಾರಿಗಳನ್ನು ಅವರು ಒತ್ತಾಯಿಸಿದರು.

ಅತಿಕ್ರಮಣಕಾರರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.