ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ:ಯುವತಿಯರು ಸೇರಿ ಹಲವರು ಅರೆಸ್ಟ್

ಮೈಸೂರು:‌ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿದ್ದ ಸ್ಥಳದ ಮೇಲೆ ಇಲವಾಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಯುವತಿಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಿ,
30ಕ್ಕೂ ಹೆಚ್ಚು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್.ಎಸ್.ಬ್ಯಾಕ್ ವಾಟರ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಇದನ್ನ ವ್ಯಕ್ತಿಯೊಬ್ಬ ಪ್ರಚಾರ ಮಾಡಿದ್ದರು, ಹಾಗಾಗಿ ಸುಮಾರು 25 ಕ್ಕೂ ಹೆಚ್ಚು ಜೋಡಿಗಳು ಪಾರ್ಟಿಗೆ ಹೆಸರು ನೊಂದಾಯಿಸಿ ಕೊಂಡಿದ್ದರು.ಈ ಪಾರ್ಟಿಗೆ ತಲಾ 2 ಸಾವಿರ ರೂ ಸಂಗ್ರಹಿಸಲಾಗಿತ್ತು ಎಂದು ಹೇಳಲಾಗಿದೆ.

ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಅಬ್ಬರದ ಸಂಗೀತವೂ ನಡೆದಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.

ಯಾರೊ‌ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಎಸ್ಪಿ ವಿಷ್ಣುವರ್ಧನ್ ಅವರ ನೇತೃತ್ವದಲ್ಲಿ ಅಡಿಷನಲ್ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಬಂಧಿಸಲಾದ ಯುವಕ ಯುವತಿಯರನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಪಾರ್ಟಿ ವೇಳೆ ಆಯೋಜಿಸಿದ್ದ ಸಂಗೀತ ಉಪಕರಣಗಳನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಯಾವುದೇ ಮಾದಕ ವಸ್ತು, ಗಾಂಜಾ ದೊರತಿಲ್ಲವೆಂದು ಎಸ್ ಪಿ ವಿಷ್ಣುವರ್ಧನ್ ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ:ಯುವತಿಯರು ಸೇರಿ ಹಲವರು ಅರೆಸ್ಟ್ Read More

ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ನವದೆಹಲಿ: ವ್ಯಕ್ತಿಯೊಬ್ಬ ತನ್ನ ನಾಲ್ಕು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವದೆಹಲಿಯ ರಂಗಪುರಿ ಪ್ರದೇಶದಲ್ಲಿ ನಡೆದಿದೆ.

ಮನೆಯೊಳಗಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಸಹಿಸಲಾಗದೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತರು ರಂಗಪುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಎಲ್ಲರೂ ಮೂಲತಃ ಬಿಹಾರದ ಛಪ್ರಾ ಜಿಲ್ಲೆಯ ನಿವಾಸಿಗಳು.

ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಹೀರಾಲಾಲ್ ಶರ್ಮಾ (46) ಮತ್ತು ಅವರ ಪುತ್ರಿಯರಾದ ನೀತು (26), ನಿಕ್ಕಿ (24), ನೀರೂ( 23), ಮತ್ತು ನಿಧಿ (20) ಎಂದು ಗುರುತಿಸಲಾಗಿದೆ.

ನಾಲ್ಕೂ ಹೆಣ್ಣು ಮಕ್ಕಳು ಜತೆಗೆ ಅವರಲ್ಲಿ ಇಬ್ಬರು ವಿಕಲಚೇತನರು,ಮಕ್ಕಳ ತಾಯಿ ಈಗಾಗಲೇ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದು ತಂದೆ ಮಕ್ಕಳನ್ನು ಮದುವೆ ಮಾಡಲಾಗದೆ‌ ಅವರ‌ ಔಷಧಿಗೆ‌ ಹಣ ಹೊಂದಿಸಲಾಗದೆ ಅಸಹಾಯಕನಾಗಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ

ಪೊಲೀಸರು ಮನೆಯ ಬೀಗ ಒಡೆದು ಎಲ್ಲಾ ಶವಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮನೆಯ ಒಂದು ರೂಮ್ ನಲ್ಲಿ ತಂದೆಯ ಶವ‌ ಪತ್ತೆಯಾಗಿದೆ.ಮತ್ತೊಂದು ಕೊಠಡಿಯಲ್ಲಿ ನಾಲ್ಕು ಹೆಣ್ಣು ಮಕ್ಕಳ ದೇಹ ಪತ್ತೆಯಾಗಿದೆ.

