ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದು ಕೆಲಕಾಲ ಆತಂಕ ವುಂಟಾಯಿತು.

ಆ ವ್ಯಕ್ತಿ ಬೆಳಿಗ್ಗೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಿ ಬೆದರಿಕೆಯೊಡ್ಡಿದ್ದ‌ ಇದರಿಂದ ಅಧಿಕಾರಿಗಳೇ ಶಾಕ್ ಗೆ ಒಳಗಾದರು.

ತನಿಖೆ ಸಮಯದಲ್ಲಿ, ಕರೆ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಿದ್ದು, ನಾಗ್ಪುರ ನಗರದ ಸಕ್ಕರ್ದಾರ ಪ್ರದೇಶದ ವಿಮಾ ದವಾಖಾನಾ ಬಳಿಯ ತುಳಸಿ ಬಾಗ್ ರಸ್ತೆಯ ನಿವಾಸಿ ಉಮೇಶ್ ವಿಷ್ಣು ರಾವುತ್ ಎಂಬಾತ ಕರೆ ಮಾಡಿದ್ದಾನೆಂದು ಗೊತ್ತಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಲೊಕೇಶನ್ ಮತ್ತು ತಾಂತ್ರಿಕ ನೆರವಿನಿಂದ ಪೊಲೀಸರು ವಿಮಾ ದವಾಖಾನಾದ ಆವರಣದಿಂದ ರಾವುತ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಳಲಿಸಿ,ವಿಚಾರಣೆಗೆ ಒಳಪಡಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ Read More

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಶಾರುಕ್, ವಿಕ್ರಾಂತ್ ಅತ್ಯುತ್ತಮ ನಟರು

ನವದೆಹಲಿ: 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ಘೋಷಿಸಲಾಗಿದ್ದು, ಬಾಲಿವುಡ್‌ ನಟ ಶಾರುಕ್‌ ಖಾನ್‌ ಮತ್ತು ವಿಕ್ರಾಂತ್‌ ಮೇಸಿ ಅವರು ‘ಆತ್ಯುತ್ತಮ ನಟ’ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ಟ್ರೆಸ್ ಚಟರ್ಜಿ ವರ್ಸಸ್‌ ನಾರ್ವೆ ಚಿತ್ರದ ಅಭಿನಯಕ್ಕಾಗಿ ಬಾಲಿವುಡ್‌ ನಟಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಾರುಕ್‌ ಅವರು ತಮ್ಮ 37 ವರ್ಷಗಳ ವೃತ್ತಿಜೀವನದಲ್ಲಿ ಅತ್ಯುತ್ತಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿರುವುದು ಇದೇ ಮೊದಲು. ‘ಜವಾನ್‌’ ಚಿತ್ರದ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಮುಡಿಗೇರಿದೆ.

ವಿಕ್ರಾಂತ್‌ ಅವರು ‘ಟ್ವೆಲ್ತ್‌ ಫೇಲ್‌’ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ಪಡೆದಿದ್ದಾರೆ.

71ನೇ ರಾಷ್ಟ್ರೀಯ ಪ್ರಶಸ್ತಿ ಇದಾಗಿದ್ದು, ಪುರಸ್ಕೃತರ ಪಟ್ಟಿಯನ್ನು ತೀರ್ಪುಗಾರರ ಮಂಡಳಿಯ ಅಧ್ಯಕ್ಷ, ಚಲನಚಿತ್ರ ನಿರ್ಮಾಪಕ ಅಶುತೋಷ್ ಗೌರಿಕರ್ ಘೋಷಿಸಿದರು.

ವಿಧು ವಿನೋದ್ ಚೋಪ್ರಾ ನಿರ್ದೇಶನದ ‘ಟ್ವೆಲ್ತ್‌ ಫೇಲ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ, ದಿ ಕೇರಳ ಸ್ಟೋರಿ ಚಿತ್ರಕ್ಕಾಗಿ ಸುದಿಪ್ತೋ ಸೇನ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾಗೆ ಅತ್ಯುತ್ತಮ ಮನರಂಜನಾ ಸಿನಿಮಾ ಪ್ರಶಸ್ತಿ ಲಭಿಸಿದೆ.

ಮೇಘನಾ ಗುಲ್ಜಾರ್ ಅವರ ‘ಸ್ಯಾಮ್ ಬಹಾದೂರ್‌’ ಸಿನಿಮಾ ರಾಷ್ಟ್ರೀಯ, ಸಾಮಾಜಿಕ ಮತ್ತು ಪರಿಸರ ಮೌಲ್ಯಗಳನ್ನು ಉತ್ತೇಜಿಸುವ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ.

ಹಿಂದಿ ಸಿನಿಮಾಗಳು ಪ್ರಮುಖ ವಿಭಾಗಗಳಲ್ಲಿ ಪ್ರಾಬಲ್ಯ ಸಾಧಿಸಿದರೆ, ಪ್ರಾದೇಶಿಕ ಸಿನಿಮಾಗಳು ಅತ್ಯುತ್ತಮ ಪೋಷಕ ನಟ, ಪೋಷಕ ನಟಿ ಮತ್ತು ತಾಂತ್ರಿಕ ವಿಭಾಗಗಳಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದುಕೊಂಡವೆ.

ಮಲಯಾಳಂ ಸಿನಿಮಾ ಪೂಕ್ಕಳಂ ಚಿತ್ರದ ಅಭಿನಯಕ್ಕಾಗಿ ವಿಜಯರಾಘವನ್, ತಮಿಳು ಸಿನಿಮಾ ‘ಪಾರ್ಕಿಂಗ್‌’ ಅಭಿನಯಕ್ಕಾಗಿ ಮುತ್ತುಪೆಟ್ಟೈ ಸೋಮು ಭಾಸ್ಕರ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಮಲಯಾಳಂ ಚಿತ್ರ ‘ಉಳ್ಳೊಝುಕ್ಕ್’ನ ಅಭಿನಯಕ್ಕಾಗಿ ಊರ್ವಶಿ ಮತ್ತು ಗುಜರಾತಿ ಸಿನಿಮಾ ‘ವಶ್’ನ ಅಭಿನಯಕ್ಕಾಗಿ ಜಾನಕಿ ಬೋದೀವಾಲಾ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಗೆದ್ದುಕೊಂಡರು.

ಕೆ.ಯಶೋಧ ಪ್ರಕಾಶ್ ನಿರ್ದೇಶನದ ‘ಕಂದೀಲು’ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಚಿದಾನಂದ ನಾಯ್ಕ್ ಅವರ ‘ಸೂರ್ಯಕಾಂತಿ ಹೂ ಸಿನಿಮಾ ನಾನ್ ಫೀಚರ್‌ ವಿಭಾಗದಲ್ಲಿ ‘ಅತ್ಯುತ್ತಮ ಚಿತ್ರಕಥೆ’ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಶಾರುಕ್, ವಿಕ್ರಾಂತ್ ಅತ್ಯುತ್ತಮ ನಟರು Read More

ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್

ಶ್ರೀನಗರ: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.

ಆಪರೇಷನ್ ಮಹಾದೇವ್ ಅಡಿಯಲ್ಲಿ ಶ್ರೀನಗರದಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ.

ದಾಳಿಯ ಮಾಸ್ಟರ್​ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿವೆ.

ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ,ಮೂವರು ಉಗ್ರರನ್ನು ಗುಂಡಿಕ್ಕಿ ಕೊಂದಿವೆ.

ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರ ಪ್ರಾಣವನ್ನು ಕಳೆದುಕೊಂಡಿದ್ದರು.

ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್ Read More

ಕಾರಿನಲ್ಲಿ ಯುವತಿಯ ಅಪಹರಿಸಿ ಗ್ಯಾಂಗ್ ರೇಪ್

ಮಹಾರಾಷ್ಟ್ರ :23 ವರ್ಷದ ಯುವತಿಯನ್ನು ಅಪಹರಿಸಿ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರ ದ ಪುಣೆಯಲ್ಲಿ ನಡೆದಿದೆ.

ಲೋನಾವಾಲದ ತುಂಗಾರ್ಲಿ ಪ್ರದೇಶದ ಯುವತಿಯನ್ನು ಕಾಮುಕರು ಅಪಹರಿಸಿ ತಮ್ಮ ಕಾರಿನಲ್ಲಿ ಸ್ವಲ್ಪ ದೂರ ಸಾಗಿ ಬಳಿಕ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ರಸ್ತೆಯ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.

ತುಂಗರ್ಲಿ ಪ್ರದೇಶದ ನಾರಾಯಣಿ ಧಾಮ್ ದೇವಸ್ಥಾನದ ಬಳಿ ಯುವತು ನಡೆದು ಹೋಗುತ್ತಿದ್ದಾಗ, ಮೂವರು ಆರೋಪಿಗಳು ತನ್ನನ್ನು ಬಲವಂತವಾಗಿ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ನಂತರ, ನನ್ನ ಕೈಗಳನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.

ವಿವಿಧ ಸ್ಥಳಗಳಲ್ಲಿ ಹಲವು ಬಾರಿ ಕೃತ್ಯ ಎಸಗಿದ ಬಳಿಕ ತನ್ನನ್ನು ನಂಗರ್ಗಾಂವ್‌ನ ರಸ್ತೆ ಬದಿ ಎಸೆದು ಅದೇ ಕಾರಿನಲ್ಲಿ ಹೊರಟು ಹೋದರು ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಆಕೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಕ್ಷಣವೇ ತಂಡ ರಚಿಸಿ ಆರೋಪಿಗಳ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ತುಂಗಾರ್ಲಿಯ ಸುನಿಲ್ ಗಾಯಕ್ವಾಡ್ (35) ಎಂಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಂಧನಕ್ಕೆ ಬೀಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ ರಾಮ್‌ಘರೆ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಕಾರಿನಲ್ಲಿ ಯುವತಿಯ ಅಪಹರಿಸಿ ಗ್ಯಾಂಗ್ ರೇಪ್ Read More

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ

ಜಮ್ಮು: ಭಾರೀ ಮಳೆಯಿಂದ
ಜಮ್ಮು- ಕಾಶ್ಮೀರದ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾದ ಕೂಡಲೇ ಭೀತರಾದ ಜನರು, ಅಪಾಯದಿಂದ ತಪ್ಪಿಸಿಕೊಳ್ಳಲು ಅತ್ತಿತ್ತ ಓಡಲು ಹೆಣಗಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ವೀಡಿಯೋದಲ್ಲಿ ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ವಿಡಿಯೋದಲ್ಲಿ ಕಾಣುತ್ತದೆ.

ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥನ ದರ್ಶನ ಪಡೆದಿದ್ದಾರೆ.

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ Read More

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತನನ್ನು ಠಾಣೆಯಿಂದ ಎಳೆತಂದು ಹತ್ಯೆ

ಗುವಾಹಟಿ: ಅರುಣಾಚಲ ಪ್ರದೇಶದಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದಲೇ ಹೊತ್ತು ತಂದು ಹೊಡೆದು ಕೊಂದ ಬೀಭತ್ಸ ಘಟನೆ ನಡೆದಿದೆ.

ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ಈ ಘಟನೆ ನಡೆದಿದೆ.

ಕೊಲೆಯಾದವನು ಕಾರ್ಮಿಕ ಹಾಗೂ ಅಪ್ರಾಪ್ತ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ರೋಯಿಂಗ್‌ನ ಮೌಂಟ್ ಕಾರ್ಮೆಲ್ ಶಾಲೆಯ 5 ರಿಂದ 7 ವರ್ಷ ವಯಸ್ಸಿನ ಕನಿಷ್ಠ ಏಳು ಬಾಲಕಿಯರ ಮೇಲೆ ಈ ಪಿಶಾಚಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ತಿಳಿದುಬಂದಿದೆ.

ಬಾಲಕಿಯರು ಶಾಲೆಯ ಹಾಸ್ಟೆಲ್‌ನಲ್ಲಿ ತಂಗಿದ್ದರು. ಹೀಗಾಗಿ ಆರೋಪಿ ಮಧ್ಯರಾತ್ರಿಯಲಿ ಹಾಸ್ಟೆಲ್ ಗೆ ನುಗ್ಗಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಬಾಲಕಿಯರು ಹೊಟ್ಟೆನೋವು ಎಂದು ಆರೋಪಿಸಿದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದಾಗ ಲೈಂಗಿಕ ದೌರ್ಜನ್ಯ ‌ಆಗಿರುವುದು ಬೆಳಕಿಗೆ ಬಂದಿದೆ.

ಕಳೆದ ಗುರುವಾರ ಆರೋಪಿಯನ್ನು ಬಂಧಿಸಿ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು.

ಶುಕ್ರವಾರ ಪೋಷಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ನುಗ್ಗಿ, ಆರೋಪಿಯನ್ನು ಎಳೆದು ತಂದು ತೀವ್ರವಾಗಿ ಥಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೂ ಹಿಂಬಾಲಿಸಿದ ಗುಂಪು ಮತ್ತೆ ಆತನಿಗೆ ಥಳಿಸಿತ್ತು. ಇದರಿಂದಾಗಿ ಅಪ್ರಾಪ್ತ ಮೃತಪಟ್ಟಿದ್ದಾನೆ.

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತನನ್ನು ಠಾಣೆಯಿಂದ ಎಳೆತಂದು ಹತ್ಯೆ Read More

ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ:ಖ್ಯಾತ ನಟ,ನಟಿಯರ ವಿರುದ್ಧ ಪ್ರಕರಣ

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಿದೆ.

