ಬಾಲಿವುಡ್ ಗಾಯಕ ಜುಬಿನ್ ಗಾನಕ್ಕೆ ಮನಸೋತ ಯುವ ಸಮೂಹ

ಮೈಸೂರು: ಯುವ ದಸರಾ ಕಾರ್ಯಕ್ರಮದಲ್ಲಿ ಬಾಲಿವುಡ್ ಖ್ಯಾತ ಗಾಯಕ ಜುಬಿನ್ ನೌಟಿಯಾಲ ಅವರ ಹಾಡಿನ ಮೋಡಿಗೆ ಯುವಜನತೆ‌ ಫುಲ್ ಫಿದಾ ಆಗಿಬಿಟ್ಟರು.

ವಿಶ್ವ ವಿಖ್ಯಾತ ಮೈಸೂರು ದಸರಾ‌ ಮಹೋತ್ಸವ ಅಂಗವಾಗಿ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಯುವ ದಸರಾ ಉಪ ಸಮಿತಿಯಿಂದ ಆಯೋಜಿಸಲಾಗಿದ್ದ ಮೂರನೇ ದಿನದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ‌ ಬಾಲಿವುಡ್ ಖ್ಯಾತ ಗಾಯಕ ಜುಬಿನ್ ನೌಟಿಯಾಲ್ ಅವರ ಹೇ ತೋ ದಿಲ್ ಯಹ್ ರುಕ್ ಜಾ ಜರಾ ಎಂಬ ಹಾಡಿಗೆ ಯುವ ಸಮೂಹ ಕುಣಿದು ಕುಪ್ಪಳಿಸಿದರು.

ಗಿಟಾರ್ ಹಿಡಿದು ಹಿಂದಿ ಭಾಷೆಯ ವಿಶೇಷವಾದ ಹಾಡುಗಳಾದ ಮೊಹಬ್ಬತ್‌ ಕೆ ಮೇರಿ.. ಫಹಲಾ ಸಫರ್ ಮೇ.., ಏಕ್ ಮುಲಾಕಾತ್ ಹು.. ತ ಮೇರೆ ಪಾಸ್ ಹೋ.., ನಾ ಚಯನೆ ಸೇ ಜೀನಾ ದೇದಿ, ನಾ‌ ಚಯನೇ ಸೇ ಮರನಾ ದೇದಿ.., ಜಬ್ ಜಬ್ ತೇರೆ.. ಜಿಸ್‌ ಮೇ ಕಾ.. ಸೇರಿದಂತೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಸಯಾರಾ ಚಿತ್ರದ ಗೀತೆಗೆ ಮೊದಲ ಬಾರಿಗೆ ಯುವ ದಸರಾ ವೇದಿಕೆಯಲ್ಲಿ ತುಜಸೇ ದೂರ್ ಮೇ ಕಿ ವಜಾ ಕೆ ಲಿಯೇ ಹೂ…. ಗೀತೆ ಹಾಡಿ‌ ಮನಸೂರೆಗೊಂಡರು.

ತೆಲುಗು ಭಾಷಾ ಗಾಯಕ ಶ್ರೀರಾಮ್ ಚಂದ್ರ ಅವರ ಅಲ್ಲಾ‌ ತೂ ಆಯಿರೆ.. ಎಂಬ ಹಾಡಿನ‌ ಮೂಲಕ ಪ್ರಾರಂಭಿಸಿ, ಹಿಂದಿ ಹಾಡುಗಳಾದ ಯೇ‌ ಜವಾನಿ ಹೇ ದಿವಾನಿ‌ ಚಿತ್ರದ‌ ಸುಬಾನಲ್ಲಾ ಜೋ ಹೋ ರಹಾ ಹೇ… ಜವಾನ್ ಚಿತ್ರದ ಚಲಿಯಾ ತೇರಿ ಓರ್ ಕೇ, ಚಲೆಯಾ ಹೇ ಜೋರ್ ಕೇ.., ಕೇಸರಿಯಾ ತೇರಾ.., ರಬನೆ ಬನಾಯಾ.., ಎಂಬ ಗಾಯನದೊಂದಿಗೆ ನೃತ್ಯದ ಝಳಕ್ ಅನ್ನು‌ ಸಹ ಪ್ರದರ್ಶಿಸಿದರು.