ಜತೆಗೆ ಮೂರು ಪ್ಯಾಕೆಟ್‌ ಸಲ್ಫರ್,ಒಂದು‌ ಗ್ಲಾಸ್,ಸ್ಪೂನ್ ಸಿಕ್ಕಿದ್ದು ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read More

ಪೋಕ್ಸೋ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ

ಬೆಳಗಾವಿ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪೋಕ್ಸೊ ಪ್ರಕರಣದಲ್ಲಿ ಬೆಳಗಾವಿಯಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಏಳು ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಹಾರೂಗೇರಿಯ 3 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದಿದ್ದ ಪ್ರಕರಣಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

21.9.2017 ರಂದು ಸುಧಾ ಅಪ್ಪಾಸಾಬ ಸನ್ನಕ್ಕಿನವರ ಎಂಬವರು ತನ್ನ 3 ವರ್ಷದ ಮಗಳ ಅಪಹರಣ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

21-09-2017 ರಂದು ಉದ್ದಪ್ಪ ರಾಮಪ್ಪ ಗಾಣಿಗೇರ (32) ಎಂಬಾತ ನಮ್ಮ ಮನೆಯ ಮುಂದೆ ಮಗಳನ್ನು ಅಪಹರಣ ಮಾಡಿದ್ದ ಎಂದು ದೂರು ನೀಡಿದ್ದರು.

ಹಾರೂಗೇರಿ ಪೊಲೀಸ್ ಠಾಣೆ‌ಯ
ಪಿಎಸ್‌ಐ ದೂರು ಸ್ವೀಕರಿಸಿಕೊಂಡು ತನಿಖೆ ಕೈಕೊಂಡಿದ್ದರು.

ಉದ್ದಪ್ಪ ರಾಮಪ್ಪ ಗಾಣಿಗೇರ ಮೂರು ವರ್ಷದ ಮಗುವನ್ನು ಅಪಹರಿಸಿ ಕುರಬಗೋಡಿಯಲ್ಲಿರುವ ಭೀಮಪ್ಪ ನೇಮಣ್ಣ ನಾಗನೂರ ಅವರ ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಮುಖದಿಂದ ಸೊಂಟದವರೆಗೆ ಮಣ್ಣು ಮುಚ್ಚಿಬಿಟ್ಟಿದ್ದ.

ತನಿಖಾಧಿಕಾರಿಯಾದ ಸಿಪಿಐ ಸುರೇಶ. ಪಿ. ಶಿಂಗಿ ಉದ್ದಪ್ಪ ಅವರು ರಾಮಪ್ಪ ಗಾಣಿಗೇರ ವಿರುದ್ಧ 8.12.2017 ರಂದು ದೋಷಾರೋಪಣ ಪಟ್ಟಿ ಸಿದ್ದಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಕೈಕೊಂಡು ಪ್ರಕರಣದ ಬಗ್ಗೆ ಸರ್ಕಾರಿ ಅಭಿಯೋಜಕ
ಎಲ್. ಬಿ. ಪಾಟೀಲ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಉದ್ದಪ್ಪ ರಾಮಪ್ಪ ಗಾಣಿಗೇರ ಅಪರಾಧಿ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ
ನ್ಯಾಯಾಲಯವು ಆತನಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ Read More

ಸ್ವಾಮೀಜಿಗೆ‌ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್

ತುಮಕೂರು: ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರಿನ ಮಠದ ಸ್ವಾಮೀಜಿಯೊಬ್ಬರಿಗೆ ಅಶ್ಲೀಲ ವಿಡಿಯೋ, ಫೋಟೋಗಳನ್ನು ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಮಹಿಳೆ ಬ್ಲ್ಯಾಕ್ ಮಾಡುತ್ತಿದ್ದಳು.

ಈ ಬಗ್ಗೆ ಸ್ವಾಮೀಜಿ ದೂರು ನೀಡಿದ್ದರು.ಈ ದೂರು ಆಧರಿಸಿ ಸಿಸಿಬಿ ಪೊಲೀಸರು ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾ ಬಿರಾದಾರ ಪಾಟೀಲ್ ಬಂಧಿತ ಮಹಿಳೆ,ವಿಜಯಪುರ ಮೂಲದ ವಿದ್ಯಾ ತನ್ನನ್ನು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷೆ, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸಹೋದರಿ ಎಂದು ಹೇಳಿ ವಂಚಿಸಲು ಯತ್ನಿಸಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸ್ವಾಮೀಜಿಗೆ‌ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್ Read More

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಜ್ಯ ರಾಜ್ದಾನು ಟೆರರಿಸ್ಟ್ ಗಳಿಗೆ ಫೇವರಿಟ್ ಆಗಿದೆಯೆ ಎಂಬ ಅನುಮಾನ ಕಾಡುತ್ತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಇಂದು ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿರುವುದು.

ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು,ಸುದ್ದಿ‌ತಿಳಿದು ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ.

ಗಿರಿಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಶಂಕಿತ ಉಗ್ರ.

ಉಗ್ರ ಗೌತಮ್ ಉಲ್ಫಾ ಸಂಘಟನೆಗೆ ಸೇರಿದವನು ಎಂಬುದು ಆರಂಭಿಕ ಮಾಹಿತಿಯಲ್ಲಿ ತಿಳಿದು ಗೊತ್ತಾಗಿದೆ.

ಗುವಾಹತಿಯಲ್ಲಿ ಐಇಡಿ ಬಾಂಬ್ ಇಟ್ಟು ಬೆಂಗಳೂರಿಗೆ ಫ್ಯಾಮಿಲಿ ಸಮೇತ ಬಂದಿದ್ದ ಈತ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಗೌತಮ್ ಎನ್ನುವ ಹೆಸರಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್​ಐಎ ತಂಡ ಈತನನ್ನು ಸೆರೆ ಹಿಡಿದಿದೆ.

ಶಂಕಿತ ಉಗ್ರ ಬೆಂಗಳೂರಿನಲ್ಲೂ ಕೂಡ ವಿಧ್ವಂಸಕಾರಿ ಕೃತ್ಯಕ್ಕೆ ಯೋಜನೆ ನಡೆಸಿದ್ದ ಎಂಬ ತಿಳಿದು ಬಂದಿವೆ. ಬಂಧಿತನಿಂದ ಮೊಬೈಲ್ ಮತ್ತು ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್ Read More

ದಸರಾ ಜಾವಾ ಮೋಟಾರ್ ಬೈಕ್,ಟಾಂಗಾ ಸವಾರಿ,ಪಾರಂಪರಿಕ ನಡಿಗೆ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ 2024 ರ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 4 ರಿಂದ 6 ರವರೆಗೆ ಬೆಳಿಗ್ಗೆ 7 ಗಂಟೆಯಿಂದ ಮೈಸೂರಿನ ರಂಗಾಚಾರ್ಲು ಪುರಭವನ( ಟೌನ್ ಹಾಲ್) ಆವರಣದಲ್ಲಿ ಆಯೋಜಿಸಲಾಗಿದೆ.

ಅಕ್ಟೋಬರ್ 4 ರಂದು ಪಾರಂಪರಿಕ ಜಾವಾ ಮೋಟಾರ್ ಬೈಕ್ ಸವಾರಿಯನ್ನು ಏರ್ಪಡಿಸಿದ್ದು, ಮೋಟಾರ್ ಬೈಕ್ ಸವಾರಿಗೆ 25 ರಿಂದ 50 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳು/ ಯುವಕರು ಹಾಗೂ ಪುರುಷರು ಭಾಗವಹಿಸಬಹುದಾಗಿದೆ.

