ಅಪರಾಧಿಗೆ ಅಫ್ಘಾನಿಸ್ತಾನದಲ್ಲಿ ಘೋರ ಶಿಕ್ಷೆ

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ನ ಕ್ರೂರ ಆಡಳಿತಕ್ಕೆ ಇನ್ನೊಂದು ಘೋರ ಘಟನೆ ಸಾಕ್ಷಿಯಾಗಿದೆ.
ಒಂದು ಕುಟುಂಬದ 13 ಜನರನ್ನು ಕೊಂದ ಹಂತಕನನ್ನು ಅದೇ ಕುಟುಂಬಕ್ಕೆ ಸೇರಿದ ಬಾಲಕನಿಂದ ಸಾವಿರಾರು ಮಂದಿ ಎದುರಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿಸಲಾಗಿದೆ.
ಅಫ್ಘಾನ್ ಸುಪ್ರೀಂ ಕೋರ್ಟ್ ಆದೇಶ ಮತ್ತು ತಾಲಿಬಾನ್‌ನ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡ್‌ಜಾದಾ ಸೂಚನೆಯಂತೆ ಸಾರ್ವಜನಿಕ ಮರಣದಂಡನೆಗೆ ಸುಮಾರು 80,000 ಜನರು ಸಾಕ್ಷಿಯಾಗಿದ್ದಾರೆ‌
ಅಬ್ದುಲ್ ರೆಹಮಾನ್, ಆತನ ಕುಟುಂಬದ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 13 ಜನರನ್ನು ಕೊಂದ ಅಪರಾಧಕ್ಕಾಗಿ ಮಂಗಲ್ ಎಂಬ ವ್ಯಕ್ತಿಗೆ ಮರಣದಂಡನೆ ವಿಧಿಸಲಾಗಿದೆ.
ಇದರಂತೆ ಸಂತ್ರಸ್ತರ ಕುಟುಂಬದ ಸಂಬಂಧಿ 13 ವರ್ಷದ ಬಾಲಕನಿಂದ ಶಿಕ್ಷೆ ಕೊಡಿಸಲಾಗಿದೆ,
ಮೊದಲಿಗೆ ಕೊಲೆಗಾರನನ್ನು ಮೈದಾನಕ್ಕೆ ಕರೆತರಲಾಗಿದ್ದು, ನಂತರ ವೈದ್ಯರು ತಪಾಸಣೆ ನಡೆಸಿದ್ದಾರೆ. ಬಳಿಕ, ಷರಿಯಾ ಕಾನೂನಿನ ಪ್ರಕಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಅಪರಾಧಿಗೆ ಅಫ್ಘಾನಿಸ್ತಾನದಲ್ಲಿ ಘೋರ ಶಿಕ್ಷೆ Read More

ಬಲೂಚಿಸ್ತಾನ್ ಅರೆಸೇನಾ ಪಡೆ ಕಚೇರಿ ಬಳಿ ಮಹಿಳಾ ಆತ್ಮಹುತಿ ಬಾಂಬರ್ ಸ್ಪೋಟ

ಕರಾಚಿ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿರುವ ಅರೆಸೇನಾ ಪಡೆಯ ಪ್ರಧಾನ ಕಚೇರಿ ಪ್ರವೇಶದ್ವಾರದಲ್ಲಿ ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ಮಹಿಳಾ ಆತ್ಮಹುತಿ ಬಾಂಬರ್ ಒಬ್ಬಾಕೆ ತನ್ನನ್ನೇ ಸ್ಫೋಟಿಸಿಕೊಂಡ‌‌ ಘಟನೆ ನಡೆದಿದೆ.

ಈ‌ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು ಆರು ಉಗ್ರರನ್ನು ಉಡೀಸ್ ಮಾಡಲಾಗಿದೆ.

