ಬಾಲಿವುಡ್ ದಿಗ್ಗಜ ಧರ್ಮೇಂದ್ರ ‌ವಿಧಿವಶ

ಮುಂಬೈ: ಬಾಲಿವುಡ್ ಚಿತ್ರರಂಗದ ಹೆಸರಾಂತ ಹಿರಿಯ ನಟ ಮತ್ತು ಮಾಜಿ ಸಂಸದ ಧರ್ಮೇಂದ್ರ ಅವರು ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು.ತೀವ್ರ ಉಸಿರಾಟದ ತೊಂದರೆ ಹಾಗೂ ವಯೊಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಬಾಲಿವುಡ್ ನಲ್ಲಿ ಸುಮಾರು ಆರು ದಶಕಗಳ ಕಾಲ ಮಿಂಚಿದ್ದ ಧರ್ಮೇಂದ್ರ, 2004ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಸುಮಾರು ಐವತ್ತು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು.

ಎರಡನೆ ಪತ್ನಿ ಹೇಮಾಮಾಲಿನಿ ಕೂಡಾ ಸಂಸದರಾಗಿದ್ದಾರೆ, ಮೂರು ಬಾರಿ ಪತ್ನಿಯನ್ನು ಗೆಲ್ಲಿಸಲು ಅವರು ಪ್ರಚಾರ ಮಾಡಿದ್ದರು.

2009ರ ನಂತರ, ಧರ್ಮೇಂದ್ರ ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿದಿದ್ದರು.

ಧರ್ಮೇಂದ್ರ 1935ರ ಡಿಸೆಂಬರ್‌ 8ರಂದು ಪಂಜಾಬ್‌ನ ಲುಧಿಯಾನದ ಸಣ್ಣ ಹಳ್ಳಿಯಲ್ಲಿ ಜನಿಸಿದ್ದರು, ಕಿರಿಯ ವಯಸ್ಸಿನಲ್ಲೇ ಪ್ರಕಾಶ್ ಕೌರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಚಿಕ್ಕ ವಯಸ್ಸಿನಿಂದಲೇ ನಟನಾಗಬೇಕು ಎಂಬ ಹಂಬಲ ಹೊಂದಿದ್ದ ಧರ್ಮೇಂದ್ರ ನಟಿಸುವುದಕ್ಕಾಗಿಯೇ ಮನೆ ಬಿಟ್ಟು ಬಂದರು. 1960ರಲ್ಲಿ ʻದಿಲ್ ಬಿ ತೇರಾ ಹಮ್ ಬಿ ತೇರೆʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ʻಶೋಲೆʼ ಸಿನಿಮಾ ಮೂಲಕ ದೇಶಾದ್ಯಂತ ಹೆಸರು ಮಾಡಿದರು. ಇವರ ಕಲಾ ಸೇವೆಗೆ 2012ರಲ್ಲಿ ಪದ್ಮ ಭೂಷಣ ಪ್ರಶಸ್ತಿಯೂ ಒಲಿದುಬಂದಿತು.

ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಗೋವಿಂದ, ರಿತೇಶ್‌ ದೇಶ್‌ಮುಖ್‌, ಜೆನಿಲಿಯಾ ದೇಶ್‌ಮುಖ್‌, ಅಮೀಷಾ ಪಟೇಲ್‌ ಸೇರಿದಂತೆ ಸ್ಟಾರ್‌ ನಟ-ನಟಿಯರು ಮುಂಬೈನ್‌ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿ ಧರ್ಮೇಂದ್ರ ಅವರ ಆರೋಗ್ಯವನ್ನ ವಿಚಾರಿಸಿದ್ದರು. ಇದಾದ ಬಳಿಕ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಮಾಡಿಸಿ, ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು.

ಧರ್ಮೇಂದ್ರ ಅವರ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್ ಕೂಡಾ‌ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ.

ಸಿನಿಮಾ ರಂಗಕ್ಕೆ ಇವರು ನೀಡಿರುವ ಕೊಡುಗೆ ಅಪಾರ, 300ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದ ಧರ್ಮೇಂದ್ರ ʻಶೋಲೆʼ, ʻಚುಪ್ಕೆ ಚುಪ್ಕೆʼ, ʻಸೀತಾ ಔರ್ ಗೀತಾʼ ದಂತಹ ಸೂಪರ್ ಹಿಟ್ ಸಿನಿಮಾಗಳು ಮನೆ ಮಾತಾಗಿವೆ.

ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’ ಧರ್ಮೇಂದ್ರ ಅವರ ನಟನೆಯ ಕೊನೆಯ ಚಿತ್ರ. ಇದು ಡಿಸೆಂಬರ್‌ 25ರಂದು ತೆರೆ ಕಾಣಬೇಕಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ ನಟಿಸುತ್ತಿದ್ದಾರೆ.

ಬಾಲಿವುಡ್ ದಿಗ್ಗಜ ಧರ್ಮೇಂದ್ರ ‌ವಿಧಿವಶ Read More

ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ:9 ಸಾವು

ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ, ಒಂಭತ್ತು ಮೃತಪಟ್ಟಿದ್ದಾರೆ.

ಈ ಸ್ಪೋಟದಲ್ಲಿ 27 ಜನರು ಗಾಯಗೊಂಡಿದ್ದು‌ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು.

ಆ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದ್ದು, ಒಂಭತ್ತು ಜನರು ಮೃತಪಟ್ಟು 27 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರು ಪೊಲೀಸರು ಮತ್ತು ವಿಧಿವಿಜ್ಞಾನ ಅಧಿಕಾರಿಗಳು.

ಬಂಧಿತ ವೈದ್ಯ ಮುಜಮ್ಮಿಲ್ ಗನೈ ಅವರ ಬಾಡಿಗೆ ನಿವಾಸದಿಂದ ವಶಪಡಿಸಿಕೊಂಡ 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳ ಭಾಗವಾಗಿರುವ ಈ ವಸ್ತುವನ್ನು ನಡೆಯುತ್ತಿರುವ ತನಿಖೆಯ ಭಾಗವಾಗಿ ಮಾದರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ:9 ಸಾವು Read More

ಮೋದಿ,ನಿತೀಶ್‌ ಅಭಿವೃದ್ಧಿಪರ ಆಡಳಿತ;ಎನ್‌ಡಿಎಗೆ ಗೆಲುವಿನ ಹಾರ: ಯದುವೀರ್‌

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಅಭಿವೃದ್ಧಿಪರ ಆಡಳಿತಕ್ಕೆ ಬಿಹಾರದ ಜನತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಅಭೂತಪೂರ್ವ ಜಯದ ಹಾರ ತೊಡಿಸಿದ್ದಾರೆ ಎಂದು ಸಂಸದ ಯದುವೀರ ಒಡೆಯರ್ ತಿಳಿಸಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು, ಬಿಜೆಪಿ ನೇತೃತ್ವದ ಮೈತ್ರಿಕೂಟದ ದಾಖಲೆಯ ಗೆಲುವು ಸ್ಮರಣೀಯ ಎಂದು ಹೇಳಿದ್ದಾರೆ.

ವಿಕಸಿತ ಭಾರತಕ್ಕೆ ಮೋದಿ ಅವರ ದೃಢ ಸಂಕಲ್ಪ ಮತ್ತು ಬಿಹಾರದಲ್ಲಿ ಕೈಗೊಂಡ ಅಭಿವೃದ್ಧಿಪರ ಯೋಜನೆಗಳು ಬಿಜೆಪಿಗೆ ಕೈ ಹಿಡಿದಿವೆ. ಬಿಜೆಪಿ ಪರವಾಗಿ ನಾನು ಬಿಹಾರ ಜನರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು ಮತಚೋರಿ ಎಂಬ ಸುಳ್ಳಿನ ಕಥೆಯನ್ನು ಹೇಳಿಕೊಂಡು ಕಾಲ ಕಳೆಯುತ್ತಿದೆ.ಆದರೆ ಬಿಜೆಪಿ-ಜೆಡಿಯು ಜನಪರ ಕೆಲಸಗಳನ್ನು ಕೈಗೊಳ್ಳುತ್ತಿದೆ. ಇದೇ ನಮ್ಮ ಮೈತ್ರಿಕೂಟಕ್ಕೂ ಮಹಾ ಘಟಬಂಧನಕ್ಕೆ ಇರುವ ವ್ಯತ್ಯಾಸ ಎಂದು ಯದುವೀರ್‌ ತಿಳಿಸಿದ್ದಾರೆ.

