ಯಾದಗಿರಿ : ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ತಪ್ಪಿಗೆ ಪಿಎಸ್‌ಐ ಒಬ್ಬರನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆಯ ಪಿಎಸ್‌ಐ ರಾಜಶೇಖರ್ ರಾಠೋಡ್ ಅವರನ್ನು ಅಮಾನತು ಮಾಡಲಾಗಿದೆ.
ಪಿಎಸ್‌ಐ ಆಗಿ ಹತ್ತು ವರ್ಷ ಪೂರೈಸಿದ್ದಕ್ಕೆ ಠಾಣೆಯಲ್ಲೇ ರಾಜಶೇಖರ್ ಅವರು ರೌಡಿಶೀಟರ್ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು,ಅಲ್ಲದೆ ಠಾಣಾ ಆವರಣದಲ್ಲಿಯೇ ಶೆಟಲ್ ಕಾಕ್ ಆಡಿದ್ದರು.
ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತು ಮಾಜಿ ಸಚಿವ ರಾಜುಗೌಡ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ಇಲಾಖೆಯಿಂದ ತನಿಖೆ ನಡೆಸಲಾಗಿತ್ತು.ಕರ್ತವ್ಯಲೋಪ ಹಾಗೂ ಶಿಸ್ತು ಉಲ್ಲಂಘನೆ ಸಾಬೀತಾದ ಹಿನ್ನೆಲೆಯಲ್ಲಿ
ಕೂಡಲೇ ರಾಜಶೇಖರ್ ಅವರನ್ನು ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.