ಮೈಸೂರು: ಗೌತಮ ಬುದ್ಧನ ಆಚಾರ, ವಿಚಾರಗಳು ದೇಶಕ್ಕೆ ಮಾತ್ರ ಸೀಮಿತವಲ್ಲ ಇಡೀ ವಿಶ್ವಕ್ಕೆ ಸಲ್ಲುವ ಸಂದೇಶಗಳಾಗಿದ್ದು, ಮನುಕುಲ ಅವರ ದಾರಿಯಲ್ಲಿ ಸಾಗಬೇಕು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್ ಹೇಳಿದರು.

ನಗರದ ಸರಸ್ವತಿಪುರಂನಲ್ಲಿರುವ ಮಹಾಬೋಧಿ ಕರ್ಲ ವಿದ್ಯಾರ್ಥಿ ನಿಲಯದಲ್ಲಿ ಬುದ್ಧ ಜಯಂತಿ ಅಂಗವಾಗಿ
ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಸೇವಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಿಸಿ ಅವರು ಮಾತನಾಡಿದರು.
ಬುದ್ಧ ರಾಜಮನೆತನದಲ್ಲಿ ಜನಿಸಿದರೂ ಅರಮನೆಯಿಂದ ಹೊರ ಹೋದಾಗ ಸಮಾಜದ ನಡುವೆ ನಡೆಯುತ್ತಿದ್ದ. ಬಡವರು ಹಾಗೂ ಅಸಹಾಯಕ ಸ್ಥಿತಿಯಲ್ಲಿರುವ ಜನರ ಕಷ್ಟ ಅರಿತು ಶಾಂತಿ ಸಹಬಾಳ್ವೆಯಿಂದ ಬದುಕಲು ಧ್ಯಾನದ ಮೂಲಕ ಜ್ಞಾನ ಪ್ರಚಾರ ಮಾಡಿದರು’ ಎಂದರು.

ಈ ವೇಳೆ ಪ್ರಿಯಾದರ್ಶನ್,ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್, ಸುಬ್ರಮಣಿ ,ರಾಜೇಶ್ ಕುಮಾರ್, ಮಹೇಶ್, ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ತೇಜಸ್, ಪುನೀತ್, ಅಭಿಷೇಕ್, ಮನೋಜ್ ಮತ್ತಿತರರು ಹಾಜರಿದ್ದರು.