ತನ್ನನ್ನು ತಾನು ಸ್ಪೋಟಿಸಿಕೊಂಡ ಬಾಂಬರ್‌ ಮಹಿಳೆಯನ್ನು ಜಿನಾಟಾ ರಫೀಕ್ ಎಂದು ಗುರುತಿಸಲಾಗಿದೆ.

ಸ್ಫೋಟದ ನಂತರ, ಆರು ಉಗ್ರರು ಪ್ರಧಾನ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ, ತಕ್ಷಣ ಎಚ್ಚೆತ್ತ ಭದ್ರತಾ ಪಡೆಗಳು ಪ್ರವೇಶದ್ವಾರದ ಬಳಿಯೇ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಉಳಿದ ಮೂವರು ಎಫ್‌ಸಿ ಸಿಬ್ಬಂದಿ ಸುತ್ತುವರಿಯುವ ಮೊದಲೇ ಆವರಣ ಪ್ರವೇಶಿಸಿದ್ದಾರೆ, ಆಗ ಮೂವರನ್ನೂ ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಸಂಜೆಯವರೆಗೆ ಪ್ರಧಾನ ಕಚೇರಿಯ ಒಳಗಿನಿಂದ ಗುಂಡಿನ ಸದ್ದು ಮತ್ತು ಸ್ಫೋಟಗಳು ಕೇಳಿಬಂದವು ಎಂದು ಸ್ಥಳೀ ವಾಸಿಗಳು ತಿಳಿಸಿದ್ದಾರೆ.

ಬಲೂಚಿಸ್ತಾನದಲ್ಲಿ ಅತ್ಯಂತ ಸಕ್ರಿಯ ಮತ್ತು ಸುಸಜ್ಜಿತ ದಂಗೆಕೋರ ಗುಂಪು ಎಂದು ಪರಿಗಣಿಸಲಾದ ಬಿಎಲ್‌ಎ, ಮಹಿಳಾ ಆತ್ಮಹುತಿ ದಾಳಿಕೋರಳನ್ನು ಬಳಸಿಕೊಂಡು ಮೂರನೇ ಬಾರಿ ದಾಳಿ ಮಾಡಿದೆ.

ಬಲೂಚಿಸ್ತಾನ್ ಅರೆಸೇನಾ ಪಡೆ ಕಚೇರಿ ಬಳಿ ಮಹಿಳಾ ಆತ್ಮಹುತಿ ಬಾಂಬರ್ ಸ್ಪೋಟ Read More

ಇಮ್ರಾನ್ ಖಾನ್ ಭೇಟಿಯಾದ‌ ಸಹೋದರಿ:ಸಾವಿನ ವದಂತಿಗಳಿಗೆ ತೆರೆ

ಪಾಕಿಸ್ತಾನ: ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಾವಿನ ಊಹಾಪೋಹದ ಸುದ್ದಿ ಹರಡಿದ್ದರ ಬೆನ್ನಲ್ಲೆ ಜೈಲಿನಲ್ಲಿ ಇಮ್ರಾನ್ ರನ್ನು ಸಹೋದರಿ ಡಾ.ಉಜ್ಮಾ ಖಾನಮ್ ಭೇಟಿಯಾಗಿ‌ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ನಡುವೆ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ ಅವಕಾಶ ನೀಡಿತ್ತು.

ಮಂಗಳವಾರ ರಾವಲ್ಪಿಂಡಿಯ ಅಡಿಯಾಲ ಜೈಲಿನ ಅಧಿಕಾರಿಗಳು ಸಹೋದರನನ್ನು ಭೇಟಿ ಮಾಡಲು ಉಜ್ಮಾ ಖಾನಮ್ ಅವರಿಗೆ ಅನುಮತಿ ನೀಡಿತ್ತು.

ಇಮ್ರಾನ್ ಖಾನ್ ಅವರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಪಿಟಿಐ ಸದಸ್ಯರು ಇಸ್ಲಾಮಾಬಾದ್ ಹೈಕೋರ್ಟ್ ಮತ್ತು ಅಡಿಯಾಲ ಜೈಲಿನ ಹೊರಗೆ ಪ್ರತಿಭಟನೆ ಕೂಡಾ ನಡೆಸಿದ್ದರು.

ಕಳೆದ ವಾರ, ಇಮ್ರಾನ್ ಖಾನ್ ಅವರ ಮಗ ಮತ್ತು ಸಹೋದರಿ ಇಬ್ಬರೂ ಜೈಲಿನಲ್ಲಿರುವ ಇಮ್ರಾನ್‌ ಜೀವಂತವಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಕುಟುಂಬಕ್ಕೆ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ನ್ಯಾಯಾಲಯದ ಅನುಮತಿ ನೀಡಿದ್ದರೂ, ಅವರ ಸಹೋದರಿಯರಿಗೆ ಮತ್ತು ‌ಮಕ್ಕಳಿಗೆ ಅವರನ್ನು ಭೇಟಿ ಮಾಡಲು ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾದ ನಂತರ ಅವರ ಸಾವಿನ ವದಂತಿಗಳು ಹರಡಿದವು.

ಯಾವುದೇ ಫೋನ್ ಕರೆಗಳು ಬಂದಿಲ್ಲ. ಯಾವುದೇ ಸಭೆಗಳು ನಡೆದಿಲ್ಲ. ಜೀವನದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ನನ್ನ ಸಹೋದರ ಮತ್ತು ನಾನು ನಮ್ಮ ತಂದೆಯೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಇಮ್ರಾನ್ ಪುತ್ರ ಖಾಸಿಮ್ ಖಾನ್ ಹೇಳಿದ್ದಾರೆ.

ನನ್ನ ಸಹೋದರ ಇಮ್ರಾನ್ ಜೀವಂತವಾಗಿದ್ದರೂ ಏಕಾಂತ ಬಂಧನದಲ್ಲಿ ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ ಎಂದು ಅವರ ಸಹೋದರಿ ಡಾ. ಉಜ್ಮಾ ಖಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ಭೇಟಿಯಾದ‌ ಸಹೋದರಿ:ಸಾವಿನ ವದಂತಿಗಳಿಗೆ ತೆರೆ Read More

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ 5 ವರ್ಷ ಜೈಲು ಶಿಕ್ಷೆ

ಢಾಕಾ: ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಇನ್ನೊಂದು ಪ್ರಕರಣದಲ್ಲಿ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಢಾಕಾ ನ್ಯಾಯಾಲಯ ಆದೇಶಿಸಿದೆ.

ಇನ್ನೊಂದು ಪ್ರಕರಣದಲ್ಲಿ ಮಾಜಿ ಶೇಖ್ ಹಸೀನಾ ಸಹೋದರಿ ಶೇಖ್ ರೆಹಾನಾಗೆ 7 ವರ್ಷಗಳ ಜೈಲು ಶಿಕ್ಷೆ, ಬ್ರಿಟಿಷ್ ಸಂಸದೆ ತುಲಿಪ್ ಸಿದ್ದಿಕ್ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೀದ್ ಜಾಯ್ ಅವರಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1,00,000 ಬಾಂಗ್ಲಾದೇಶಿ ಟಕಾ ದಂಡ ವಿಧಿಸಿದೆ.

ಶೇಖ್ ಹಸೀನಾ ಅವರ ಪುತ್ರಿ ಸೈಮಾ ವಾಜೀದ್ ಪುಟುಲ್ ಅವರಿಗೂ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ಲಾಟ್ ವಂಚನೆ ಪ್ರಕರಣದಲ್ಲಿ ಢಾಕಾದ ವಿಶೇಷ ವ್ಯಾಯಾಲಯ ಈ ಶಿಕ್ಷೆ ವಿಧಿಸಿದೆ.