ಜೊತೆಗೆ ಕನ್ನಡದ ಮುಂಗಾರು ಮಳೆ ಚಿತ್ರದ ಅನಿಸುತಿದೆ ಯಾಕೋ ಇಂದು.. ನೀನೇನೆ ನನ್ನವಳೆಂದು ಹಾಡುವ ಮೂಲಕ ಕನ್ನಡಿಗರ ಮನ ಗೆದ್ದರು.

ಬ್ರಹ್ಮಾಸ್ತ್ರದ ದೇವಾ ದೇವಾ ಹೋ. ದಿ ಬೀಸ್ಟ್ ಚಿತ್ರ ಸೇರಿದಂತೆ‌ ಸಾಕಷ್ಟು ಪ್ರಸಿದ್ಧ ತೆಲುಗು, ಹಿಂದಿ ಚಿತ್ರ‌ಗಳ ಹಾಡನ್ನು ಹಾಡುವ ಮೂಲಕ ನೆರೆದಿದ್ದ ಯುವ ಸಮೂಹ ಕುಣಿಯುವಂತೆ ಮಾಡಿದರು.

ಇದಕ್ಕೂ ಮುನ್ನ ಗಾಯಕ ಚಿನ್ಮಯ್ ಆತ್ರೇಯ ಅವರಿಂದ ಕರಾಟೆ ಕಿಂಗ್ ಶಂಕರ್ ಅವರ ಒಂದೇ ಒಂದು ಆಸೆಯು ತೋಳಲಿ ಬಳಸಲು.., ತೂ ಹೀ ಮೇರಿ ಶಬಿ ಹೇ ಸುಬಾ ಹೇ.. ತೂ ಹೀ ಮೇರಿ ದುನಿಯಾ.. ಎಂಬ ಬಾಲಿವುಡ್ ಗಾಯನಕ್ಕೆ, ರೂಪು ತೇರಾ ಮಸ್ತಾನ, ಪ್ಯಾರ್ ಮೇರಾ ದಿವಾನ ಎಂದು ರೆಟ್ರೋ ಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಅಲ್ಲದೇ ಡಾ.ರಾಜ್ ಕುಮಾರ್ ಅವರ ಹೊಸ ಬೆಳಕು ಮೂಡುತ್ತಿದೆ… ರವಿಚಂದ್ರನ್ ಅವರ ಯಾರೇ ನೀನು ರೋಜಾ ಹೂವೆ, ಯಾರೇ ನೀನು‌ ಮಲ್ಲಿಗೆ ಹೂವೇ…ಮತ್ತಿತರ ಕನ್ನಡದ ಹಾಡಿಗೆ ಧ್ವನಿಗೂಡಿಸಿದರು.

ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ವಿವಿಧ ಡ್ಯಾನ್ಸ್ ಶಾಲೆಗಳಿಂದ ಆಗಮಿಸಿದ್ದ ನೃತ್ಯಗಾರರು ಕನ್ನಡದ ಚಿತ್ರಗೀತೆಗೆ ನೃತ್ಯ ಪ್ರದರ್ಶಿಸಿದರು.

ಮೈಸೂರಿನ ಅಪ್ಪಟ ರೇಷ್ಮೆ ಸೀರೆಯನ್ನುಟ್ಟ ನಾರಿಯರು ವೇದಿಕೆಯಲ್ಲಿ ಚೆಂದದ ಕ್ಯಾಟ್ ವಾಕ್ ಮಾಡಿದರೆ, ಹುಡುಗರು ಕುರ್ತಾ ಶಲ್ಯ ಹಾಗೂ ಪಂಚೆ ಧರಿಸಿ, ಮಧು ಮಕ್ಕಳಂತೆ‌ ಹೆಜ್ಜೆ ಹಾಕಿದ್ದು‌ ವಿಶೇಷವಾಗಿತ್ತು.

ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವು ಹಾಗೂ ಪಶು ಸಂಗೋಪನಾ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಅವರಿಂದ ಕರ್ನಾಟಕ ರೇಷ್ಮೆ‌ ಉದ್ಯಮ ನಿಗಮ ಮತ್ತು ರೇಷ್ಮೇ ಸೀರೆ ಕುರಿತು ರಚಿಸಿ, ಪ್ರಕಟಿಸಿರುವ ಸ್ಟ್ಯಾನ್ಲಿ ಸತೀಶ್ ಅವರ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಕರ್ನಾಟಕ ರೇಷ್ಮೆ‌ ಉದ್ಯಮದ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಝಹೀರಾ ನಾಸೀಂ , ವಿಧಾನ ಪರಿಷತ್‌ ಸದಸ್ಯರಾದ ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರ ಗಣ್ಯರು ಹಾಜರಿದ್ದರು.