ಮೊದಲು ನೋಂದಣಿ ಮಾಡಿಕೊಳ್ಳುವ 10 ಮಂದಿ ಜಾವ ಮೋಟಾರ್ ಬೈಕುವುಳ್ಳ ಆಸಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು.

ಮೋಟಾರ್ ಬೈಕ್ ಸವಾರಿ ಟೌನ್ ಹಾಲ್ ನಿಂದ ಪ್ರಾರಂಭವಾಗಿ ಅರಮನೆ ವೃತ್ತ ಸೇರಿ ನಗರದ ಪ್ರಮುಖ ರಸ್ತೆಗಳು,ವೃತ್ತಗಳಲ್ಲಿ ಸಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹತ್ತಿರ ಮುಕ್ತಾಯಗೊಳ್ಳಲಿದೆ.

ಟಾಂಗಾ ಸವಾರಿ:
ಅಕ್ಟೋಬರ್ 5 ರಂದು ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗಾಗಿ ಪಾರಂಪರಿಕ ಟಾಂಗಾ ಸವಾರಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನು 25 ರಿಂದ 55 ವರ್ಷ ವಯೋಮಿತಿಯುಳ್ಳ ದಂಪತಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದ್ದು, ಮೊದಲು ನೋಂದಣಿ ಮಾಡಿಕೊಳ್ಳುವ 50 ಜೋಡಿಗಳಿಗೆ ಮಾತ್ರ ಆದ್ಯತೆ ಮೇರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.

ಟಾಂಗಾ ಸವಾರಿಯು ರಂಗಾಚಾರ್ಲು ಪುರಭವನದಿಂದ ಪ್ರಾರಂಭವಾಗಿ ದೊಡ್ಡ, ಗಡಿಯಾರ ಗೋಪುರ ಮತ್ತಿತರ ಪ್ರಮುಖ ರಸ್ತೆಗಳಲ್ಲಿ ಸಾಗಿ ಗಾಂಧಿ ವೃತ್ತ ಹಾದು ಟೌನ್‌ಹಾಲ್ ಹತ್ತಿರ ಮುಕ್ತಾಯಗೊಳ್ಳಲಿದೆ.

ಪಾರಂಪರಿಕ ನಡಿಗೆ:
ಅಕ್ಟೋಬರ್ 6 ರಂದು ಪಾರಂಪರಿಕ ನಡಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ 18 ರಿಂದ 50 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳು/ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ.

ಮೊದಲು ನೋಂದಣಿ ಮಾಡಿಕೊಳ್ಳುವ 200 ಜನ ಆಸಕ್ತರಿಗೆ ಮಾತ್ರ ಪಾರಂಪರಿಕ ನಡಿಗೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.

ಮೂರು ದಿನಗಳಲ್ಲೂ ನಡೆಯುವ ಕಾರ್ಯಕ್ರಮಗಳಲ್ಲಿ ನುರಿತ ಇತಿಹಾಸ ಹಾಗೂ ಪುರಾತತ್ವ ತಜ್ಞರುಗಳು ಮೈಸೂರಿನ ವಿವಿಧ ಪಾರಂಪರಿಕ ಕಟ್ಟಡಗಳ ಪರಿಚಯವನ್ನು ಮಾಡಿಕೊಡಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಸೆಪ್ಟಂಬರ್ 23ರಿಂದ 30ರವರೆಗೆ ದೊಡ್ಡಕೆರೆ ಮೈದಾನದ ಕರ್ನಾಟಕದ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರನ್ನು ನೇರವಾಗಿ ಸಂಪರ್ಕಿಸಬಹಯದು.