ದೇಶದಲ್ಲಿ ನರೇಂದ್ರ ಮೋದಿ ಪರ ಅಲೆ ಹೇಗಿದೆ ಎಂಬುದು ಇದರಿಂದ ಮತ್ತೊಮ್ಮೆ ಸಾಬೀತಾಗುತ್ತದೆ. ನಮ್ಮ ಬಿಜೆಪಿ ಸರ್ಕಾರದಿಂದ ದೇಶಕ್ಕೆ ಇನ್ನಷ್ಟು ಹೊಸ ಹೊಸ ಕೊಡುಗೆಗಳು ದೊರೆಯಲಿದೆ. ಕರ್ನಾಟಕದಲ್ಲೂ ಮುಂದಿನ ದಿನಗಳಲ್ಲಿ ಕೇಸರಿ ಅಲೆ ಏಳಲಿದೆ ಎಂದು ಯದುವೀರ್‌ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೋದಿ,ನಿತೀಶ್‌ ಅಭಿವೃದ್ಧಿಪರ ಆಡಳಿತ;ಎನ್‌ಡಿಎಗೆ ಗೆಲುವಿನ ಹಾರ: ಯದುವೀರ್‌ Read More

ಅಲ್ ಫಲಾಹ್ ವಿವಿ, ಕ್ಯಾಂಪಸ್‌​ ಮೇಲೆ ಪೊಲೀಸರ ಹದ್ದಿನ ಕಣ್ಣು

ಫರಿದಾಬಾದ್(ಹರಿಯಾಣ): ಕೆಂಪು ಕೋಟೆ ಬಳಿ ನಡೆದ ಕಾರು ಸ್ಪೋಟಕ್ಕೆ ಸಂಬಂಧಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಹರಿಯಾಣದ ಫರಿದಾಬಾದ್​ ಜಿಲ್ಲೆಯ ಮುಸ್ಲಿಂ ಪ್ರಾಬಲ್ಯದ ಧೌಜ್ ಗ್ರಾಮದಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ 76 ಎಕರೆ ಕ್ಯಾಂಪಸ್‌​ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಇಲ್ಲಿನ ಬೋಧಕ ಸಿಬ್ಬಂದಿ ಪಾಕಿಸ್ತಾನ ಬೆಂಬಲಿತ ಹ್ಯಾಂಡ್ಲರ್​ಗಳ ನಿರ್ದೇಶನದಂತೆ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದ್ದು, ತನಿಖೆ ಚುರುಕುಗೊಂಡಿದೆ.

ಅನೇಕ ಶಿಕ್ಷಣ ತಜ್ಞರ ಪ್ರಕಾರ, ಆರಂಭಿಕ ವರ್ಷದಲ್ಲಿ ಅಲ್​ ಫಲಾಹ್​ ವಿಶ್ವವಿದ್ಯಾಲಯ ಆಲಿಘರ್​ ಮುಸ್ಲಿಂ ಯುನಿವರ್ಸಿಟಿ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾಗಳಿಗೆ ಅತ್ಯುತ್ತಮ ಪರ್ಯಾಯ ವಿಶ್ವವಿದ್ಯಾಲಯವಾಗಿತ್ತು.

ಈ ವಿಶ್ವವಿದ್ಯಾಲಯ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಿಂದ 30 ಕಿ.ಮೀ ದೂರದಲ್ಲಿದ್ದು, ಇದರ ನಿರ್ವಹಣೆಯನ್ನು 1995ರಲ್ಲಿ ಸ್ಥಾಪಿಸಲಾದ ಅಲ್​ ಫಲಾಹ್​ ಚಾರಿಟಬಲ್​ ಟ್ರಸ್ಟ್​ ನಡೆಸುತ್ತಿದೆ.

ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಮೂರು ಕಾಲೇಜುಗಳಿವೆ. ಅಲ್ ಫಲಾಹ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಬ್ರೌನ್ ಹಿಲ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಮತ್ತು ಅಲ್ ಫಲಾಹ್ ಸ್ಕೂಲ್ ಆಫ್ ಎಜುಕೇಶನ್ ಆ್ಯಂಡ್ ಟ್ರೈನಿಂಗ್ ಇಲ್ಲಿದೆ. ವಿಶ್ವವಿದ್ಯಾನಿಲಯವು 650 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯನ್ನೂ ಹೊಂದಿದ್ದು, ರೋಗಿಗಳಿಗೆ ಇಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ತನಿಖಾಧಿಕಾರಿಗಳು ವಿಶ್ವವಿದ್ಯಾಲಯದಲ್ಲಿ ತೀವ್ರ ತಪಾಸಣೆ ನಡೆಸಿದ್ದು, ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಬೋಧನೆ ಮಾಡುತ್ತಿದ್ದ ಡಾ.ಮುಜಮ್ಮಿಲ್​ ಸೇರಿದಂತೆ ಹಲವು ವೈದ್ಯರನ್ನು ಬಂಧಿಸಲಾಗಿದೆ. ಮಂಗಳವಾರ ಇಲ್ಲಿ ಧರ್ಮ ಬೋಧನೆ ಮಾಡುತ್ತಿದ್ದ ಮೌಲ್ವಿಯನ್ನು ಕೂಡಾ ಪೊಲೀಸರು ವಶಕ್ಕೆ ಪಡೆದು‌ ವಿಚಾರಣೆಗೆ ಒಳಪಡಿಸಿದ್ದಾರೆ.