ಬಾಲಿವುಡ್ ಗಾಯಕ ಜುಬಿನ್ ಗಾನಕ್ಕೆ ಮನಸೋತ ಯುವ ಸಮೂಹ Read More

ಯುವ ದಸರಾ ಸೆ. 23ರಿಂದ ಪ್ರಾರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ದಸರಾ ಮಹೋತ್ಸವಗಳಲ್ಲಿ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ದಸರಾ ಸೆಪ್ಟಂಬರ್ 23ರಿಂದ ಪ್ರಾರಂಭವಾಗಲಿದೆ.

ಮೈಸೂರು ದಸರಾ ಅಂಗವಾಗಿ ನಡೆಯುವ ಯುವ ದಸರಾ ಉದ್ಘಾಟನೆಯು 23 ರಂದು ಸಂಜೆ 6 ಗಂಟೆಗೆ ಜ್ವಾಲಾಮುಖಿ ತ್ರಿಪುರಸುಂದರಿ ದೇವಸ್ಥಾನದ ಹತ್ತಿರ, ಉತ್ತನಹಳ್ಳಿ, ರಿಂಗ್ ರೋಡ್ ಪಕ್ಕದ ಮೈದಾನದಲ್ಲಿ ನೆರವೇರಲಿದೆ.

ಸೆಪ್ಟಂಬರ್ 23 ರಿಂದ ಸೆ.27ರವರೆಗೆ ಸಂಜೆ 5.30ರಿಂದ ರಾತ್ರಿ 10.30ರವರೆಗೆ ಯುವದಸರಾ ನಡೆಯಲಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ. ಪ್ರತೇಕ 5 ಸಾವಿರ ಮತ್ತು 2.5 ಸಾವಿರ ರೂಪಾಯಿಗಳ ಟಿಕೆಟ್‌ನ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು ಬುಕ್ ಮೈ ಶೋ (Book My Show) ನಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ಮೈಸೂರು ನಗರದ ವಿವಿಧ ಕಡೆಗಳಿಂದ ಬಸ್‌ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಹಾರ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ದಸರಾ ವಿಶೇಷಾಧಿಕಾರಿ ಹಾಗೂ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದ್ದಾರೆ.

ಯುವ ದಸರಾ ಕಾರ್ಯಕ್ರಮಗಳ ವಿವರ:
ಸೆಪ್ಟಂಬರ್ 23 ರಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಂಯೋಜನಕ ಅರ್ಜುನ್ ಜನ್ಯ ಮತ್ತು ಗಾಯಕರ ತಂಡ, ಲಗೋರಿ ಬ್ಯಾಂಡ್ ಖ್ಯಾತ ಗಾಯಕರ ತಂಡ
ಸೆಪ್ಟಂಬರ್ 24 ರಂದು ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಸಂಯೋಜಕರು ಮತ್ತು ಗಾಯಕರು ಪ್ರೀತಮ್ ಮತ್ತು ಶೋರ್ ಪೊಲೀಸ್ (ಖ್ಯಾತ ಗಾಯಕರ ತಂಡ)
ಸೆಪ್ಟಂಬರ್ 25 ರಂದು ಖ್ಯಾತ ಬಾಲಿವುಡ್ ಹಿನ್ನೆಲೆ ಗಾಯಕ ಜುಬಿನ್ ನೌಟಿಯಲ್ ಹಾಗೂ ಖ್ಯಾತ ಗಾಯಕ ಶ್ರೀರಾಮಚಂದ್ರರಿಂದ ಕಾರ್ಯಕ್ರಮ.
ಸೆಪ್ಟಂಬರ್ 26 ರಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಂಯೋಜಕರು ಮತ್ತು ಗಾಯಕರು ದೇವಿಶ್ರೀ ಪ್ರಸಾದ್ ಮತ್ತು ಆಸೀಸ್ ಕೌರ್ ಖ್ಯಾತ ಗಾಯಕರಿಂದ ಕಾರ್ಯಕ್ರಮ.
ಸೆಪ್ಟಂಬರ್ 27 ರಂದು ಖ್ಯಾತ ಬಾಲಿವುಡ್ ಹಿನ್ನೆಲೆ ಗಾಯಕರು ಸುನಿಧಿ ಚೌಹಾಣ್ ಮತ್ತು ಬೆಸ್ಟ್ ಕಪ್ಟ್ ಸಿಕ್ರೇಟ್ ಖ್ಯಾತ ಗಾಯಕರ ತಂಡದಿಂದ ಕಾರ್ಯಕ್ರಮ ಇರಲಿದೆ

