ಬೆಂಗಳೂರು: ರಾಜ್ಯದ ಜನತೆ ಒಬ್ಬರೂ ತಪ್ಪಿಸಿಕೊಳ್ಳದೆ ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ಮನವಿ ಮಾಡಿದ ಸಿಎಂ,ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಕೂಡ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.
ಆನ್ಲೈನ್ ಹಾಗೂ ವೆಬ್‌ಸೈಟ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ,
ಆಶಾ ಕಾರ್ಯಕರ್ತೆಯರು ನಾಳೆಯಿಂದಲೇ ಮನೆ ಮನೆಗೆ ಹೋಗಿ 60 ಪ್ರಶ್ನೆಗಳ ನಮೂನೆಯನ್ನು ತಲುಪಿಸುತ್ತಾರೆ,ನಂತರ ಶಿಕ್ಷಕರು ಮನೆ,ಮನೆಗೆ ಹೋಗುತ್ತಾರೆ ಎಂದು ಹೇಳಿದರು.
ಯಾರೂ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ,ಜಾತಿ ಹೇಳಿಕೊಳ್ಳಲು ಕಷ್ಟ ಆದವರು ಸಹಾಯವಾಣಿಗೆ ಕರೆ ಮಾಡಿ ತಮ್ಮ ಜಾತಿ ಹೇಳಬಹುದು ಎಂದು ಮುಖ್ಯ ಮಂತ್ರಿ ಗಳು ಸಲಹೆ ನೀಡಿದರು.
ಯಾವುದೇ ನ್ಯೂನ್ಯತೆಗಳು ಇಲ್ಲದಂತೆ, ಹಿಂದಿನ ಸಮೀಕ್ಷೆಗಳಲ್ಲಿ ಎದುರಾದ ಯಾವುದೇ ತಾಂತ್ರಿಕ ಸಮಸ್ಯೆ ಈ ಬಾರಿ ಇಲ್ಲದಂತೆ ಸಿದ್ಧತೆ ಮಾಡಿಕೊಂಡಿದ್ದೇವೆ,
ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದದ್ದನ್ನು ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತಾರೆ
ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ,ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ,ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡಸಲಾಗುತ್ತಿದೆ,ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚನೆ ನೀಡಿದ್ದೇವೆ,ಹಿಂದುಳಿದ ಆಯೋಗದವರು ಡಿಸೆಂಬರ್ ಒಳಗೆ ವರದಿ ಕೊಡುವ ನಿರೀಕ್ಷೆಯಲ್ಲಿದ್ದಾರೆ, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಮುಗಿಸಲು ತೀರ್ಮಾನಿಸಿದ್ದಾರೆ,
175000 ಸರ್ಕಾರಿ ಶಾಲಾ ಶಿಕ್ಷಕರುಗಳನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇವೆ ಎಂದು ಸಿಎಂ ವಿವರಿಸಿದರು.