ಅಲ್ ಫಲಾಹ್ ವಿವಿ, ಕ್ಯಾಂಪಸ್‌​ ಮೇಲೆ ಪೊಲೀಸರ ಹದ್ದಿನ ಕಣ್ಣು Read More

ದೆಹಲಿ ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಬಳಿ ಕಾರು ಸ್ಫೋಟ:8 ಬಲಿ

ನವದೆಹಲಿ: ರಾಷ್ಟ್ರ ರಾಜ್ಯದಾನಿ ದೆಹಲಿಯ ಕೆಂಪು ಕೋಟೆ ಸಮೀಪ ಕಾರೊಂದು ಸ್ಪೋಟಗಂಡಿದ್ದು ಇಡೀ ರಾಷ್ಟ್ರ ಬೆಚ್ಚಿಬಿದ್ದಿದೆ.

ಕೆಂಪುಕೋಟೆ ಸಮೀಪ ಲಾ ಕಿಲಾ ಮೆಟ್ರೊ ನಿಲ್ದಾಣದ ಗೇಟ್‌ ನಂ.1ರಲ್ಲಿ ನಿಲ್ಲಿಸಿದ್ದ ಕಾರ್‌ ಸ್ಫೋಟಗೊಂಡಿದ್ದು,‌8 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ 9 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಯ‌ ಜ್ವಾಲೆ ಬಹಳ ಎತ್ತರದವರೆಗೆ ಚುಮ್ಮಿದೆ ದಟ್ಟ‌ ಹೊಗೆ ಆವರಿಸಿದೆ.ಇಡೀ ದೆಹಲಿಯ‌ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

‘ಲಾ ಕಿಲಾ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ,ಸ್ಪೋಟದ ತೀವ್ರ ತೆಗೆ ಅಕ್ಕಪಕ್ಕದಲ್ಲಿದ್ದ ಕಾರುಗಳು, ಇತರ ವಾಹನಗಳಿಗೂ ಬೆಂಕಿ ತಗುಲಿದೆ ಅಕ್ಕ,ಪಕ್ಕದ ಕಟ್ಟಡದ‌ ಗಾಜುಗಳು ಒಡೆದಿದೆ.ಸ್ಥಳದಲ್ಲಿ ಏನಾಗುತ್ತಿದೆ ಎಂಬ ಅರಿವಿಲ್ಲದೆ ಜನ ಗಾಬರಿಯಿಂದ‌ ಓಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು,ಕೆಂಪುಕೋಟೆ ಸುತ್ತಮುತ್ತ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಕಾರು ಸ್ಫೋಟವಾದ ಬೆನ್ನಲ್ಲೇ ದೆಹಲಿಯಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ.

ಸಾವಿನ‌ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಬಳಿ ಕಾರು ಸ್ಫೋಟ:8 ಬಲಿ Read More

ಪವಿತ್ರಾ ಗೌಡ ಅರ್ಜಿ ವಜಾ

ನವದೆಹಲಿ: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿನಲ್ಲಿರುವ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದನ್ನು ಬದಿಗೆ ಸರಿಸಿ ಆಗಸ್ಟ್‌ 14ರಂದು ಮಾಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್‌ ಮಹಾದೇವನ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಪವಿತ್ರಾ ಗೌಡ, ನಟ ದರ್ಶನ್‌ ಸೇರಿದಂತೆ ಏಳು ಮಂದಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು 14-8-2025ರಂದು ಪುರಸ್ಕರಿಸಲಾಗಿತ್ತು.