ಅಥವಾ ದೂರವಾಣಿ ಹಾಗೂ ಕಚೇರಿಯ ಇ-ಮೇಲ್ ವಿಳಾಸ commramh@yahoo.in ಮತ್ತು ddheritagemysore@gmail.com ನ ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು

ಕಡ್ಡಾಯವಾಗಿ ದೂರವಾಣಿ ಅಥವಾ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕೆಂದು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸ್ಥಿರ ದೂ. ಸಂ:0821-2424671/ 2424673 ಹಾಗೂ ಉಪ ನಿರ್ದೇಶಕರಾದ(ಪರಂಪರೆ) ಡಾ.ಸಿ.ಎನ್.ಮಂಜುಳಾ ಅವರ ಮೊ.ಸಂ:83102 50733 ಮತ್ತು ಪ್ರಥಮ ದರ್ಜೆ ಸಹಾಯಕರಾದ ಶಶಿಧರ .ಎಸ್ ಅವರ ಮೊ.ಸಂ: 7349057976 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪುರಾರತ್ವ , ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ದಸರಾ ಜಾವಾ ಮೋಟಾರ್ ಬೈಕ್,ಟಾಂಗಾ ಸವಾರಿ,ಪಾರಂಪರಿಕ ನಡಿಗೆ ಕಾರ್ಯಕ್ರಮ Read More

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ‌ ಮುನಿರತ್ನ ಬಂಧನ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ತನಿಖೆಗೆ ಒಳಪಡಿಸಲಾಗುತ್ತದೆ.

ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿತ್ತು,ಆದರೆ ಎಲ್ಲ ಪ್ರಕ್ರಿಯೆ ಮುಗಿಸಿ ಶುಕ್ರವಾರ ಮುನಿರತ್ನ ಜೈಲಿನಿಂದ ಹೊರಬಂದ ತಕ್ಷಣ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದರು.

ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿತು.

7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಯಿತು.

ಮಾರ್ಗಮಧ್ಯೆಯೇ ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ.

ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್‌ ದಾಖಲಾಗಿತ್ತು.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.

ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು ಮುನಿರತ್ನ ನಾಯ್ಡು, ವಿಜಯ್‌ ಕುಮಾರ್‌, ಸುಧಾಕರ, ಕಿರಣ್‌ ಕುಮಾರ್‌, ಲೋಹಿತ್‌ ಗೌಡ, ಮಂಜುನಾಥ , ಲೋಕಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ‌ ಮುನಿರತ್ನ ಬಂಧನ Read More

ಸಿಬಿಐ ತೆನಿಖೆ ಎಂದು ಬೆದರಿಸಿ 42 ಲಕ್ಷ ವಂಚನೆ

ಮೈಸೂರು: ಖಾತೆಯಲ್ಲಿ ಕೋಟ್ಯಾಂತರ ಹಣ ಇಟ್ಟಿರುವುದಾಗಿ ಸುಳ್ಳು ಹೇಳಿ ಸಿಬಿಐ ತೆನಿಖೆ ನಡೆಯುತ್ತಿದೆ ಎಂದು ಬೆದರಿಸಿ ವ್ಯಕ್ತಿಯೊಬ್ಬರಿಗೆ 42 ಲಕ್ಷ ರೂ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಜೆಪಿ ನಗರ ನಿವಾಸಿ ಅಮೋಘ್ (42) ಹಣ ಕಳೆದುಕೊಂಡಿದ್ದಾರೆ.

ಅಪರಿಚಿತರು ಟೆಲಿಕಾಂ ಡಿಪಾರ್ಟ್ ಮೆಂಟ್ ನಿಂದ ಮಾತನಾಡುತ್ತಿರುವುದಾಗಿ ತಿಳಿಸಿ ನಿಮ್ಮ ಆಧಾರ್ ಕಾರ್ಡ್ ಮೂಲಕ ಸಿಮ್ ಖರೀದಿಯಾಗಿದ್ದು ಅದರಿಂದ ಕೆನರಾ ಬ್ಯಾಂಕ್ ಖಾತೆ ತೆರೆದು ಕೋಟ್ಯಾಂತರ ಹಣ ಇಟ್ಟಿರುವುದಾಗಿ ಅಮೋಘ್ ಗೆ ವಂಚಕರು ನಂಬಿಸಿದ್ದಾರೆ.

