ಯೋಗ ಹೇಳಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ: ಯೋಗ ಗುರು ಅರೆಸ್ಟ್

ಚಿಕ್ಕಮಗಳೂರು: ಪ್ರತಿದಿನ ಒಂದಲ್ಲಾ ಒಂದು ಲೈಂಗಿಕ ದೌರ್ಜನ್ಯದ ಬಗ್ಗೆ ಸುದ್ದಿ ಬರುತ್ತಲೇ ಇರುತ್ತದೆ,ಆದರೂ ವಿದ್ಯಾವಂತ ಮಹಿಳೆಯರೂ ಕೂಡ ಹೀಗೆ‌ ಮೋಸ ಹೋಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ನಿಜಕ್ಕೂ ದುರ್ಧೈವದ ಸಂಗತಿಯಾಗಿದೆ.

ಇದಕ್ಕೆ ಇಲ್ಲೊಂದು ಉದಾಹರಣೆ ಇದೆ.
ಯೋಗ ಕಲಿಯಲು ಬಂದ ಎನ್ ಆರ್ ಐ ವೈದ್ಯೆಯ ಮೇಲೆ ಯೋಗ ಗುರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಆಶ್ರಮವೊಂದರಲ್ಲಿ ಈ ಕೃತ್ಯ ನಡೆದಿದ್ದು, ಸಂತ್ರಸ್ತೆ ವೈದ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಯೋಗಗುರು ಪ್ರದೀಪ್ ನನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ವೈದ್ಯೆ ಮೇಲೆ ಯೋಗಗುರು ಪ್ರದೀಪ್​ ಅತ್ಯಾಚಾರವೆಸಗಿದ್ದಾನೆ ಎಂದು ದೂರು ನೀಡಲಾಗಿದೆ.

ಯೋಗಗುರು ಪ್ರದೀಪ್ ವಿರುದ್ಧ ಎನ್ಆರ್​ಐ ವೈದ್ಯೆ ಟ್ವಿಟರ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರದೀಪನ ಆಶ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿದುಕೊಂಡಿದ್ದ ವೈದ್ಯೆ, 3 ತಿಂಗಳ ಹಿಂದೆ ಆಶ್ರಮಕ್ಕೆ ಬಂದು ನೆಲೆಸಿದ್ದರು.

ಯೋಗಗುರು ಪ್ರದೀಪ್ ಕೇವಲ ಫೌಂಡೇಷನ್‌ ಮೂಲಕ ಯೋಗ ತರಬೇತಿ ನೀಡುತ್ತಿದ್ದು, ಇಲ್ಲಿಗೆ ದೇಶ, ವಿದೇಶದ ಅನೇಕ ಮಂದಿ ಬಂದು ಯೋಗ ಶಿಕ್ಷಣ ಪಡೆಯುತ್ತಾರೆ.

ಆನ್ ಲೈನ್ ಮೂಲಕವೂ ಯೋಗ ತರಬೇತಿ ನೀಡಲಾಗುತ್ತದೆ,ಪಂಜಾಬ್‌ ಮೂಲದ ವೈದ್ಯೆ 2020ರಲ್ಲಿ ಅಮೇರಿಕಾದಲ್ಲಿ ವೃತ್ತಿಯಲ್ಲಿದ್ದ ಸಂದರ್ಭದಲ್ಲಿ ಅವರ ಸ್ನೇಹಿತರಿಂದ ಈ ಯೋಗ ಕೇಂದ್ರದ ಬಗ್ಗೆ ಮಾಹಿತಿ ಪಡೆದು ಆನ್ಲೈನ್‌ ತರಗತಿಗೆ ಸೇರಿಕೊಂಡಿದ್ದರು.