ನಟ, ನಟಿಯರ ಜೊತೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌, ಯುಟ್ಯೂಬರ್‌ಗಳು ಕೂಡಾ ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೆಲೆಬ್ರಿಟಿಗಳು ಮತ್ತು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ಗಳು ಅಕ್ರಮ ಬೆಟ್ಟಿಂಗ್​ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ವ್ಯಾಪಕವಾಗಿ ಪ್ರಚಾರ ಮಾಡಿದ್ದರು. ಪ್ರಚಾರ ಮಾಡಲು ಭಾರಿ ಕಮಿಷನ್ ಜತೆಗೆ ಸಂಭಾವನೆ ಕೂಡಾ ಪಡೆದಿದ್ದಾರೆ ಎಂದು ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಅಪ್ಲಿಕೇಶನ್‌ಗಳಿಂದಾಗಿ ಸಾಲದ ಹೊರೆಯಿಂದ ಅನೇಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೈದರಾಬಾದ್​ ಪೊಲೀಸರು ಈಗಾಗಲೇ ಎಫ್‌ಐಆರ್‌ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ. ಹೈದರಾಬಾದ್ ಮತ್ತು ಸೈಬರಾಬಾದ್ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ಪ್ರಕರಣ ದಾಖಲಿಸಿದೆ.

ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಪ್ರಚಾರ ಪ್ರಕರಣದಲ್ಲಿ ಪಂಜಾಗುಟ್ಟ ಪೊಲೀಸರು ಈಗಾಗಲೇ ನಿರೂಪಕರಾದ ವಿಷ್ಣು ಪ್ರಿಯಾ, ರಿತು ಚೌಧರಿ, ಶ್ರೀಮುಖಿ ಮತ್ತು ಶ್ಯಾಮಾ ಅವರನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಇಡಿ ಅಧಿಕಾರಿಗಳು ಸೆಲೆಬ್ರಿಟಿಗಳಾದ ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್, ಪ್ರಣೀತಾ ಸುಭಾಷ್, ನಿಧಿ ಅಗರ್ವಾಲ್, ಶ್ರೀಮುಖಿ, ರಿತು ಚೌಧರಿ, ಆ್ಯಂಕರ್ ಶ್ಯಾಮಲಾ, ಅನನ್ಯ ನಾಗಲ್ಲ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ:ಖ್ಯಾತ ನಟ,ನಟಿಯರ ವಿರುದ್ಧ ಪ್ರಕರಣ Read More

5 ವರ್ಷ ಪೂರ್ತಿ ನಾನೇ ಮುಖ್ಯ ಮಂತ್ರಿ: ಸಿದ್ದರಾಮಯ್ಯ

ನವದೆಹಲಿ: ಐದು ವರ್ಷ ಪೂರ್ತಿ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಸಿಎಂ, 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ, ಜುಲೈ 2 ರಂದೇ ಈ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದೇನೆ, ಆ ದಿನ ಡಿ.ಕೆ ಶಿವಕುಮಾರ್ ಕೂಡ ಅಲ್ಲೇ ಇದ್ದರು ಎಂದು ಹೇಳಿದರು.

ಎರಡೂವರೆ ವರ್ಷದ ಬಳಿಕ ಯಾವುದೇ ಅಧಿಕಾರ ಹಂಚಿಕೆ ಮಾತುಕತೆ ನಡೆದಿಲ್ಲ. ನಾನೇ ಮುಖ್ಯಮಂತ್ರಿ ಗಾದಿಯಲ್ಲಿ ಇರುತ್ತೇನೆ ಎಂದು ಪುನರುಚ್ಛರಿಸಿದರು.

ನಮ್ಮದು ಹೈಕಮಾಂಡ್‌ ಅಧಾರಿತ ಪಕ್ಷ. 2023ರ ಸಭೆಯಲ್ಲಿ ಎರಡೂವರೆ ವರ್ಷಗಳ ಅಧಿಕಾರಿ ಹಂಚಿಕೆಯ ಬಗ್ಗೆ ಯಾವುದೇ ಮಾತುಕತೆಯಾಗಿಲ್ಲ. ನಾವು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಅನುಸರಿಸಬೇಕೆಂದು ಹೈಕಮಾಂಡ್‌ ಹೇಳಿತ್ತು. ಅವರು ಏನೇ ಹೇಳಿದರೂ, ನಾವು ಅದನ್ನು ಅನುಸರಿಸಬೇಕು. ನಾನೂ ಅನುಸರಿಸುತ್ತೇನೆ, ಡಿ.ಕೆ ಶಿವಕುಮಾರ್ ಕೂಡ ಅನುಸರಿಸುತ್ತಾರೆ ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ. ಆದರೆ, ಕುರ್ಚಿ ಈಗ ಖಾಲಿ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರಲ್ಲವಾ ಟಾಂಗ್ ಕೊಟ್ಟರು.

