ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಹೆಚ್.ಸಿ.ಮಹದೇವಪ್ಪ

ಮೈಸೂರು: ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಶ್ರಮವಹಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಧನ್ವಂತರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ನವೀಕೃತ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜವಬ್ದಾರಿ ಮತ್ತು ಹೊಣೆಗಾರಿಕೆಯನ್ನು ಜನರ ಹಕ್ಕು ಮತ್ತು ರಕ್ಷಣೆಗೆ ಸಮರ್ಪಿಸಬೇಕಿದೆ ಎಂದು ಹೇಳಿದರು.

ಜನರ ಭವಿಷ್ಯವನ್ನು ಉಜ್ವಗೊಳಿಸುವಲ್ಲಿ ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳ ಕರ್ತವ್ಯ ಮಹತ್ವದ್ದಾಗಿದೆ. ಅದರಲ್ಲಿ ಜನಪರವಾದ ಕಾಯ್ದೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾರ್ಯಾಂಗದ ಕರ್ತವ್ಯವು ಹಿರಿದಾಗಿದೆ ಎಂದು ಹೇಳಿದರು.

ಅಭಿವೃದ್ಧಿಯ ಕೇಂದ್ರ ಬಿಂದು ಸರ್ಕಾರಿ ನೌಕರರಾಗಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲು ನೌಕಕರ ಶ್ರಮ ಬಹಳಷ್ಟಿದೆ. ನೌಕರರ ಸಮಸ್ಯೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಕಾಲಕಾಲಕ್ಕೆ ಸೂಕ್ತ ಪರಿಹಾರ ಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಮಹದೇವಪ್ಪ ಹೇಳಿದರು.

ಶಾಸಕ ಹರೀಶ್ ಗೌಡ ಮಾತನಾಡಿ, ನಮ್ಮ ಸರ್ಕಾರವು 7ನೇ ವೇತನ ಆಯೋಗ ಜಾರಿ ಮಾಡಿದೆ. ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ‌. ಸಂಘಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಅರಪ ಜಿಲ್ಲಾಧಿಕಾರಿ ಪಿ.ಶಿವರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಹಾಗೂ ರಾಜ್ಯ ಹಾಗೂ ಜಿಲ್ಲಾ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಹೆಚ್.ಸಿ.ಮಹದೇವಪ್ಪ Read More

ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ದರ್ಶನ್‌ ಮನವಿ

ಬೆಂಗಳೂರು: ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೊಲೆ ಆರೋಪಿ ದರ್ಶನ್‌ ಹೈಕೋರ್ಟ್‌ ಗೆ ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಸಾವಿರ ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ಆ ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ದರ್ಶನ್‌ ಪರ ವಕೀಲರು ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಏನು ಮಾಡಿದ್ದಾರೆ,ದರ್ಶನ್‌ ರೇಣಕಾಸ್ವಾಮಿಗೆ ಯಾವ ರೀತಿ ಟಾರ್ಚರ್‌ ನೀಡಿದ್ದಾರೆ, ಪವಿತ್ರಾ ಗೌಡ ಹೇಳಿದ್ದೇನು, ರೇಣುಕಾಸ್ವಾಮಿ ಹತ್ಯೆಯಲ್ಲಿ ಯಾರ ಪಾತ್ರ ಏನಿದೆ ಎನ್ನುವುದರ ಸಂಪೂರ್ಣವಾದ ವಿವರ ಚಾರ್ಜ್‌ಶೀಟ್‌ನಲ್ಲಿದೆ.

ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ದರ್ಶನ್‌ ಮನವಿ Read More

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ

ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌ ಎಂದು ಎಚ್ಚರಿಸಿದ್ದಾರೆ.

ಡಿ.ಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೊ ಅವರಿಗೇ ಕೇಳಬೇಕು ಎಂದು ಹೇಳಿದರು

ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ವಿವಿಧ ಹಗರಣದಗಳು ಕೇಳಿ ಬಂದಿವೆ ಹಾಗಾಗಿ ಹೆಚ್ಚು ದಿನ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿ ಉಳಿಯುವುದಿಲ್ಲ ಎಂದು ತಿಳಿಸಿದರು.

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ Read More

ಕುವೆಂಪು,ಅಂಬೇಡ್ಕರ್,ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ ಕರ್ನಾಟಕ- ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಬೆಂಗಳೂರಿನ ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಗೆ ಚಾಲನೆ ನೀಡಿ ಸಿಎಂ ಮಾತನಾಡಿದರು.

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು, ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿ, ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದು ನುಡಿದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ, ಇವರ ಸಾಮಾಜಿಕ‌ ಕಾರ್ಯ ಎಲ್ಲರಿಗೂ ಮಾದರಿ ಎಂದು ತಿಳಿಸಿದರು.

ಬೆಸಿಲಿಕಾ ಚರ್ಚ್ ಅಭಿವೃದ್ಧಿಗೆ ಐದು ಕೋಟಿ ನೆರವು ನೀಡುವುದಾಗಿ ಎಂದು ಸಿಎಂ ಭರವಸೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ರು. ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಪಾಲ್ಗೊಂಡಿದ್ದರು.

ಕುವೆಂಪು,ಅಂಬೇಡ್ಕರ್,ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ ಕರ್ನಾಟಕ- ಸಿಎಂ Read More

15 ದಿನದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಕಠಿಣ ಕ್ರಮ-ಡಿಸಿಎಂ ಕಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಗುಂಡಿಮಯವಾಗಿದ್ದು ಇನ್ನ 15 ದಿನದೊಳಗೆ ಗುಂಡಿಗಳನ್ನು ಮುಚ್ಚದಿದ್ದರೆ ಕಠಿಣ ಕ್ರಮ ಖಂಡಿತಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಎಂಜಿನೀಯರ್‌ಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು.

ನಂತನ‌ ಮಾಧ್ಯಮದೊಂದಿಗೆ ಮಾತನಾಡಿದ ಡಿಕೆಶಿ,ಹಿರಿಯ ಅಧಿಕಾರಿಗಳು, ಮುಖ್ಯ ಎಂಜಿನೀಯರ್‌ಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. 15 ದಿನಗಳ ಕಾಲ ಗಡುವುದು ನೀಡಿದ್ದೇನೆ, ಎಲ್ಲಾ ಕೆಲಸಗಳನ್ನು ಬಿಟ್ಟು ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಒಂದು ವೇಳೆ ಈ ಕೆಲಸ ಮಾಡದೇ ಇದ್ದರೆ ಸಂಬಂಧಪಟ್ಟವರ ಮೇಲೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ,ಯಾರು ಸಸ್ಪೆಂಡ್ ಆಗುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

ಸೆಪ್ಟೆಂಬರ್‌ನಲ್ಲೂ ಮಳೆ ಬರುವ ಸಾಧ್ಯತೆ ಇದೆ, ಕಂಟ್ರೋಲ್ ರೂಂ ಪ್ರತಿಯೊಂದನ್ನು ಗಮನಿಸುತ್ತಾ ಇರಬೇಕು ನೀರು ನುಗ್ಗುವುದು, ಅವಾಂತರಗಳು ಆಗುವುದನ್ನು ತಡೆಯಬೇಕು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ಮಹಾತ್ಮ ಗಾಂಧೀಜಿ ಅವರು ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ನಾಯಕತ್ವ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಲ್ಲಿ ನವೆಂಬರ್ 2 ರಂದು ಸ್ವಚ್ಛತೆ ಬಗ್ಗೆ ಪ್ರತಿಜ್ಞೆ ಮಾಡಬೇಕು. ಅವರವರ ಮನೆಗಳನ್ನು, ಏರಿಯಾಗಳನ್ನು ಸ್ವಚ್ಛವಾಗಿ ಇಡುವುದರ ಬಗ್ಗೆ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದ್ದೇನೆ ಎಂಬುದಾಗಿ ಡಿಸಿಎಂ ತಿಳಿಸಿದರು.

ರಸ್ತೆಗಳಿಗೆ ವಾಲಿದ ಮರಗಳ ಟೊಂಗೆಗಳನ್ನು ಟ್ರಿಮ್ಮಿಂಗ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಜತೆಗೆ ಒಣಗಿದ ಮರಗಳನ್ನು ‌ತೆರವು ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಸಭೆಯಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

15 ದಿನದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಕಠಿಣ ಕ್ರಮ-ಡಿಸಿಎಂ ಕಡಕ್ ಎಚ್ಚರಿಕೆ Read More

ಎತ್ತಿನಹೊಳೆ ಬಗ್ಗೆ ರಾಜ್ಯ ಸರ್ಕಾರ ಬೊಗಳೆಬಿಡುತ್ತಿದೆ:ಅಶೋಕ್

ಬೆಂಗಳೂರು: ಎತ್ತಿನಹೊಳೆ ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಬೊಗಳೆ ಬಿಡುತ್ತಿದೆ ಎಂದು ‌ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 2010ರಲ್ಲಿ ಅಂದಿನ‌ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಈ ಎತ್ತಿನಹೊಳೆ ಯೋಜನೆ ರೂಪಿಸಿತ್ತು.

