ತುಮಕೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲವರು ಮೃತಪಟ್ಟ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಚಿಕ್ಕನಾಯಕನಹಳ್ಳಿಯ ಗೋಡೆಗೆರೆ ಗೇ ಬಳಿ ನಡೆದಿದೆ.
ಈ ಭೀಕರ ಅಪಫಾತದಲ್ಲಿ ಒಂದು ಹೆಣ್ಣುಮಗು ಸೇರಿದಂತೆ ನಾಲ್ವರು ಮೃತಪಟ್ಟರೆ, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕನಾಯಕನಹಳ್ಳಿಯ ವಿವೇಕ್ (32) , ಅನಿಲ್ (33), ಹಾಗೂ 31 ವರ್ಷದ ದಾವೂದ್ ಪಾಷ ಮತ್ತು 3 ವರ್ಷದ ಆನಮ್ ಪಾಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ.
ಚಿಕ್ಕನಾಯಕನಹಳ್ಳಿ ಕಡೆಯಿಂದ ಕೆ.ಬಿ.ಕ್ರಾಸ್ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಕೆ.ಬಿ.ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರುಗಳು ಮುಖಾಮುಖಿ ಡಿಕ್ಕಿಯಾಗಿದೆ.
ಚಿಕ್ಕನಾಯಕನಹಳ್ಳಿ ಪೊಲೀಸರು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡರು
