ಸಿ. ಟಿ ರವಿ ಅಸಭ್ಯ ಪದ ಬಳಕೆ:ಕ್ರಿಮಿನಲ್ ಅಪರಾಧ- ಸಿಎಂ

Spread the love

ಬೆಳಗಾವಿ:‌ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧವಾಗಿದೆ‌ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿ ಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಸಿ. ಟಿ.ರವಿ ಅವರು ಆರೋಪವನ್ನು ಅಲ್ಲಗಳೆದಿದ್ದಾರಲ್ಲ ಎಂಬ ಪ್ರಶ್ನೆಗೆ,ವಿಚಾರಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು.