ನಾಗನಾರ್ ಉಕ್ಕು ಕಾರ್ಖಾನೆಯಲ್ಲಿನ ಸಮಸ್ಯೆ ಸರಿಪಡಿಸುತ್ತೇವೆ: H.D.K

ರಾಯಪುರ (ಛತ್ತೀಸಗಢ): ನಾಗನಾರ್ ನಲ್ಲಿರುವ ರಾಷ್ಟ್ರೀಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಕೆಲವು ಸಮಸ್ಯೆಗಳಿವೆ. ಶೀಘ್ರವೇ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ನಾಗನಾರ್ ನಲ್ಲಿರುವ ರಾಷ್ಟ್ರೀಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ರಾಯಪುರಕ್ಕೆ ಆಗಮಿಸಿದ ವೇಳೆ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಉಕ್ಕು ಸಂಗ್ರಹ, ಸಾಗಣೆ,ಮಾರುಕಟ್ಟೆ ಸೇರಿ ಕೆಲ ಸಮಸ್ಯೆಗಳನ್ನು ಕಾರ್ಖಾನೆ ಎದುರಿಸುತ್ತಿದೆ,ಈ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ್ದೇನೆ,ಸಂಬಂಧಪಟ್ಟ ಸಚಿವಾಲಯ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುತ್ತೇನೆ ಎಂದು ತಿಳಿಸಿದರು.

ನಾಗನಾರ್ ಕಾರ್ಖಾನೆ ದೇಶದಲ್ಲಿ ಅತ್ಯುತ್ತಮ ಉಕ್ಕು ತಯಾರಿಕಾ ಘಟಕಗಳಲ್ಲಿ ಒಂದು. ಆರಂಭವಾದ ಒಂದೇ ವರ್ಷದಲ್ಲಿ ಒಂದು ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಿದೆ. ಹೀಗಾಗಿ ಈ ಘಟಕಕ್ಕೆ ಉತ್ಪಾದನಾ ಕ್ಷಮತೆ ಇದೆ ಆದ್ದರಿಂದ ಕೆಲ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ ಡಿ ಕೆ ಹೇಳಿದರು.

ರಾತ್ರಿ ರಾಯಪುರದಲ್ಲೇ ವಾಸ್ತವ್ಯ ಹೂಡಿ ಮಂಗಳವಾರ ಬೆಳಗ್ಗೆ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ.

ನಾಗನಾರ್ ಉಕ್ಕು ಕಾರ್ಖಾನೆಯಲ್ಲಿನ ಸಮಸ್ಯೆ ಸರಿಪಡಿಸುತ್ತೇವೆ: H.D.K Read More

ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಶನಿವಾರ ಮುಂಜಾನೆ ಮೂವರು ಉಗ್ರರು ಹತರಾಗಿದ್ದಾರೆ.

ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯ ಪ್ರದೇಶಗಳನ್ನು ಭದ್ರತಾ ಪಡೆ ಯೋಧರು ಸುತ್ತುವರೆದು ಕಾರ್ಯಾಚರಣೆ ಪ್ರಾರಂಭಿಸಿದರು.

ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿ ಅದರಲ್ಲಿ ಇಬ್ಬರು ಯೋಧರು ಹುತಾತ್ಮರಾದರೆ ಮತ್ತಿಬ್ಬರು ಗಾಯಗೊಂಡಿದ್ದಾರೆ.

ಈ ವೇಳೆ ಪ್ರತಿದಾಳಿ ನಡೆಸಿದ ಯೋಧರು ಶನಿವಾರ ಮುಂಜಾನೆ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್ Read More

ರಾಹುಲ್‌ ಹೇಳಿಕೆಗೆ ಅಮಿತ್‌ ಶಾ ಟೀಕೆ

ನವದೆಹಲಿ: ರಾಹುಲ್‌ ಗಾಂಧಿ ಹೇಳಿಕೆಯಿಂದ ಮತ್ತೊಮ್ಮೆ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ.

ಮೀಸಲಾತಿ ವಿಚಾರದ ಬಗ್ಗೆ ರಾಹುಲ್‌ ಗಾಂಧಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶಾ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಜರಿದಿದ್ದಾರೆ.