ಯುವ ದಸರಾ ಸೆ. 23ರಿಂದ ಪ್ರಾರಂಭ Read More

ಮಣಿಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದಮೋದಿ:ಶಾಂತಿ ಕಾಪಾಡುವಂತೆ ಮನವಿ

ಇಂಫಾಲ: 2023ರ ಜನಾಂಗೀಯ ಹಿಂಸಾಚಾರದ ನಂತರ ಮೊದಲ ಬಾರಿಗೆ ಮಣಿಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ವೇಳೆ ಮಾತನಾಡಿದ ಮೋದಿ,
ಮಣಿಪುರದ ಜನರು ತಮ್ಮ ಮಕ್ಕಳ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ನಾನು ಮತ್ತು ಭಾರತ ಸರ್ಕಾರ ರಾಜ್ಯದ ಜನರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದರು. ಮಣಿಪುರದಲ್ಲಿ ಶಾಂತಿ ಮತ್ತು ಏಕತೆಗಾಗಿ ಮನವಿ ಮಾಡಿದರಲ್ಲದೆ,ಸ್ಥಿರತೆ, ನ್ಯಾಯ ಮತ್ತು ಸತ್ಯವಿಲ್ಲದೆ ಅಭಿವೃದ್ಧಿ ನಡೆಯಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದರು.

ಮಣಿಪುರ ಭಾರತದ ಪ್ರಗತಿಯ ಪ್ರಮುಖ ಸ್ತಂಭವಾಗಿದೆ. ಮಣಿಪುರದ ಭೂಮಿ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ ಮತ್ತು ಅದೇ ಸಮಯದಲ್ಲಿ, ಅವು ನಿಮ್ಮ ನಿರಂತರ ಕಠಿಣ ಪರಿಶ್ರಮವನ್ನು ಸಂಕೇತಿಸುತ್ತವೆ. ಮಣಿಪುರದ ಜನರ ಚೈತನ್ಯಕ್ಕೆ ನಾನು ವಂದಿಸುತ್ತೇನೆ ಎಂದು ನುಡಿದರು.

ಕೇಂದ್ರ ಸರ್ಕಾರವು ಮಣಿಪುರದ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಮೋದಿ ಭರವಸೆ ನೀಡಿದರು. ಎಲ್ಲಾ ಸಂಸ್ಥೆಗಳು ಶಾಂತಿಯುತವಾಗಿ ಒಟ್ಟಾಗಿ ಮುಂದುವರಿಯಿರಿ, ನಿಮ್ಮ ಕನಸುಗಳನ್ನು ನನಸಾಗಿಸಿ ಮತ್ತು ನಿಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಿ ಎಂದು ತಿಳಿಸಿದರು.

ಮಣಿಪುರ ಒಂದು ಕಾಲದಲ್ಲಿ ಭರವಸೆ ಮತ್ತು ಕನಸುಗಳನ್ನು ಹೊಂದಿತ್ತು, ಆದರೆ ಹಿಂಸಾಚಾರದ ಹಿಡಿತದಲ್ಲಿ ಸಿಲುಕಿತ್ತು. ಎಲ್ಲಿಯಾದರೂ ಅಭಿವೃದ್ಧಿ ನಡೆಯಬೇಕಾದರೆ, ಸತ್ಯ ಮತ್ತು ನ್ಯಾಯದ ಜೊತೆಗೆ ಶಾಂತಿ ಕೂಡಾ ಅತ್ಯಗತ್ಯ ದೃಢವಾಗಿ ಎಂದು ಪ್ರಧಾನಿ ಹೇಳಿದರು.

ಮಣಿಪುರದಲ್ಲಿ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಕ್ರಮವಾಗಿ, ಪ್ರಧಾನಿ ನರೇಂದ್ರ ಮೋದಿ ಚುರಾಚಂದ್‌ಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಿದರು.

