ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಐದು ಮಂದಿ ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಇಂಡಿಕಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ.
ಈ ಐದೂ ಮಂದಿ ಸ್ನೇಹಿತರಾಗಿದ್ದು ಜಾಲಿ ರೈಡ್ ಹೋಗಿ ವಾಪಸಾಗುತ್ತಿದ್ದಾಗ ಈ ಭೀಕರ ಅವಘಡ ನಡೆದು ಹೋಗಿದೆ.
ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಹಾರಿ ಬೆಂಗಳೂರು ಕಡೆಯಿಂದ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ಗೆ ಡಿಕ್ಕಿಯಾಗಿದೆ.
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರೆಲ್ಲಾ ಸುರಕ್ಷಿತರಾಗಿದ್ದಾರೆ.
ಐದು ಮಂದಿ ಸ್ನೇಹಿತರು ಸೇರಿ ಇಂಡಿಕಾ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದರು. ತುಮಕೂರಿನಿಂದ ಬೆಂಗಳೂರಿನತ್ತ ಪ್ರಯಾಣ ಮಾಡುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.