ನಾಯಕತ್ವಕ್ಕೆ ಸಂಬಂಧಿಸಿದಂತೆ, ಸುರ್ಜೇವಾಲಾ ಅವರು ಯಾವುದೇ ಪ್ರಶ್ನೆಯನ್ನು ಕೇಳಿಲ್ಲ. ಡಿ.ಕೆ ಶಿವಕುಮಾರ್ ಅವರನ್ನು ಬೆಂಬಲಿಸುವ ಕೆಲವು ಶಾಸಕರು ಯಾವಾಗಲೂ ಇರುತ್ತಾರೆ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದರು.

5 ವರ್ಷ ಪೂರ್ತಿ ನಾನೇ ಮುಖ್ಯ ಮಂತ್ರಿ: ಸಿದ್ದರಾಮಯ್ಯ Read More

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ:ಸಿಎಂ

ನವದೆಹಲಿ: ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡಬೇಕೆಂಬ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸ್ಪಂದಿಸಿದರೆಂದು ತಿಳಿಸಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ಇಎಂ ವಿವರಿಸಿದರು.

ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ರಾಹುಲ್ ಗಾಂಧಿಯವರನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು.

ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಗೆ ಸಮಯ ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ:ಸಿಎಂ Read More

ಮೂವರು ಶಂಕಿತರ ಬಂಧಿಸಿದ ಎನ್ ಐ ಎ

ಬೆಂಗಳೂರು: ಪ್ರಮುಖ ಬೆಳವಣಿಗೆ
ಯೊಂದರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ 2023 ರ ಲಷ್ಕರ್-ಎ-ತೈಬಾ ಗುಂಪಿನ ಜೈಲು ಮೂಲಭೂತೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಮನೋವೈದ್ಯ ಮತ್ತು ಕರ್ನಾಟಕದ ಪೊಲೀಸ್ ಸೇರಿದಂತೆ ಮೂವರು ಶಂಕಿತರನ್ನು ಬಂಧಿಸಿದೆ.

ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳ ಐದು ಸ್ಥಳಗಳಲ್ಲಿ ಎನ್ ಐ ಎ ತನಿಖಾಧಿಕಾರಿಗಳು ಶೋಧ ನಡೆಸಿ ನಂತರ ಶಂಕಿತರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್; ನಗರ ಸಶಸ್ತ್ರ ಮೀಸಲು ಸಹಾಯಕ ಸಬ್-ಇನ್ಸ್‌ಪೆಕ್ಟರ್ ಚಾಂದ್ ಪಾಷಾ; ಮತ್ತು ಪರಾರಿಯಾಗಿರುವ ಆರೋಪಿಯ ತಾಯಿ ಅನೀಸ್ ಫಾತಿಮಾ ಬಂಧಿತ ಶಂಕಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧನೆ ವೇಳೆ ವಿವಿಧ ಡಿಜಿಟಲ್ ಸಾಧನಗಳು,ನಗದು, ಚಿನ್ನ ಮತ್ತಿತರ ವಸ್ತುಗಳನ್ನು
ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎನ್ ಐ ಎ ತಿಳಿಸಿದೆ.

ಈ ಪಿತೂರಿಯ ಭಾಗವಾಗಿ, ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಭಯೋತ್ಪಾದನಾ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಸೀರ್ ಅಲಿಯಾಸ್ ಟಿ ನಸೀರ್ ಸೇರಿದಂತೆ ಜೈಲು ಕೈದಿಗಳ ಬಳಕೆಗಾಗಿ ಡಾ. ನಾಗರಾಜ್ ಮೊಬೈಲ್ ಫೋನ್‌ಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ.

ಈ ಚಟುವಟಿಕೆಯಲ್ಲಿ ನಾಗರಾಜ್‌ಗೆ ಪವಿತ್ರಾ ಎಂಬಾಕೆ ಬೆಂಬಲ ನೀಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗರಾಜ್ ಮತ್ತು ಪವಿತ್ರಾ ಅವರ ಮನೆಗಳ ಜೊತೆಗೆ, ಪರಾರಿಯಾಗಿರುವ ಜುನೈದ್ ಅಹ್ಮದ್ ನ ತಾಯಿ ಅನೀಸ್ ಫಾತಿಮಾ ಅವರ ಮನೆಯನ್ನು ಸಹ ಶೋಧಿಸಲಾಗಿದೆ.

ಮೂವರು ಶಂಕಿತರ ಬಂಧಿಸಿದ ಎನ್ ಐ ಎ Read More