ಬಾಂಗ್ಲಾದೇಶದ ಭ್ರಷ್ಟಾಚಾರ ನಿಗ್ರಹ ಆಯೋಗ (ಎಸಿಸಿ) ಶೇಖ್ ಹಸೀನಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಕಳೆದ ಜನವರಿಯಲ್ಲಿ ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ಪ್ಲಾಟ್‌ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಿಸಿತ್ತು.

ಈಗಾಗಲೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ. 2024ರ ಜುಲೈ ದೇಶದಲ್ಲಿ ನಡೆದ ಪ್ರತಿಭಟನೆ ಹತ್ತಿಕ್ಕಲು ಅವರು ಮಾಡಿದ ಪ್ರಯತ್ನಗಳಿಗಾಗಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಅವರು ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದೆ.

ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್​​ ಹಸೀನಾ ಅವರನ್ನು ಹಸ್ತಾಂತರಿಸಲು ಮೊಹಮದ್​ ಯೂನಸ್​ ಅವರ ನೇತೃತ್ವದಲ್ಲಿ ರಚಿತವಾಗಿರುವ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಮನವಿ ಮಾಡಿದೆ.

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ 5 ವರ್ಷ ಜೈಲು ಶಿಕ್ಷೆ Read More

ದಿತ್ವಾ ಚಂಡಮಾರುತಕ್ಕೆ‌ ಶ್ರೀಲಂಕಾದಲ್ಲಿ 123 ಮಂದಿ ಬಲಿ

ನವದೆಹಲಿ: ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲು ಪ್ರವಾಹ, ಭೂಕುಸಿತ ಉಂಟಾಗಿ 123 ಯಾಗಿದ್ದಾರೆ.ನೂರಾರು ಮಂದಿ ಕಾಣೆಯಾಗಿದ್ದಾರೆ.

ಹಾಗಾಗಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರು ಶ್ರೀಲಂಕಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಈ ಕುರಿತು ಶುಕ್ರವಾರ ನಡೆದ ಸರ್ವಪಕ್ಷ ಸಭೆಯ ನಂತರ ವಿರೋಧ ಪಕ್ಷದ ನಾಯಕರು ತುರ್ತು ಪರಿಸ್ಥಿತಿಯನ್ನು ಘೋಷಿಸಲು ಕರೆ ನೀಡಿದರು.

ದಿತ್ವಾ ಚಂಡಮಾರುತ ಶ್ರೀಲಂಕಾದಿಂದ ಭಾರತದ ಕರಾವಳಿಯ ಕಡೆಗೆ ಸಾಗುತ್ತಿದೆ ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಅತುಲಾ ಕರುಣನಾಯಕೆ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಚಂಡಮಾರತದಿಂದಾಗಿ 130 ಜನರು ನಾಪತ್ತೆಯಾಗಿದ್ದಾರೆ, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

ದಿತ್ವಾ ಚಂಡಮಾರುತದ ನಂತರ, ಭಾರತವು ಶನಿವಾರ ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ 12 ಟನ್ ಮಾನವೀಯ ನೆರವಿನೊಂದಿಗೆ C-130J ವಿಮಾನವನ್ನು ಕೊಲಂಬೊಗೆ ರವಾನಿಸಿತು. ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಟೆಂಟ್‌ಗಳು, ಟಾರ್ಪೌಲಿನ್‌ಗಳು, ಕಂಬಳಿಗಳು, ನೈರ್ಮಲ್ಯ ಕಿಟ್‌ಗಳು ಮತ್ತು ತಿನ್ನಲು ಸಿದ್ಧವಾದ ಊಟ ಮತ್ತಿತರ ವಸ್ತುಗಳನ್ನು ಸಹಾಯ ಮಾಡುವುದಾಗಿ ತಿಳಿಸಿದ್ದರು.

ಶುಕ್ರವಾರ 4.5 ಟನ್ ಒಣ ದಿನಸಿ, 2 ಟನ್ ತಾಜಾ ಆಹಾರ ಮತ್ತು ಅಗತ್ಯ ವಸ್ತುಗಳನ್ನು ತಲುಪಿಸಲಾಗಿತ್ತು.

