ಮೈಸೂರು: ನಗರದ ಚಾಮರಾಜ ಒಡೆಯರ್ ವೃತ್ತದ ಬಳಿ, ಮೈಸೂರು ಅರಮನೆಯ ಉತ್ತರ ದ್ವಾರದ ಎದುರು ಮಂಗಳವಾರ
ಬಸ್ – ದ್ವಿಚಕ್ರವಾಹನ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ತಾತ ತಮ್ಮ ಮೊಮ್ಮಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತ ನಡೆದ ಸ್ಥಳದಲ್ಲಿ ಪ್ರಿ-ವೆಡ್ಡಿಂಗ್ ಫೋಟೋಶೂಟ್ ನಡೆಯುತ್ತಿತ್ತು. ಶೂಟ್ ತಂಡ ರಸ್ತೆ ಅಡ್ಡಗಟ್ಟಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗಿತ್ತು,ಇದರಿಂದಾಗಿ ವಾಹನಗಳ ಸಂಚಾರದಲ್ಲಿ ಗೊಂದಲ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಅಪಘಾತದಲ್ಲಿ ಬಾಲಕಿಯ ತಾತ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ತಡೆದು ಅನಧಿಕೃತವಾಗಿ ಪ್ರಿ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಅಪಘಾತ ಸಂಬಂಧ ದೇವರಾಜ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