ಕಾಶ್ಮೀರದಲ್ಲಿ ದೇಶ ವಿರೋಧಿ ನ್ಯಾಷನಲ್‌ ಕಾನ್ಫರೆನ್ಸ್‌ ಬೆಂಬಲಿಸಿರುವ ಕಾಂಗ್ರೆಸ್‌ ಈಗ ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿದೆ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭಾವನೆಗಳನ್ನು ಘಾಸಿಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್‌ನ ರಾಜಕೀಯವನ್ನು ಬಯಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಇರುವವರೆಗೂ ಯಾರೊಬ್ಬರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ಗೊಂದಲಕ್ಕೀಡಾಗಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಕಟುವಾಗಿ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಜಾರ್ಜ್‌ಟೌನ್‌ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ನಡೆಸಿದ್ದಾಗ ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ರಾಹುಲ್‌ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚನೆ ಮಾಡಲಿದೆ. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದು ಉತ್ತರಿಸಿದ್ದನ್ನು ಸ್ಮರಿಸಬಹುದು.

ರಾಹುಲ್‌ ಹೇಳಿಕೆಗೆ ಅಮಿತ್‌ ಶಾ ಟೀಕೆ Read More

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ:ಎಂ.ಬಿ.ಪಾಗೆ ಹೆಚ್ ಡಿ ಕೆ ಭರವಸೆ

ನವದೆಹಲಿ: ಕರ್ನಾಟಕದ ಕೈಗಾರಿಕೆ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ರಾಜ್ಯದ ಕೈಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಈ ಭರವಸೆ ಸಿಕ್ಕುದೆ.

ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಎಂ.ಬಿ.ಪಾಟೀಲ್ ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೆಚ್ ಡಿ ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಪಾಟೀಲ್ ಅವರಿಂದ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು; ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ.ಪಾಟೀಲ್ ಅವರಿಗೆ ಹೇಳಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೆಚ್ ಎಂ ಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು.

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ, ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ:ಎಂ.ಬಿ.ಪಾಗೆ ಹೆಚ್ ಡಿ ಕೆ ಭರವಸೆ Read More

ಆಟೋ ಬಿಡಿಭಾಗಗಳ ಮೇಲಿನ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಿ-ಹೆಚ್ ಡಿ ಕೆ

ನವದೆಹಲಿ: ಆಟೋ ಬಿಡಿಭಾಗಗಳ ಮೇಲೆ ಇತರೆ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂದು ಅಟೋ ಉದ್ಯಮಕ್ಕೆ ಕೇಂದ್ರ ಭಾರೀ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನವದೆಹಲಿಯಲ್ಲಿ ಎಸಿಎಂಎ 64ನೇ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,ಈ ನಿಟ್ಟಿನಲ್ಲಿ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.

ಅಟೋ ಉದ್ಯಮ ಬಿಡಿಭಾಗಗಳನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲೇಬೇಕು, ಹಾಗೂ ಫೇಮ್ 3 ಜಾರಿಗೆ ಬರುವ ತನಕ ಇಎಂಪಿಎಸ್ ಯೋಜನೆ ಮುಂದುವರಿಸಲಾಗುವುದು ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ದೇಶೀಯ ಆಟೋ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅಲ್ಲದೆ; ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ, ಇಷ್ಟಾದರೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ಕ್ಷೇತ್ರದ ರಪ್ತು ವಹಿವಾಟು ಬೆಳವಣಿಗೆಯನ್ನು ಕಂಡಿದೆ ಎಂದು ಹೆಚ್ ಡಿ ಕೆ ತಿಳಿಸಿದರು.

ಈ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ, ಉತ್ಪಾದನಾ ಸಂಪರ್ಕ ಉಪಕ್ರಮ ಗಳನ್ನು ಸಾಕಷ್ಟು ಕೈಗೊಂಡಿದೆ. ಈ ಮೂಲಕ 74,850 ರೂ ಕೋಟಿ ಹೂಡಿಕೆಯನ್ನು ಉತ್ತೇಜಿಸಲಾಗಿದೆ. ಈ ಪೈಕಿ 17,836 ರೂ ಮೊತ್ತ 2024 ಮಾರ್ಚ್ ಹೊತ್ತಿಗೆ ಹೂಡಿಕೆ ಆಗಿದೆ. ಇದರ ಪರಿಣಾಮವಾಗಿ 30,500 ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. ಇದು ಉದ್ಯಮಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ ಎಂದು ಸಚಿವರು ಹೇಳಿದರು.

ಫೇಮ್ 3 ಯೋಜನೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು. ಅದುವರೆಗೂ ಆಟೋ ಕ್ಷೇತ್ರಕ್ಕೆ ಉತ್ತಜನ ನೀಡಲು EMPS ಯೋಜನೆಯನ್ನು ಮುಂದುವರಿಸಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಸಮಾವೇಶದಲ್ಲಿ ಎಸಿಎಂಎ ಅಧ್ಯಕ್ಷೆ ಶ್ರದ್ಧಾ ಸೂರಿ ಮರ್ವಾಹ್, ಎಸ್ ಐ ಎ ಎಂ ಅಧ್ಯಕ್ಷ ವಿನೋದ ಅಗರ್ವಾಲ್, ಸಿಐಐ ಅಧ್ಯಕ್ಷ ಮತ್ತು ಐಟಿಸಿ ವ್ಯವಸ್ಥಾಪಕ ನಿರ್ದೇಶಕ ಸಂಜೀವ ಪೂರಿ, ಮಾರುತಿ ಸುಜುಕಿ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಹಿಸಾಶಿ ತಕೇಚಿ ಮತ್ತು ಎಸ್ ಸಿ ಎಎಲ್ ಇ ಅಧ್ಯಕ್ಷ ಡಾ. ಪವನ್ ಗೋಯಂಕ ಮತ್ತಿತರ ಉದ್ಯಮದ ಗಣ್ಯರು ಹಾಜರಿದ್ದರು.

ಆಟೋ ಬಿಡಿಭಾಗಗಳ ಮೇಲಿನ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಿ-ಹೆಚ್ ಡಿ ಕೆ Read More

ಸಂಸತ್ ಮೇಲೆ ದಾಳಿ: ಮೈಸೂರಿನ ಮನೋರಂಜನ್ ಪ್ರಮುಖ ಸಂಚುಕೋರ

ನವದೆಹಲಿ: ಕಳೆದ ವರ್ಷ ಸಂಸತ್ ಮೇಲೆ ಸ್ಮೋಕ್ ದಾಳಿ ನಡೆಸಿದ್ದ ಆರೋಪಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರಲು ಬಯಸಿದ್ದರು ಎಂಬ ಸ್ಫೋಟಕ ಅಂಶ ಬಯಲಾಗಿದೆ.

ಸಂಸತ್ ನಲ್ಲಿ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 1 ಸಾವಿರ ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಪರಿಣಾಮಕಾರಿಯಾಗಿಲ್ಲ ಎಂದು ನಂಬಿದ್ದ ಆರೋಪಿಗಳು ಅದನ್ನು ಬದಲಿಸಬೇಕು ಎಂಬ ಉದ್ದೇಶ ಹೊಂದಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಯೋಜನೆ ಕಾರ್ಯಗತ ಗೊಳಿಸುವ ಮೊದಲು ಸುಮಾರು ಎರಡು ವರ್ಷಗಳ ಕಾಲ ಪ್ಲ್ಯಾನ್ ಮಾಡಿದ್ದರು.

ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಸ್ನೇಹಿತರಾಗಿದ್ದ ಇವರು ಮೈಸೂರು, ಗುರುಗ್ರಾಮ, ದೆಹಲಿ ಸೇರಿ ಐದು ಕಡೆ ಸಭೆ ನಡೆಸಿ ಸಂಸತ್ ಮೇಲೆ ದಾಳಿಗೆ ಯೋಜನೆ ರೂಪಿಸಿದ್ದರು. ಈ ಮೂಲಕ ಶೀಘ್ರದಲ್ಲಿ ಜಾಗತಿಕವಾಗಿ ಖ್ಯಾತಿ ಪಡೆಯಲು ಬಯಸಿದ್ದರು.

ಮೈಸೂರಿನ ಮನೋರಂಜನ್ ಪ್ರಕರಣದ ಕಿಂಗ್ ಪಿನ್. ಮೈಸೂರಿನಲ್ಲೇ ಮನೋರಂಜನ್ ನೇತೃತ್ವದಲ್ಲಿ ಮೊದಲ ಸಭೆ ನಡೆದಿತ್ತು. ಮೊದಲ ಸಭೆಯಲ್ಲಿ ಹತ್ತು ಮಂದಿ ಭಾಗಿಯಾಗಿದ್ದರು ಎಂದು ತಿಳಿಸಲಾಗಿದೆ.