ನಂತರ ಇಲ್ಲಿಗೆ ಬಂದು ತರಗತಿಯಲ್ಲಿ ಪಾಲ್ಗೊಳ್ಳುವಂತೆ ಪ್ರದೀಪ್‌ ಹೇಳಿದ್ದರಿಂದ ಆಕೆ ಚಿಕ್ಕಮಗಳೂರಿಗೆ ಬಂದು ಆತನ ಕೇಂದ್ರಕ್ಕೆ ಭೇಟಿ ನೀಡಿ 20 ದಿನ ತರಗತಿಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಆ ವೈದ್ಯೆಯ ಜತೆಗೆ ಸಲುಗೆ ಬೆಳೆಸಿಕೊಂಡ ಗುರು ಆತ್ಮೀಯನಾದ ದೈಹಿಕವಾಗಿಯೂ ಆಕೆಯನ್ನು ಬಳಸಿಕೊಂಡಿದ್ದಾನೆ. ‌

ನಂತರ 2020-21ರಲ್ಲೂ ಇಲ್ಲಿಗೆ ಬಂದು ಯೋಗ ತರಗತಿಯಲ್ಲಿ ಆಕೆ ಭಾಗಿಯಾಗಿದ್ದಾರೆ.ಆಗ ಕೂಡಾ ಯೋಗದ ಜತೆಗೆ ದೈಹಿಕ ಸಂಬಂಧ ಬೆಳೆಸಿದ್ದ‌ ಗುರು.

ಯೋಗಗುರು ಪ್ರದೀಪ್ ಇತರರ ಜತೆಗೂ ಇದೇ ರೀತಿ ಸಂಬಂಧ ಹೊಂದಿದ್ದಾನೆ ಎಂಬುದು ವೈದ್ಯಗೆ ಗೊತ್ತಾಗಿದೆ.

ನೊಂದ ವೈದ್ಯೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು,ಈಗ ಯೋಗಗುರು ಪ್ರದೀಪ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಯೋಗ ಹೇಳಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ: ಯೋಗ ಗುರು ಅರೆಸ್ಟ್ Read More

ಬಾಳೆ ತೋಟದಲ್ಲಿ ಮಹಿಳೆ ಶವಪತ್ತೆ:ಅತ್ಯಾಚಾರ‌ ಶಂಕೆ

ಮೈಸೂರು:ಬಾಳೆಯ ತೋಟದಲ್ಲಿ ಮಹಿಳೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಅತ್ಯಾಚಾರ ಶಂಕೆ‌ ವ್ಯಕ್ತವಾಗಿದೆ.

ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಶಿವಪುರ ಗ್ರಾಮದ ನಿವಾಸಿ ಶಶಿಕಲಾ (38) ಕೊಲೆಯಾದ ದುರ್ದೈವಿ.

ಗಟ್ಟವಾಡಿ ಗ್ರಾಮದ ನಂಜುಂಡಪ್ಪ ಎಂಬುವರಿಗೆ ಸೇರಿದ ಬಾಳೆ ತೋಟದಲ್ಲಿ ಅನುಮಾನಾಸ್ಪದವಾಗಿ ಶಶಿಕಲಾ ಮೃತದೇಹ ಪತ್ತೆಯಾಗಿದ್ದು,ತೋಟದ ಮಾಲೀಕನೆ ಅತ್ಯಾಚಾರ‌ ಎಸಗಿ ಕೊಲೆ ಮಾಡಿದ್ದಾನೆಂದು ಮೃತಳ ಸಹೋದರ ಮಹದೇವಯ್ಯ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಕ್ಷಣ ಆರೋಪಿ ನಂಜುಂಡಪ್ಪನನ್ನು ಬಂಧಿಸಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಾಲ್ಕು ವರ್ಷಗಳ ಹಿಂದೆ ಶಿವಪುರ ಗ್ರಾಮದ ನಾಗರಾಜ್ ಎಂಬಾತನನ್ನ ಶಶಿಕಲಾ ವಿವಾಹವಾಗಿದ್ದರು,ಕರೋನಾದಿಂದ ನಾಗರಾಜ್ ಮೃತಪಟ್ಟಿದ್ದಾರೆ.