ದಿತ್ವಾ ಚಂಡಮಾರುತಕ್ಕೆ‌ ಶ್ರೀಲಂಕಾದಲ್ಲಿ 123 ಮಂದಿ ಬಲಿ Read More

ಹಾಂಗ್ ಕಾಂಗ್‌ನಲ್ಲಿ ಭಾರೀ ಬೆಂಕಿ ಅವಘಡ: 13 ಮಂದಿ ದುರ್ಮರಣ

ಹಾಂಗ್ ಕಾಂಗ್: ಹಾಂಗ್ ಕಾಂಗ್‌ನಲ್ಲಿನ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ 13 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ.

ಹಾಂಗ್ ಕಾಂಗ್‌ನ ತೈ ಪೊ ಜಿಲ್ಲೆಯಲ್ಲಿ ಬಹುಮಹಡಿ ಅಪಾರ್ಟ್ಮೆಂಟ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು 9 ಮಂದಿ ಸಜೀವ ದಹನವಾದರೆ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸುಮಾರು 700 ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಬೆಂಕಿ ಆರಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ 13 ಜನ ಮೃತಪಟ್ಟಿದ್ದಾರೆ.

ಹಾಂಗ್ ಕಾಂಗ್‌ನಲ್ಲಿ ಭಾರೀ ಬೆಂಕಿ ಅವಘಡ: 13 ಮಂದಿ ದುರ್ಮರಣ Read More

ಸೌದಿ ಅರೇಬಿಯಾದಲ್ಲಿ ಬಸ್ ಗೆ ಹೊತ್ತಿದ‌ ಬೆಂಕಿ:45 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾ: ಸೌದಿ ಅರೇಬಿಯಾದಲ್ಲಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ 45 ಮಂದಿ ಭಾರತೀಯರು ಮೃತಪಟ್ಟಿದ್ದಾರೆ.

ಈ ಬಸ್ ಅಪಘಾತದಲ್ಲಿ 45 ಮಂದಿ ಭಾರತೀಯ ಉಮ್ರಾ ಯಾತ್ರಿಕರು ಸಜೀವವಾಗಿ ದಹನವಾಗಿದ್ದಾರೆ.ಬೇರೆ ಸಾರಿಗೆ ವ್ಯವಸ್ಥೆ ಮಾಡಿಕೊಂಡ 8 ಮಂದಿ‌ ಬಚಾವಾಗಿದ್ದಾರೆ.

ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ ಯಾತ್ರಿಕರು ಮೆಕ್ಕಾದಿಂದ ಮದೀನಾಗೆ ಪ್ರಯಾಣ ಮಾಡಲು ಅದೇ ಪ್ರಯಾಣ ಕಂಪೆನಿಯಲ್ಲಿ ಬುಕ್ ಮಾಡಿದ್ದರು. ಕೊನೆ ಕ್ಷಣದಲ್ಲಿ ಅವರು ಖಾಸಗಿ ಸಾರಿಗೆಯನ್ನು ಆಯ್ಕೆ ಮಾಡಿಕೊಂಡು ತಮ್ಮ ಜೀವ ಉಳಿಸಿಕೊಂಡಿದ್ದಾರೆ ಎಂದು‌ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 54 ಮಂದಿ ಒಂದೇ ಏಜೆಂಟ್ ಅನ್ನು ಬುಕ್ ಮಾಡಿದ್ದರು. ಇವರಲ್ಲಿ ಎಂಟು ಜನರು ಖಾಸಗಿ ಸಾರಿಗೆಯನ್ನು ಆಯ್ಕೆ ಮಾಡಿದರು.ಹೀಗಾಗಿ ಬಸ್ ನಲ್ಲಿ ಪ್ರಯಾಣಿಸುವ 46 ಮಂದಿಯ ಪಟ್ಟಿ ಸಿಕ್ಕಿದೆ. ಸೌದಿ ಅರೇಬಿಯಾ ಅಧಿಕಾರಿಗಳು ಮೃತರನ್ನು ಗುರುತಿಸುವ ಕಾರ್ಯ ನಡೆಸುತ್ತಿದ್ದಾರೆ.