ಸಭೆಯಲ್ಲಿ ಹಿಂಸಾತ್ಮಕ ವಿಡಿಯೋ ತೋರಿಸಿ, ಪ್ರತ್ಯೇಕ ಸಂಘಟನೆ ಹುಟ್ಟುಹಾಕುವ ಯೋಜನೆಯನ್ನು ಮನೋರಂಜನ್ ವಿವರಿಸಿದ್ದ. ಎರಡನೇ ಸಭೆಯನ್ನು ಹರಿಯಾಣದ ಗುರುಗ್ರಾಮದಲ್ಲಿ ನಡೆಸಲಾಗಿತ್ತು. ಇದರಲ್ಲಿ ಏಳು ಮಂದಿ ಭಾಗಿಯಾಗಿದ್ದರು.

ತಂಡಕ್ಕೆ ಮಹಿಳೆಯರನ್ನು ಸೇರಿಕೊಳ್ಳುವ ಉದ್ದೇಶದಿಂದ ನೀಲಂಳನ್ನು ಸೇರಿಸಿಕೊಳ್ಳಲಾಗಿತ್ತು.

ಮೂರನೇ ಸಭೆಯನ್ನು ದೆಹಲಿಯಲ್ಲಿ ನಡೆಸಿದ್ದರು. ಕಡೆಯದಾಗಿ ಇಂಡಿಯಾ ಗೇಟ್ ಬಳಿ ಸೇರಿ ಅಲ್ಲಿಂದ ಸ್ಮೋಕ್ ಕ್ಯಾನ್ ಬಳಸಿ ದಾಳಿ ಮಾಡಲು ಸಂಸತ್ ಗೆ ತೆರಳಿದ್ದರು.

ಅಲ್ಟ್ರಾ ಮಾವೋವಾದಿ-ಪ್ರೇರಿತ ಚಿಂತನೆಯಿಂದ ಪ್ರಚೋದನೆಗೆ ಒಳಗಾಗಿದ್ದ ಮನೋರಂಜನ್ ಈ ವ್ಯವಸ್ಥೆಯನ್ನು ಬದಲಾಯಿಸಲು ಮುಂದಾಗಿದ್ದ.

ಸಂಸತ್ ಮೇಲೆ ದಾಳಿ: ಮೈಸೂರಿನ ಮನೋರಂಜನ್ ಪ್ರಮುಖ ಸಂಚುಕೋರ Read More

ಆರ್‌ಜಿ ಕಾರ್ ಆಸ್ಪತ್ರೆಯ ಡಾ.ಸಂದೀಪ್ ಘೋಷ್‌ ಬಂಗಲೆ ಮೇಲೆ ಇಡಿ ದಾಳಿ

ಕೋಲ್ಕತಾ: ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್‌ಗೆ ಸೇರಿದ ಐಷಾರಾಮಿ‌ ಬಂಗಲೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪಶ್ಚಿಮ‌ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಐಷಾರಾಮಿ ಬಂಗಲೆಯನ್ನು ಇಡಿ ಅಧಿಕಾರಿಗಳು ಪತ್ತೆ ಮಾಡಿ ರೈಡ್ ಮಾಡಿದ್ದು ಸಂಸ್ಥೆಯಲ್ಲಿನ ಆರ್ಥಿಕ ಅಕ್ರಮಗಳ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸಿನ ಅಕ್ರಮಗಳ ಕುರಿತು ಜಾರಿ ಇಡಿ ತನಿಖೆ ನಡೆಸುತ್ತಿದೆ.

ಅಲ್ಲಿನ ತರಬೇತಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಎರಡು ಅಂತಸ್ತಿನ ಐಶಾರಾಮಿ ಬಂಗಲೆಗೆ ತನಿಖಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಈ ಆಸ್ತಿ ಮಾಜಿ ಆರ್‌ಜಿ ಕರ್ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಮತ್ತು ಅವರ ಪತ್ನಿ ಸಂಗೀತಾ ಘೋಷ್ ಅವರಿಗೆ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಕ್ಯಾನಿಂಗ್‌ನಲ್ಲಿರುವ ಐಷಾರಾಮಿ ಬಂಗಲೆಯ ಸುತ್ತ ನೂರಾರು ಎಕರೆ ಖಾಲಿ ಭೂಮಿ ಕೂಡಾ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್‌ಜಿ ಕಾರ್ ಆಸ್ಪತ್ರೆಯ ಡಾ.ಸಂದೀಪ್ ಘೋಷ್‌ ಬಂಗಲೆ ಮೇಲೆ ಇಡಿ ದಾಳಿ Read More