ಪ್ರಮುಖ ಉಪಕ್ರಮಗಳಲ್ಲಿ 3,600 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮಣಿಪುರದ ರಸ್ತೆಗಳು, ಒಳಚರಂಡಿ ಮತ್ತು ಆಸ್ತಿ ನಿರ್ವಹಣಾ ಸುಧಾರಣಾ ಯೋಜನೆ, 2,500 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ಮಣಿಪುರ ಇನ್ಫೋಟೆಕ್ ಅಭಿವೃದ್ಧಿ ಯೋಜನೆ ಮತ್ತು 9 ಸ್ಥಳಗಳಲ್ಲಿ ಹರಡಿರುವ ಕೆಲಸ ಮಾಡುವ ಮಹಿಳಾ ಹಾಸ್ಟೆಲ್‌ಗಳು ಸೇರಿವೆ.

ಮಣಿಪುರದಲ್ಲಿ ಜೀವನವನ್ನು ಮತ್ತೆ ಹಳಿಗೆ ತರಲು, ನಿರಾಶ್ರಿತ ಕುಟುಂಬಗಳಿಗೆ 7,000 ಹೊಸ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುವುದು ಸೇರಿದಂತೆ ಭಾರತ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಸುಮಾರು 3,000 ಕೋಟಿ ರೂ. ವಿಶೇಷ ಪ್ಯಾಕೇಜ್ ಅನ್ನು ಅನುಮೋದಿಸಲಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮತ್ತು ಮಣಿಪುರದ ಬುಡಕಟ್ಟು ಯುವಕರನ್ನು ಬೆಂಬಲಿಸಲು ಕ್ರಮಗಳು ನಡೆಯುತ್ತಿವೆ ಎಂದು ಪ್ರಧಾನಿ ಭರವಸೆ ನೀಡಿದರು.

ಮಣಿಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದಮೋದಿ:ಶಾಂತಿ ಕಾಪಾಡುವಂತೆ ಮನವಿ Read More

ಹಾಸನ ಅಪಘಾತ:ಮೃತರ ಕುಟುಂಬಗಳಿಗೆ ತಲಾ‌ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ಹಾಸನ ಜಿಲ್ಲೆ, ಮೊಸಳೆಹೊಸಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ, ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವ ಘಟನೆ ನಿಜಕ್ಕೂ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.

ಹಾಸನ ಅಪಘಾತ:ಮೃತರ ಕುಟುಂಬಗಳಿಗೆ ತಲಾ‌ 2 ಲಕ್ಷ ಪರಿಹಾರ ಘೋಷಿಸಿದ ಮೋದಿ Read More

ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ‌ವಚನ ಸ್ವೀಕಾರ

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಶುಕ್ರವಾರ ಬೆಳಗ್ಗೆ 10ಗಂಟೆಗೆ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ‌ ಬಳಿಕ ಜಗದೀಪ್‌ ಧನಕರ್‌ ಮೊದಲ ಬಾರಿ ಕಾರ‍್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.

ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್‌ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು.

ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿ ಸುರ್ದಶನ್‌ ರೆಡ್ಡಿ ಪರಾಭವಗೊಂಡಿದ್ದರು.

ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ‌ವಚನ ಸ್ವೀಕಾರ Read More

ಸಿ.ಪಿ.ರಾಧಾಕೃಷ್ಣನ್ ಉಪ ರಾಷ್ಟ್ರಪತಿಯಾಗಿ ಆಯ್ಕೆ

ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರು 300 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಫಲಿತಾಂಶಗಳನ್ನು ಪ್ರಕಟಿಸಿದ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು, ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ನ್ಯಾಯಮೂರ್ತಿ(ನಿವೃತ್ತ) ಸುದರ್ಶನ್ ರೆಡ್ಡಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂದು ಪ್ರಕಟಿಸಿದರು.

ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ,ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವು ಗಣ್ಯರು ಮತದಾನ ಮಾಡಿದರು

ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಮತ್ತು ಎರಡು ಬಾರಿ ಲೋಕಸಭಾ ಸಂಸದರಾಗಿದ್ದ ರಾಧಾಕೃಷ್ಣನ್ ಅವರು ಈಗ ದೇಶದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿತ್ತು.ಸೆ.12 ರಂದು ರಾಧಾಕೃಷ್ಣನ್ ‌ಅಧಿಕಾರ ಸ್ವೀಕರಿಸಲಿದ್ದಾರೆ.