ಈ ತೀರ್ಪು ಮತ್ತು ಸಂಬಂಧಿತ ದಾಖಲೆಗಳನ್ನು ಅತ್ಯಂತ ಜಾಗರೂಕತೆಯಿಂದ ಪರಿಶೀಲಿಸಲಾಗಿದೆ.ಹಾಗಾಗಿ ಆ ತೀರ್ಪನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ,ಆದ್ದರಿಂದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಪವಿತ್ರಾ ಗೌಡ ಅರ್ಜಿ ವಜಾ Read More

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: 24 ಸಾವು

ಹೈದರಾಬಾದ್: ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್‌ ಹಾಗೂ ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 24 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ತೆಲಂಗಾಣದ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಆರ್‌ಟಿಸಿ ಬಸ್ ಹಾಗೂ ಟ್ರಕ್ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಪರಿಣಾಮ ಬಸ್‌ನಲ್ಲಿ 24 ಮಂದಿ ಸಾವನ್ನಪ್ಪಿದ್ದು, 25 ಜನ ಗಾಯಗೊಂಡಿದ್ದಾರೆ

ಜಲ್ಲಿಕಲ್ಲು ತುಂಬಿದ್ದ ಟ್ರಕ್ ಎದುರಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಅತೀ ವೇಗವಾಗು ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದ್ದು, ಇದೇ ಪ್ರದೇಶದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಮೃತಪಟ್ಟಿದ್ದಾರೆ.

ಒಂದು ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಸಾವನ್ನಪ್ಪಿದ್ದಾರೆ, 24 ಜನರು ಗಾಯಗೊಂಡಿದ್ದು 5 ಜನರ ಸ್ಥಿತಿ ಗಂಭೀರವಾಗಿತ್ತು,ಅವರಲ್ಲಿ ನಾಲ್ಕು ಮಂದಿ‌‌ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ,ಅಲ್ಲದೆ ಮೃತರ ಕುಟಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: 24 ಸಾವು Read More

ಆಂದ್ರದಲ್ಲಿ ಘೋರ ದುರಂತ:10 ಮಂದಿ ದುರ್ಮರಣ

ಆಂದ್ರಪ್ರದೇಶ,ನವೆಂಬರ್, ೧:
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಇಂದು ಏಕಾದಶಿ ಹಿನ್ನೆಲೆಯಲ್ಲಿ ಅತಿ ಹೆಚ್ಚು ಭಕ್ತ ಸಮೂಹ ಸೇರಿತ್ತು.ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆಯರ ನಡುವೆ ಮಾತಿಗೆ ಮಾತು ನಡೆದು ತಳ್ಳಾಟವಾಗಿದೆ.
ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಕ್ಕೂ ಮಂದಿ ಮೃತಪಟ್ಟಿದ್ದು,ಹಕವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದುಃಖ ವ್ಯಕ್ತಪಡಿಸಿದ್ದಾರೆ.

ಸುಮಾರು 3,000ರಿಂದ 5,000 ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಬಹುದಾದ ದೇವಾಲಯದ ಆವರಣದಲ್ಲಿ 25,000ಕ್ಕೂ ಹೆಚ್ಚು ಜನರು ಪಾದಯಾತ್ರೆಯಲ್ಲಿ ಬಂದು ಸೇರಿದ್ದರು ಈ ವೇಳೆ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದ್ರದಲ್ಲಿ ಘೋರ ದುರಂತ:10 ಮಂದಿ ದುರ್ಮರಣ Read More

ಹೊತ್ತಿ ಉರಿದ ಬಸ್: 20 ಮಂದಿ ಸಾವು

ಹೈದರಾಬಾದ್‌: ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಬಿದ್ದು‌ 20 ಮಂದಿ ಘೋರವಾಗಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಬಸ್ ಬೆಂಕಿಗೆ ಆಹುತಿಯಾಗಿದ್ದು, 20 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 21 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಕೆಳಗೆ ಬೈಕ್ ಕೆಳಗೆ ಸಿಲುಕಿಕೊಂಡು, ಕೂಡಲೇ ಬೆಂಕಿ ಹತ್ತಿಕೊಂಡಿದೆ.ತಕ್ಷಣ ಇಡೀ ಬಸ್ಸನ್ನು ಬೆಂಕಿಯ ಜ್ವಾಲೆ ಆವರಿಸ ಸುಟ್ಟು ಕರಕಲಾಗಿದೆ.

ಈ ಬೆಂಕಿ ಅವಘಡದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಹೊತ್ತಿ ಉರಿದ ಬಸ್: 20 ಮಂದಿ ಸಾವು Read More

ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮುರ್ಮು

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿದ್ದು,ಇತಿಹಾಸ‌ ಬರೆದಿದ್ದಾರೆ.

ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಮೊದಲ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ.

ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.

ಶಬರಿಮಲೆಗೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮುರ್ಮು Read More