ಈ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ಇಂದು ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದೆ,ಇದು ಕಾಂಗ್ರೆಸ್ ಪಕ್ಷ ಬೌದ್ಧಿಕವಾಗಿ, ನೈತಿಕವಾಗಿ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ವ್ಯಂಗ್ಯ ವಾಡಿದ್ದಾರೆ.

2010ರಲ್ಲಿ ಅಂದಿನ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ಎತ್ತಿನಹೊಳೆ ಯೋಜನೆಯ ಪ್ರಸ್ತಾವನೆಯನ್ನು ಯಡಿಯರಪ್ಪನವರ ಮುಂದಿಟ್ಟಾಗ ಅವರು ತಾತ್ವಿಕ ಒಪ್ಪಿಗೆ ನೀಡಿದ್ದರು.

2012 ರಲ್ಲಜ ಅಂದಿನ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಒಟ್ಟು 8,000 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರು.

ನಂತರ 2013ರಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರ ವೇಳೆಗೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಮಾತು ಕೊಟ್ಟು, ಬಯಲು ಸೀಮೆ ಜನರಿಗೆ ಮೋಸ ಮಾಡಿದರು ಎಂದು ಅಶೋಕ್ ದೂರಿದ್ದಾರೆ.

ನಂತರ 2022-23ರ ಬಜೆಟ್ ನಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ 3,000 ಕೋಟಿ ರೂಪಾಯಿ ಅನುದಾನ ನೀಡಿ ಎತ್ತಿನಹೊಳೆ ಯೋಜನೆಗೆ ವೇಗ ನೀಡಿತ್ತು.

2014ರಲ್ಲಿ 8,500 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಯೋಜನೆಯ ವೆಚ್ಚ ಇದೀಗ 23,251 ಕೋಟಿ ರೂ.ಗೆ ಮುಟ್ಟಿದೆ. ಇದಕ್ಕೆ ಯಾರು ಕಾರಣ ಎಂದು ಅವರು ಪ್ರಶ್ನಿಸಿದ್ದಾರೆ.

ಸುಮಾರು ಆರೂವರೆ ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದರೂ ಈ ಯೋಜನೆ ಇಷ್ಟು ವಿಳಂಬವಾಗಲು ಯಾರು ಕಾರಣ ಎಂದು ಅವರು ಕೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಿಜವಾಗಿಯೂ ಈ ಭಾಗದ ಜನರ ಬಗ್ಗೆ ಬದ್ಧತೆ ಇದ್ದಿದ್ದರೆ ಎತ್ತಿನಹೊಳೆ ಯೋಜನೆಗೆ ಈ ಮೂರು ಜಿಲ್ಲೆಗಳಲ್ಲಿ ಒಂದು ಕಡೆ ಚಾಲನೆ ನೀಡಬೇಕಾಗಿತ್ತು.

ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರೆಂಟಿಗಳ ರೀತಿಯಲ್ಲಿ ಈಗಿನ ಕಾರ್ಯಕ್ರಮವೂ ಒಂದು ಬಿಟ್ಟಿ ಪ್ರಚಾರ ಪಡೆಯುವ ನಾಟಕವಷ್ಟೇ ಎಂದು ಅಶೋಕ್ ಟೀಕಿಸಿದ್ದಾರೆ.

ಎತ್ತಿನಹೊಳೆ ಬಗ್ಗೆ ರಾಜ್ಯ ಸರ್ಕಾರ ಬೊಗಳೆಬಿಡುತ್ತಿದೆ:ಅಶೋಕ್ Read More

ಹಗರಣ ವಿಷಯ ಮುಚ್ಚಲು ಸರ್ಕಾರದಿಂದ ದರ್ಶನ್ ರಾಜಾತಿಥ್ಯ ಫೋಟೋ ವೈರಲ್:ಜೋಶಿ

ಹುಬ್ಬಳ್ಳಿ: ಹಗರಣ ವಿಷಯ ಮುಚ್ಚಿ ಹಾಕಲು ಸರ್ಕಾರವೇ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಫೋಟೋ ವೈರಲ್ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಆದರೆ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ತನ್ನ ತಪ್ಪನ್ನು ಮುಚ್ಚಿ ಹಾಕಲು ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ದರ್ಶನ್‌ ಪ್ರಕರಣ ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್‌ ಕೇಸ್‌ ಮುನ್ನೆಲೆಗೆ ತಂದು ಸಂಕುಚಿತ ಷಡ್ಯಂತ್ರ ನಡೆಸಿದೆ.

ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೋಗಳನ್ನು ವೈರಲ್‌ ಮಾಡಿರುವ ಬಗ್ಗೆ ನ್ಯಾಯಾಲಯವೂ ಪರಿಗಣನೆಗೆ ತೆಗೆದುಕೊಂಡು ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಸಿಗುತ್ತಿದ್ದ ಫೋಟೋ ವೈರಲ್‌ ಆಗಿದ್ದು ಹೇಗೆ, ಇದಕ್ಕೆ ಪ್ರಮುಖ ಸೂತ್ರದಾರರು ಯಾರು ಎಂದು ಜೋಶಿ ಪ್ರಶ್ನಿಸಿದರು.

ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ ವರದಿ ಇಟ್ಟುಕೊಂಡು ತನಿಖೆಗೆ ಮುಂದಾಗಿರುವುದು ಅಚ್ಚರಿ ಉಂಟು ಮಾಡಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಒಂದೂವರೆ ವರ್ಷದಿಂದ ಸುಮ್ಮನಿದ್ದ ಸರಕಾರ ಈಗ ಹಗರಣದ ಬಗ್ಗೆ ಮಾತನಾಡುತ್ತಿದೆ. ಸರಕಾರ ಕಳ್ಳತನ ಮಾಡಿ ಸಿಕ್ಕಿಬಿದ್ದಾಗ ಇನ್ನೊಬ್ಬರು ಕೂಡ ಕಳ್ಳತನ ಮಾಡಿದ್ದಾರೆ ಎಂದು ತೋರಿಸುತ್ತ ಬಚಾವಾಗುವ ತಂತ್ರವೇ ಎಂದು ಟೀಕಿಸಿದರು.

ಹಗರಣ ವಿಷಯ ಮುಚ್ಚಲು ಸರ್ಕಾರದಿಂದ ದರ್ಶನ್ ರಾಜಾತಿಥ್ಯ ಫೋಟೋ ವೈರಲ್:ಜೋಶಿ Read More

2027ಕ್ಕೆ ಎತ್ತಿನಹೊಳೆ ಎರಡನೆ ಹಂತದಿಂದ 7 ಜಿಲ್ಲೆಗಳಗೆ ನೀರು: ಸಿಎಂ ಭರವಸೆ

ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಏಳು ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ಕುಡಿಯುವ ನೀರು ತಲುಪುವುದು ಖಂಡಿತಾ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ ಎಂದು ಭರವಸೆ ನೀಡಿದರು.

7 ಜಿಲ್ಲೆಗಳ ಮನಗೆ ಕುಡಿಯುವ ನೀರು ತಲುಪಲಿದೆ,ಜತೆಗೆ ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಆಶ್ವಾಸನೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಜನತೆಗೆ ಸಿದ್ದು ತಿಳಿಹೇಳಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವೆ,ಅಲ್ಲದೆ ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಇದು ಖಂಡಿತ ಎಂದು
ಆಶ್ವಾಸನೆ ನೀಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ವೇಳೆ ಸಿಎಂ ಸೂಚಿಸಿ ದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಮತ್ತು ಐದು ತಾಲ್ಲೂಕುಗಳ ಶಾಸಕರು, ಇತರೆ ಜನಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

2027ಕ್ಕೆ ಎತ್ತಿನಹೊಳೆ ಎರಡನೆ ಹಂತದಿಂದ 7 ಜಿಲ್ಲೆಗಳಗೆ ನೀರು: ಸಿಎಂ ಭರವಸೆ Read More

ರೈತರು,ಶಿಕ್ಷಕರು,ಸೈನಿಕರು ದೇಶದ ನಿರ್ಮಾತೃಗಳು- ಸಿಎಂ

ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಎಲ್ಲಾ ಶಿಕ್ಷಕರಿಗೂ ಸಾಧ್ಯತೆ ಇದ್ದೇ ಇರುತ್ತದೆ, ಹಾಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು,ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ ಎಂದು ಹೇಳಿದರು.

ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದು ಸಿಎಂ ತಿಳಿಸಿದರು.

ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಸಿಎಂ ಹಾರೈಸಿದರು.

ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.

ಸಚಿವರಾದ ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ‌ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರೈತರು,ಶಿಕ್ಷಕರು,ಸೈನಿಕರು ದೇಶದ ನಿರ್ಮಾತೃಗಳು- ಸಿಎಂ Read More

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಕ್ರಮ: ಸಿಎಂ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಲಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿ ಸಿಎಂ ಮಾತನಾಡಿದರು.

ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು ಎಂದು ಮನವಿ ಮಾಡಿದರು.

ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು,ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.
ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಖ್ಯ ಮಂತ್ರಿಗಳಲ್ಲಿ ತಿಳಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಕ್ರಮ: ಸಿಎಂ Read More