ಸ್ವಪಕ್ಷದ ನಾಯಕಿ ಮೇಲೆ ಲೈಂಗಿಕ ದೌರ್ಜನ್ಯ: ಶಾಸಕ ಸಸ್ಪೆಂಡ್

ಆಂದ್ರಪ್ರದೇಶ: ತಮ್ಮದೇ ಪಕ್ಷದ ನಾಯಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಶಾಸಕ ಕೊನೇಟಿ ಆದಿಮೂಲಂ ಅವರನ್ನು ಅಮಾನತು ಗೊಳಿಸಲಾಗಿದೆ.

ತಮ್ಮದೇ ಪಕ್ಷದ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವೀಡಿಯೊ ವೈರಲ್ ಆದ ಬೆನ್ನಲ್ಲೇ ಆದಿಮೂಲಂ ಮೇಲೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಂಡಿದೆ.

ಕಳೆದ ಜುಲೈನಲ್ಲಿ ತಿರುಪತಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಮೂರು ಬಾರಿ ಶಾಸಕ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.

ಕೃತ್ಯ ಬಹಿರಂಗಪಡಿಸಿದರೆ ನನ್ನ ಮತ್ತು ನನ್ನ ಕುಟುಂಬದವರನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಕೂಡಾ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾಳೆ.

ಪ್ರಕರಣ ವೈರಲ್ ಆಗುತ್ತಿದ್ದಂತೆ ರಾಜಕೀಯ ಆರೋಪ, ಪ್ರತ್ಯಾರೋಪಗಳು ಪ್ರಾರಂಭವಾಗಿವೆ.ಆದರೆ ಈವರೆಗೆ ಎಫ್ಐಆರ್ ದಾಖಲಾಗಿಲ್ಲ ಮುಂದೆ ಏನು ಎಂಬುದನ್ನು ಕಾದು ನೋಡಬೇಕಿದೆ.

ಸ್ವಪಕ್ಷದ ನಾಯಕಿ ಮೇಲೆ ಲೈಂಗಿಕ ದೌರ್ಜನ್ಯ: ಶಾಸಕ ಸಸ್ಪೆಂಡ್ Read More

6 ಮಾವೋವಾದಿಗಳ ಹತ್ಯೆ: ಇಬ್ಬರು ಯೋಧರಿಗೆ ಗಾಯ

ಹೈದರಾಬಾದ್: ತೆಲಂಗಾಣ ರಾಜ್ಯದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ 6 ಮಂದಿ ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ.

ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.

ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆದು 6 ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ತಿಳಿಸಿದ್ದಾರೆ.

6 ಮಾವೋವಾದಿಗಳ ಹತ್ಯೆ: ಇಬ್ಬರು ಯೋಧರಿಗೆ ಗಾಯ Read More

ಅಕ್ರಮ ಹಣ ವರ್ಗಾವಣೆ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತಿತರರನ್ನು ಜಾರಿ ನಿರ್ದೇಶನಾಲಯ ಸೋಮವಾರ ಬಂಧಿಸಿದೆ.

ರಾಷ್ಟ್ರೀಯ ರಾಜಧಾನಿಯ ಓಖ್ಲಾ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಬೆಳಗ್ಗೆ ಶೋಧ ನಡೆಸಿದ ನಂತರ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್ ಐಆರ್ ಹಾಗೂ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ದೆಹಲಿ ಎಸಿಬಿ ದಾಖಲಿಸಿರುವ ಮತ್ತೊಂದು ಎಫ್ ಐಆರ್ ನಿಂದ ಅಮಾನತುಲ್ಲಾ ಖಾನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ನಲ್ಲಿ ಕೊನೆಯದಾಗಿ ಪ್ರಶ್ನಿಸಿದಾಗಿನಿಂದ ಖಾನ್ ಕನಿಷ್ಠ ಹತ್ತು ಇಡಿ ಸಮನ್ಸ್‌ಗಳಿಂದ ತಪ್ಪಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ Read More