ಸಿ.ಪಿ.ರಾಧಾಕೃಷ್ಣನ್ ಉಪ ರಾಷ್ಟ್ರಪತಿಯಾಗಿ ಆಯ್ಕೆ Read More

ಎ ಐ ಐ ಎಸ್ ಹೆಚ್ ಸಂಸ್ಥೆಗೆ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ-ಸಿ.ಎಂ

ಮೈಸೂರು ಸೆ 1: ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ,ಅದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನಾರ್ಹ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಿದ್ದ
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ
ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ.
ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಖುಷಿ ವ್ಯಕ್ತಪಡಿಸಿದರು.

1966ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುನರ್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟ್ರೀಯ ಸಂಸ್ಥೆಯಾಗಿದೆ ಎಂದು ಹೇಳಿದರು.

ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂ ಮೀಸಲಿಟ್ಟಿದೆ ಎಂದು ಸಿಎಂ ಮಾಹಿತಿ ನೀಡಿದರು.

ಮಗು ಭ್ರೂಣಾವಸ್ಥೆಯಲ್ಲಿರುವಾಗಲೇ ಅದರ ಸಂವಹನದ ಸಮಸ್ಯೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಗಳಿಸಲು ನಮಗೆ ಸಾಧ್ಯವಾಗಿರುವುದು ಇಂತಹ ಪ್ರೀಮಿಯರ್ ಸಂಸ್ಥೆಗಳಿಂದಾಗಿ, ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿದೆ. ವಜ್ರ ಮಹೋತ್ಸವದ ಈ ಸಂದರ್ಭದಲ್ಲಿ ಈ ಸಂಸ್ಥೆಯಲ್ಲಿದ್ದುಕೊಂಡು ಸ್ವಸ್ಥ ಸಮಾಜದ ಏಳಿಗೆಗಾಗಿ ದುಡಿದ-ದುಡಿಯುತ್ತಿರುವ ತಜ್ಞರು, ಪ್ರಾಧ್ಯಾಪಕರು, ಸಹಾಯಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಹೇಳಿದರು.

60 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ವಾಕ್ ಮತ್ತು ಶ್ರವಣದೋಷದ ಸಮಸ್ಯೆಗಳು ಶಾಶ್ವತವಾಗಿ ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲ ಸಂಶೋಧನೆಗಳನ್ನು ಕೈಗೊಂಡು ಜಗತ್ತಿಗೆ ಬೆಳಕು ನೀಡಲಿ ಎಂದು ಸಿದ್ದರಾಮಯ್ಯ ಹಾರೈಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿದರು.
ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್, ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉಪಸ್ಥಿತರಿದ್ದರು.

ಎ ಐ ಐ ಎಸ್ ಹೆಚ್ ಸಂಸ್ಥೆಗೆ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ-ಸಿ.ಎಂ Read More

ಕಾರು ಅಪಘಾತ-ಶಾಸಕಿ ದೀಪ್ತಿ ಕಿರಣ್ ಗೆ ಗಂಭೀರ ಗಾಯ

ಜಯಪುರ: ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಇದ್ದ ಕಾರು ಅಪಘಾತವಾಗಿ ತೀವ್ರ ಗಾಯಗೊಂಡಿದ್ದಾರೆ.

ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಶಾಸಕಿ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ 1.30 ರ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್ ನೋಂದಣಿಯ ವಾಹನ ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಶಾಸಕಿ ದೀಪ್ತಿ ಮಹೇಶ್ವರಿ ಅವರ ಆಪ್ತ ಸಹಾಯಕ ಜೈ ಮತ್ತು ಚಾಲಕ ಧರ್ಮೇಂದ್ರ ಅವರೊಂದಿಗೆ ಪ್ರಯಾಣಿಸುತ್ತಿದ್ದರು.

ಮೂವರನ್ನೂ ತಕ್ಷಣ ಚಿಕಿತ್ಸೆಗಾಗಿ ಉದಯಪುರದ ಗೀತಾಂಜಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೀಪ್ತಿ ಮಹೇಶ್ವರಿ ಅವರ ಪಕ್ಕೆಲುಬಿಗೆ ತೊಂದರೆಯಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ.