ನಂತರ ಶಶಿಕಲಾ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು,ಅದಾದನಂತರ ನಂಜುಂಡಪ್ಪ ರವರ ಬಾಳೆ ತೋಟದಲ್ಲಿ ಕೆಲಸಕ್ಕೆ ಸೇರಿದ್ದರು.

ಇದೇ 23 ರಂದು ಕೆಲಸಕ್ಕೆ ಹೋದ ಶಶಿಕಲಾ ಮನೆಗೆ ಹಿಂದಿರುಗಿರಲಿಲ್ಲ.ತಂದೆ ಈ ಬಗ್ಗೆ ಮಗ ಮಹದೇವಯ್ಯ ಗೆ ತಿಳಿಸಿದ್ದಾರೆ.

ಇದೇ ವೇಳೆ ನಂಜುಂಡಪ್ಪ ಫೋನ್ ಮಾಡಿ ನಿನ್ನ ತಂಗಿ ಬಾಳೆ ತೋಟದಲ್ಲಿ ನೇಣು ಹಾಕಿಕೊಂಡಿದ್ದಾಳೆಂದು ತಿಳಿಸಿದ್ದಾನೆ.

ಸ್ಥಳಕ್ಕೆ ಹೋದಾಗ ಬಾಳೆಗಿಡದಲ್ಲಿ ಶಶಿಕಲಾ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿದೆ,ಎರಡು ಮಂಡಿಗಳು ನೆಲಕ್ಕೆ ತಾಗಿವೆ.

ಸ್ಥಳದಲ್ಲಿ ಕಬ್ಬಿಣದರಾಡು,ಹಾಸಿಗೆ,
ಚಾಪೆ,ದಿಂಬು,ಮೊಬೈಲ್ ಗಳು ದೊರೆತಿದೆ.ನನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ ಎಂದು ಸಹೋದರ ಮಹದೇವಯ್ಯ ಆರೋಪಿಸಿದ್ದಾರೆ.

ಬಾಳೆ ತೋಟದಲ್ಲಿ ಮಹಿಳೆ ಶವಪತ್ತೆ:ಅತ್ಯಾಚಾರ‌ ಶಂಕೆ Read More

ದಸರಾ ಕಳೆಗಟ್ಟುವಾಗಲೇ ಸ್ಫೋಟಕಗಳು ಪತ್ತೆ:ಮೈಸೂರಿನಲ್ಲಿ ಆತಂಕ

ಮೈಸೂರು, ಆ.23: ನಾಡ ಹಬ್ಬ ದಸರಾ ಮಹೋತ್ಸವ ಕಳೆಗಟ್ಟಲಾರಂಭಿಸಿರುವಾಗಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಸಮೀಪದ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.

ದುಷ್ಕರ್ಮಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಧಾವಿಸಿ ಸ್ಫೋಟಕಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಟ್ಯೂಬ್ ಆಕಾರದಲ್ಲಿರುವ 9 ಸ್ಫೋಟಕಗಳು ಹಾಗೂ ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಲಾರಂಭವಾದ ಹೊತ್ತಲ್ಲೇ ಸ್ಫೋಟಕ ಪತ್ತೆಯಾಗಿರುವುದು ಮೈಸೂರಿಗರಲ್ಲಿ ಆತಂಕ ಸೃಷ್ಟಿಸಿದೆ.

ದಸರಾ ಕಳೆಗಟ್ಟುವಾಗಲೇ ಸ್ಫೋಟಕಗಳು ಪತ್ತೆ:ಮೈಸೂರಿನಲ್ಲಿ ಆತಂಕ Read More

ಶಾಲಾ ಮಕ್ಕಳ ಹಾಲಿನ ಪೌಡರ್ ಕದ್ದಿದ್ದ ಮುಖ್ಯ ಶಿಕ್ಷಕ ಅಮಾನತು

ಮೈಸೂರು, ಆ.23: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಹಾಲಿನ ಪೌಡರ್ ಪ್ಯಾಕೇಟ್ ಕದ್ದೊಯ್ದಿದ್ದ ಮುಖ್ಯ ಶಿಕ್ಷಕನನ್ನು ಅಮಾನತುಪಡಿಸಲಾಗಿದೆ.

ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ನನ್ನು ಅಮಾನತು ಪಡಿಸಲಾಗಿದೆ.

ಇದೇ ಸೋಮವಾರ ಶಾಲೆಯಲ್ಲಿದ್ದ ಹತ್ತು ಹಾಲಿನ ಪೌಡರ್ ಪ್ಯಾಕೇಟ್ ಗಳನ್ನು ಕದ್ದೊಯ್ಯುತ್ತಿದ್ದಾಗ ಗ್ರಾಮಸ್ಥರೇ ಗಣೇಶ್ ನನ‌್ನು ರೆಡ್ ಹ್ಯಾಂಡ್ ಹ್ಯಾಂಡ್ ಆಗಿ ಹಿಡಿದಿದ್ದರು.

ದ್ವಿಚಕ್ರವಾಹನದ ಬ್ಯಾಗ್ ನಲ್ಲಿ 3 ಪ್ಯಾಕೇಟ್ ಮತ್ತು ಟೂಲ್ ಬಾಕ್ಸ್ ನಲ್ಲಿ 7 ಪ್ಯಾಕೇಟ್ ಸೇರಿ ಒಟ್ಟು 10 ಹಾಲಿನ ಪುಡಿ ಪ್ಯಾಕೇಟ್ ಕದ್ದೊಯ್ಯುತ್ತಿದ್ದಾಗ ಗ್ರಾಮದ ಜನರೇ ಗಣೇಶ್ ನನ್ನು ಹಿಡಿದಿದ್ದರು.

ಪಟ್ಟಣದ ನಿವಾಸಿ ಸಿಂಗರ್ ಸಿದ್ದರಾಜು ಮತ್ತಿತರರು ಶಿಕ್ಷಕನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದರು.

ಹಾಲಿನ ಪುಡಿ ಪ್ಯಾಕೇಟ್ ಗಳು
ಅವದಿ ಮೀರಿದ್ದರಿಂದ ಮನೆಗೆ ಕೊಂಡೊಯ್ಯುತ್ತಿದ್ದೆ ಎಂದು ಮುಖ್ಯ ಶಿಕ್ಷಕ ಗಣೇಶ್ ಸಮರ್ಥನೆ ನೀಡಿದ್ದ, ಆದರೆ ಪ್ಯಾಕೇಟ್ ಗಳನ್ನು ಪರಿಶೀಲನೆ ಮಾಡಿದಾಗ ಡಿಸೆಂಬರ್ 24 ರ ವರೆಗೂ ಅವಧಿ ಇರುವುದು ಬೆಳಕಿಗೆ ಬಂದಿತ್ತು.

ಸ್ಥಳಕ್ಕಾಗಮಿಸಿದ್ದ ಬಿ ಆರ್ ಸಿ ಕೃಷ್ಣಯ್ಯ ಮತ್ತು ಸಿಬ್ಬಂಧಿ ಪರಿಶೀಲನೆ ನಡೆಸಿ,
ಹಾಲಿನ ಪುಡಿ ಪ್ಯಾಕೇಟ್ ಸಮೇತ ದ್ವಿಚಕ್ರವಾಹನ ವಶಕ್ಕೆ ಪಡೆದಿದ್ದರು.

ನಂತರ ತಾಲೋಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿ ಗಣೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೃಷ್ಣಯ್ಯ ತಿಳಿಸಿದ್ದರು.

ಅವರು ಈ ಬಗ್ಗೆ ನೀಡಿದ್ದ ದೂರು ಆಧರಿಸಿ ಡಿಡಿಪಿ ಐ, ಶಿಕ್ಷಕ ಗಣೇಶ್ ನನ್ನು ಅಮಾನತುಮಾಡಿ ಆದೇಶ ಹೊರಡಿಸಿದ್ದಾರೆ.