ಈ ದುರಂತದಲ್ಲಿ ಮೃತಪಟ್ಟವರಲ್ಲಿ 45 ಮಂದಿ ಭಾರತೀಯರಾಗಿದ್ದು, ಹೆಚ್ಚಿನವರು ತೆಲಂಗಾಣದ ಹೈದರಾಬಾದ್‌ ಮೂಲದವರಾಗಿದ್ದಾರೆ. ಅಪಘಾತದಲ್ಲಿ ಮೊಹಮ್ಮದ್ ಅಬ್ದುಲ್ ಶೋಯಬ್ ಎಂಬಾತ ಬದುಕಿದ್ದು, ಆತನ ಸ್ಥಿತಿ ಗಂಭೀರ ವಾಗಿದೆ.

ಬಸ್‌ಗೆ ಬೆಂಕಿ ಹೊತ್ತಿಕೊಂಡಾಗ ಪ್ರಯಾಣಿಕರು ನಿದ್ರಿಸುತ್ತಿದ್ದರು. ಇದರಿಂದ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಮೃತರನ್ನು ಗುರುತಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ರಕ್ಷಣಾ ತಂಡಗಳು ತಿಳಿಸಿವೆ.

ಘಟನೆಗೆ ಸಂಬಂಧಿಸಿ ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್,
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ, ಕಿರಣ್‌ ರಿಜುಜು ಮತ್ತಿತರರು ‌ತೀವ್ರ ಸಂತಾಪ ವ್ಯಕ್ತಪಡಿಸಿದರು

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ಬಸ್ ಗೆ ಹೊತ್ತಿದ‌ ಬೆಂಕಿ:45 ಭಾರತೀಯರು ಸಜೀವ ದಹನ Read More

ಶೇಖ್‌ ಹಸೀನಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ.

ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. 2024ರ ಆಗಸ್ಟ್ 5 ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು ಹೊರಡಿಸಿ ಶೇಖ್ ಹಸೀನಾ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಿಸಲಾಗಿದೆ, ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಹಸೀನಾ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಹಸೀನಾ ಮತ್ತು ಖಾನ್‌ ವಿಚಾರಣೆಗೆ ಹಾಜರಾಗದ ಕಾರಣ 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿಗಳ ಅನುಪಸ್ಥಿತಿಯಲ್ಲೇ ಅಕ್ಟೋಬರ್‌ 23ರಂದು ವಿಚಾರಣೆ ಪೂರ್ಣಗೊಳಿಸಲಾಗಿತ್ತು. ಆರೋಪಿಗಳಿಗೆ ಮರಣ ದಂಡನೆಯನ್ನೇ ವಿಧಿಸಬೇಕು ಎಂದು ನ್ಯಾಯ ಮಂಡಳಿಯ ವಕೀಲರು ವಾದ ಮಂಡಿಸಿದ್ದರು.

ಸರ್ಕಾರದ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಯಂತ್ರಿಸಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಹಸೀನಾ ಒಳಗಾಗಿದ್ದಾರೆ

ಶೇಖ್‌ ಹಸೀನಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ Read More

ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ

ಬೆಳಗಾವಿ: ಆಡಳಿತ ವ್ಯವಸ್ಥೆ ಭ್ರಷ್ಟತೆಯಿಂದ
ಕೂಡಿದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ತೀವ್ರ ಸಂಕಷ್ಟಕ್ಕೆ‌ ರೈತರು ಸಿಲುಕಿದ್ದಾರೆ ಅವರ ನೆರವಿಗೆ ಬಾರದೆ‌ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ ತಾಳಿದೆ ಎಂದು ಕಿಡಿಕಾರಿದರು.

ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಚುನಾವಣೆ ಪ್ರತಿಷ್ಠೆಯ ಮುಖ್ಯ ವಿಷಯವಾಗಿದೆ. ಜನರ ಸಂಕಷ್ಟ ಕೇಳಿ ಪರಿಹರಿಸುವ ಸಂವೇದನೆ ಆಡಳಿತ ಪಕ್ಷದ ಶಾಸಕ ಸಚಿವರಿಗೆ ಇಲ್ಲ. ಈಗಲಾದರೂ ಜಿಲ್ಲೆಯ ಸಚಿವರು ಸಂವೇದನೆ ತೋರಿಸಿ ರೈತರ ಸಹಾಯಕ್ಕೆ ಬರಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದರು.

ರಾಜ್ಯದಲ್ಲಿ ನಾನು ಮುಖ್ಯಮಂತ್ರಿ, ತಾನು ಮುಖ್ಯಮಂತ್ರಿ ಎಂಬ ಯುದ್ಧ ಶುರುವಾಗಿದೆ. ಯಾರು ಮುಖ್ಯಮಂತ್ರಿಯಾಗಿರುತ್ತಾರೊ ಅದು ಮುಖ್ಯವಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ ಅವರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ Read More

ಮಧ್ಯ ಫಿಲಿಪೈನ್ಸ್‌ ನಲ್ಲಿ ಭೂಕಂಪನ:ಸಾವಿನ ಸಂಖ್ಯೆ 70ಕ್ಕೆ ಏರಿಕೆ

ಮನಿಲಾ: ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದ 6.9 ತೀವ್ರತೆಯ ಭೂಕಂಪದಿಂದಾಗಿ ಬೊಗೊ ನಗರ ಮತ್ತು ಸೆಬು ಪ್ರಾಂತ್ಯದ ಹೊರವಲಯದ ಗ್ರಾಮೀಣ ಪಟ್ಟಣಗಳಲ್ಲಿ ಮನೆಗಳು ನೈಟ್‌ಕ್ಲಬ್‌ಗಳು ಕುಸಿದು ಬಿದ್ದು ನೂರಾರು ನಿವಾಸಿಗಳು ನಿರಾಶ್ರಿತರಾಗಿದ್ದಾರೆ‌

ಬ್ಯಾಕ್‌ಹೋ ಮತ್ತು ಸ್ನಿಫರ್ ನಾಯಿಗಳ ಬೆಂಬಲದೊಂದಿಗೆ ಸೇನಾ ಪಡೆಗಳು, ಪೊಲೀಸರು ಮತ್ತು ನಾಗರಿಕ ಸ್ವಯಂಸೇವಕರನ್ನು ಬದುಕುಳಿದವರಿಗಾಗಿ ಮನೆ-ಮನೆಗೆ ಹುಡುಕಾಟ ನಡೆಸಲು ನಿಯೋಜಿಸಲಾಗಿದೆ.

ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನರಿರುವ ಕರಾವಳಿ ನಗರವಾದ ಬೊಗೊದ ಈಶಾನ್ಯಕ್ಕೆ ಸುಮಾರು 19 ಕಿಲೋಮೀಟರ್ ದೂರದಲ್ಲಿ ಭೂಕಂಪನ ಸಂಭವಿಸಿದೆ,

ಬೊಗೊದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೊಗೊ ಬಳಿಯ ಮೆಡೆಲಿನ್ ಪಟ್ಟಣದಲ್ಲಿ ಮನೆಗಳ ಛಾವಣಿಗಳು ಮತ್ತು ಗೋಡೆಗಳು ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದಾರೆ.

ಮಧ್ಯ ಫಿಲಿಪೈನ್ಸ್‌ ನಲ್ಲಿ ಭೂಕಂಪನ:ಸಾವಿನ ಸಂಖ್ಯೆ 70ಕ್ಕೆ ಏರಿಕೆ Read More