ಈ ಕುರಿತಂತೆ ಸಿಬಿಐ ತೆನಿಖೆ ನಡೆಯುತ್ತಿದೆ ಎಂದು ಬೆದರಿಸಿ ಅಮೋಘ್ ರವರ ಆಧಾರ್ ಕಾರ್ಡ್ ನಂ ಹಾಗೂ ಬ್ಯಾಂಕ್ ಖಾತೆಯ ವಿವರ ಪಡೆದು 42 ಲಕ್ಷ ವಂಚಿಸಿದ್ದಾರೆ.

ಮೋಸ ಹೋಗಿರುವುದು ಗೊತ್ತಾಗಿ ಅಮೋಘ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿಬಿಐ ತೆನಿಖೆ ಎಂದು ಬೆದರಿಸಿ 42 ಲಕ್ಷ ವಂಚನೆ Read More

ಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನು ಕೊಂದ ಪಾಪಿ ಪತಿ

ಮೈಸೂರು: ಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನು ಪತಿ ಭೀಕರವಾಗಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ರೋಜಾ(37) ಕೊಲೆಯಾದ ದುರ್ದೈವಿ.

ಪತಿ ಸ್ವಾಮಿನಾಯಕ ಪತ್ನಿಯನ್ನು ಕೊಂದು ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

12 ವರ್ಷಗಳ ಹಿಂದೆ ರೋಜಾ ಮತ್ತು ಸ್ವಾಮಿನಾಯಕ ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಅನ್ಯೋನ್ಯ ಜೀವನ ಸಾಗಿಸುತ್ತಿದ್ದರು.

5 ವರ್ಷಗಳ ಹಿಂದೆ ಪತಿಯನ್ನ ಕಳೆದುಕೊಂಡ ಮಹಿಳೆ ಸ್ವಾಮಿನಾಯಕನ ಜೊತೆ ಸಂಭಂಧ ಬೆಳೆಸಿದ್ದಾಳೆ.ಈ ವಿಚಾರ ರೋಜಾ ಗಮನಕ್ಕೆ ಬಂದು ಜಗಳವಾಗಿದೆ.

ಆಗ ಸ್ವಾಮಿನಾಯಕನಿಗೆ ಕುಟುಂಬಸ್ಥರು ಬುದ್ದಿವಾದ ಹೇಳಿದ್ದಾರೆ.ಆದರೂ‌ ಸ್ವಾಮಿನಾಯಕ ಮಹಿಳೆಯ ಜೊತೆಗಿನ ಸಂಬಂಧ ಮುಂದುವರಿಸಿದ್ದ.

ಇದೇ ವಿಚಾರದಲ್ಲಿ ಗಂಡ ಹೆಂಡತಿ ಮತ್ತೆ ಜಗಳವಾಡಿದ್ದಾರೆ,ರೋಜಾ ಮಹಿಳೆಯ ಸಂಬಂಧ ಬಿಡುವಂತೆ ಪಟ್ಟು ಹಿಡಿದಿದ್ದಾಳೆ.

ಹೊರಗೆ ಹೋಗಿದ್ದ ಸ್ವಾಮಿನಾಯಕ ನೀರು ಹಿಡಿಯಲು ಮನೆಯಿಂದ ಹೊರಬಂದ ರೋಜಾ ಮೇಲೆ ಮೊಚ್ಚಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ.ಇದರಿಂದ ರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ನಂತರ ಸ್ವಾಮಿನಾಯಕ ಬಿಳಿಕೆರೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಹಾಗೂ ಡಿವೈಎಸ್ಪಿ ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು,ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನು ಕೊಂದ ಪಾಪಿ ಪತಿ Read More

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಂಗಳೂರು: ದರ್ಶನ್ ಗೆ ರಾಜಾತಿಥ್ಯ ನೀಡಿದ್ದಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ಮೊಬೈಲ್, ಮಾದಕ ವಸ್ತು,ಹಣ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು, ಇದೀಗ ದಿಢೀರ್ ದಾಳಿ ನಡೆಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರು ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ನಾಗನ‌ ಫೋನ್ ಸೇರಿ ಸುಮಾರು 18 ಆಂಡ್ರಾಯ್ಡ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ Read More