ಶಾಲಾ ಮಕ್ಕಳ ಹಾಲಿನ ಪೌಡರ್ ಕದ್ದಿದ್ದ ಮುಖ್ಯ ಶಿಕ್ಷಕ ಅಮಾನತು Read More

ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 79,270 ರೂ ವಶ

ಮೈಸೂರು, ಆ.22: ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿ 79,270 ರೂ ವಶ ಪಡಿಸಿಕೊಂಡಿದ್ದಾರೆ.

ಮೈಸೂರಿನ ಕುವೆಂಪುನಗರ 2ನೇ ಹಂತ, ಎಂ ಬ್ಲಾಕ್ 10ನೇ ಕ್ರಾಸ್ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಅಂದರ್‌ಬಾಹರ್ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ದಾಳಿ ನಡೆಸಿತು.

ಈ‌ ವೇಳೆ ಜೂಜಾಟದಲ್ಲಿ ತೊಡಗಿದ್ದ 6 ಜನರುಗಳನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಪಣವಾಗಿಟ್ಟಿದ್ದ ಒಟ್ಟು 79,270 ರೂ ಹಣ ಮತ್ತು ಇತರೆ ಪರಿಕರಗಳನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 79,270 ರೂ ವಶ Read More

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ಮತ್ತು ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದರು.

ಮುಂಜಾನೆ ಸುಮಾರು 5 ಗಂಟೆಗೆ ಕಮಿಷನರ್ ಇಡಾ ಯಾರ್ಟಿನ್ ಮಾರ್ಬನಿಂಗ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಯಿತು.

40 ಅಧಿಕಾರಿಗಳು ಮತ್ತು 220ಕ್ಕೂ ಹೆಚ್ಚು ಸಿಬ್ಬಂದಿ ಈ ದಾಳಿ ನಡೆಸಿದರು, ಈ ವೇಳೆ
ಮೂರು ಚಾಕು,10 ತಂಬಾಕು ಪೊಟ್ಟಣ, ಸಿಗರೇಟು, ಸಣ್ಣ ಹೀಟರ್ ತಂತಿ ಬಂಡಲ್, ಎಲೆಕ್ಟ್ರಿಕ್ ತಾತ್ಕಾಲಿಕ ಒಲೆ ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿ 260ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ Read More

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ಮತ್ತು ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದರು.

ಮುಂಜಾನೆ ಸುಮಾರು 5 ಗಂಟೆಗೆ ಕಮಿಷನರ್ ಇಡಾ ಯಾರ್ಟಿನ್ ಮಾರ್ಬನಿಂಗ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಯಿತು.

40 ಅಧಿಕಾರಿಗಳು ಮತ್ತು 220ಕ್ಕೂ ಹೆಚ್ಚು ಸಿಬ್ಬಂದಿ ಈ ದಾಳಿ ನಡೆಸಿದರು, ಈ ವೇಳೆ
ಮೂರು ಚಾಕು,10 ತಂಬಾಕು ಪೊಟ್ಟಣ, ಸಿಗರೇಟು, ಸಣ್ಣ ಹೀಟರ್ ತಂತಿ ಬಂಡಲ್, ಎಲೆಕ್ಟ್ರಿಕ್ ತಾತ್ಕಾಲಿಕ ಒಲೆ ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿ 260ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ Read More

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್

ರಾಮನಗರ: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ ಮತ್ತು ಅವರ ಸರ್ಕಾರಕ್ಕೆ ಮುಟ್ಟಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

ನಮ್ಮ ಹೋರಾಟದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರ ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಮನಗರದ ಕೆಂಗಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ ವೇಣುಗೋಪಾಲ್, ಸುರ್ಜೇವಾಲಾ ಅವರು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ, ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ,ಹಗರಣದಲ್ಲಿ ಮುಳುಗಿದ ಸರ್ಕಾರದ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥನೆ ಮಾಡಲು ದೆಹಲಿ ಗಾಂಧಿ ಕುಟುಂಬದ ಸಂದೇಶವನ್ನು ನೀಡಿ ಹೋಗಿದ್ದಾರೆ ಎಂದು ವ್ಯಂಗ್ಯ ವಾಡಿದರು.

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್ Read More