ಕಾರು ಅಪಘಾತ-ಶಾಸಕಿ ದೀಪ್ತಿ ಕಿರಣ್ ಗೆ ಗಂಭೀರ ಗಾಯ Read More

ಅಹಿಂಸಾಪಾಲಕರಾದ ಜೈನರು ತೊಂದರೆ ಕೊಡಲ್ಲ,ಕೊಟ್ಟವರನ್ನು ಬಿಡಲ್ಲ-ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ

ಬೆಳ್ತಂಗಡಿ: ಸತ್ಯ ಮತ್ತು ಅಹಿಂಸಾ ಪರಿಪಾಲಕರಾದ ಜೈನರು ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ತೊಂದರೆ ಕೊಟ್ಟವರನ್ನು ನಾವು ಬಿಡುವುದಿಲ್ಲ ಎಂದು ತಮಿಳುನಾಡು ಅರಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದಲ್ಲಿ ಎಲ್ಲಾ ಜೈನಮಠಗಳ ಭಟ್ಟಾರಕರುಗಳ ನೇತೃತ್ವದಲ್ಲಿ ಆಯೋಜಿಸಿದ್ದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಮಾತನಾಡಿದರು.

ಸತ್ಯಮೇವ ಜಯತೇ ಎನ್ನುವಂತೆ ಸತ್ಯಕ್ಕೆ ಸದಾ ಜಯವಿದೆ. ಸತ್ಯಕ್ಕೆ ಎಂದೂ ಸಾವಿಲ್ಲ. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆ ನಿಂತ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಶೋಭೆ ಮತ್ತು ಕೀರ್ತಿಗೆ ಎಂದೂ ಚ್ಯುತಿ ಬಾರದು ಎಂದು ಹೇಳಿದರು.

ಶುಕ್ರವಾರ ಎಲ್ಲಾ ಭಟ್ಟಾರಕರುಗಳು ದೇವಸ್ಥಾನಕ್ಕೆ ಹೋಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ನ್ಯಾಯಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹೊರಗೆ ಬರುವಾಗ ದೇವಸ್ಥಾನದಲ್ಲಿ ಮಹಾಪೂಜೆಯೊಂದಿಗೆ ಘಂಟೆ ಬಾರಿಸಿತು. ಇದರಿಂದಾಗಿ ಸಣ್ಣ ಕಳಂಕ ಮಾಯವಾಯಿತು ಎಂದು ತಮಗೆ ತಿಳಿಯಿತು ಎಂದು ಸ್ವಾಮೀಜಿ ನುಡಿದರು.

ರಾಮಚಂದ್ರ, ಸೀತೆಯ ಹಾಗೆ ಮಹಾಪುರುಷರಿಗೂ ಕಷ್ಟ, ಅಪವಾದ ಬರುತ್ತದೆ. ಹಾಗೆ ಧರ್ಮಸ್ಥಳಕ್ಕೆ ಬಂದ ಸಣ್ಣ ಕಳಂಕ ದೋಷ ಅಲ್ಲ,ಈಗ ಸಣ್ಣ ಕಳಂಕವೂ ನಿವಾರಣೆಯಾಗಿದೆ.

ಧರ್ಮಸ್ಥಳ ಹಾಗೂ ಹೆಗ್ಗಡೆಯವರಿಗೆ ನ್ಯಾಯ ಸಿಗದಿದ್ದರೆ ಎಲ್ಲಾ ಭಟ್ಟಾರಕರುಗಳು ವಿಧಾನಸಭೆ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಎಚ್ಚರಿಸಿದರು.

ಖ್ಯಾತ ಸಾಹಿತಿ ನಾಡೋಜಾ ಹಂಪ ನಾಗರಾಜಯ್ಯ ಮಾತನಾಡಿ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಇಂದ್ರಿಯ ನಿಗ್ರಹ, ತಾಳ್ಮೆ, ಸಂಯಮ, ಗಾಂಭೀರ್ಯ, ಸ್ಥಿತಪ್ರಜ್ಞ ಶಕ್ತಿಯ ಪ್ರತಿಭೆಯನ್ನು ವರ್ಣಿಸಲಸದಳವಾಗಿದೆ ಎಂದು ತಿಳಿಸಿದರು.

ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಹೆಗ್ಗಡೆಯವರು ಮಾನವ ಅಲ್ಲ, ದೇವಮಾನವ ಎಂದು ಬಣ್ಣಿಸಿದರು.

ಶ್ರವಣಬೆಲಗೊಳ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ ಜೈನಧರ್ಮ ಮತ್ತು ಹಿಂದೂ ಧರ್ಮ ಸಮಗ್ರ ಸಮಾಜದ ಸಂಪರ್ಕ ಸೇತುವಾಗಿದೆ. ಹಿಂದೂಗಳನ್ನು ಮತ್ತು ಜೈನರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ,ದೂರುದಾರನ ಸುಳ್ಳು ಮಾತು ಕೇಳಿ ತೆಗೆಸಿದ ಹೊಂಡಗಳಲ್ಲಿ ಗಿಡಗಳನ್ನಾದರೂ ನೆಡಬೇಕು ಎಂದು ಸಲಹೆ ನೀಡಿದರು.

