ಬೈಕ್ ಗೆ ಕಾರು ಡಿಕ್ಕಿ ಮೂವರ ದುರ್ಮರಣ

Spread the love

(ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಕಾ‌ರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ನಡೆದಿದೆ.

ಶಶಿಧ‌ರ್, ಅವರ ಪತ್ನಿ ಶಾಲಿನಿ ಹಾಗೂ ತಾಯಿ ಭಾಗ್ಯಮ್ಮ ಮೃತಪಟ್ಟ ನತದೃಷ್ಟರು.

ಮೃತರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೂದ್ಲಾಪುರ ಗ್ರಾಮದ ನಿವಾಸಿಗಳು.

ಚಿಕ್ಕದೇವಮ್ಮನ ಬೆಟ್ಟಕ್ಕೆ ಹೋಗಿ ವಾಪಸ್‌ ಬರುವಾಗ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಕವಿತಾ ಅವರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.