ಸೋಂದಾ ಮಠದ ಭಟ್ಟಾಕಳಂಕ ಸ್ವಮೀಜಿ,
ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ,
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ರಾಜಸ್ಥಾನದ ತಿಜಾರ ಮಠದ ಸೌರಭಸೇನ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ವರೂರು ಜೈನಮಠದ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಜೊತೆ ಸದಾ ತಾವೆಲ್ಲರೂ ಸೇವೆಗೆ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಭಾದ್ರಪದ ಮಾಸದಲ್ಲಿ ದಶಲಕ್ಷಣ ಪರ್ವ ಆಚರಣೆಯ ಶುಭಾವಸರದಲ್ಲಿ ಎಲ್ಲಾ ಮಠಾಧೀಶರುಗಳ ದರ್ಶನ ಭಾಗ್ಯ ಲಭಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ನುಡಿದರು.

ಸತ್ಯ, ಅಹಿಂಸೆ, ತ್ಯಾಗ, ಬ್ರಹ್ಮಚರ್ಯ ಇತ್ಯಾದಿ ದಶಧರ್ಮಗಳನ್ನು ಜೈನರು ನಿತ್ಯವೂ ಪಾಲಿಸುತ್ತಾರೆ. ಇಂತಹ ಪವಿತ್ರಪರ್ವದ ಸಂದರ್ಭದಲ್ಲಿ ಎಲ್ಲಾ ಭಟ್ಟಾರಕರುಗಳು ತಮಗೆ ಹಾಗೂ ಧರ್ಮಸ್ಥಳಕ್ಕೆ ಬೆಂಬಲ ನೀಡಿ, ನಿಮ್ಮ ಜೊತೆ ಸದಾ ಇದ್ದೇವೆ ಎಂದು ಭರವಸೆ ನೀಡಿರುವುದು ತಮಗೆ ಹೆಚ್ಚಿನ ಉತ್ಸಾಹ ಮತ್ತು ಪ್ರೇರಣೆ ನೀಡಿದೆ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು.

ತತ್ವ, ಸಿದ್ಧಾಂತ, ಧರ್ಮ ಇರುವುದು ಕೇವಲ ಓದಲು, ಉಪದೇಶಕ್ಕೆ ಮಾತ್ರ ಅಲ್ಲ. ಅದನ್ನು ನಾವು ನಿತ್ಯವೂ ಪಾಲಿಸಬೇಕು. “ಸಮ್ಯಕ್‌ದರ್ಶನ, ಜ್ಞಾನ ಚಾರಿತ್ರಾಣಿ ಮೋಕ್ಷ ಮಾರ್ಗಃ” ಎಂಬುದು ಜೈನ ಧರ್ಮದ ಸಾರವಾಗಿದೆ. ಅಂದರೆ ಸರಿಯಾದ ತತ್ವ ಸಿದ್ಧಾಂತಗಳ ಬಗ್ಯೆ ನಂಬಿಕೆ, ತಿಳುವಳಿಕೆ (ಜ್ಞಾನ) ಮತ್ತು ಆಚರಣೆಯಿಂದ ಮೋಕ್ಷಪ್ರಾಪ್ತಿಯಾಗುತ್ತದೆ ಎಂಬುದು ಜೈನ ಸಿದ್ಧಾಂತವಾಗಿದೆ. ಇದರ ಪ್ರತೀಕವಾಗಿ ಮೂರು ಎಳೆಗಳಿರುವ ಜನಿವಾರ (ಯಜ್ಞೋಪವೀತ) ವನ್ನು ಜೈನರು ಧರಿಸುತ್ತಾರೆ. ಇಂತಹ ಸಾತ್ವಿಕ ಹಾಗೂ ನೈತಿಕ ಜೀವನದಿಂದ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.ನಂತರ ಎಲ್ಲಾ ಭಟ್ಟಾರಕರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ಸಮಾವೇಶದಲ್ಲಿ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರೀಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಮತ್ತು ಸೋನಿಯಾ‌ ವರ್ಮ ಉಪಸ್ಥಿತರಿದ್ದರು.

ಅಹಿಂಸಾಪಾಲಕರಾದ ಜೈನರು ತೊಂದರೆ ಕೊಡಲ್ಲ,ಕೊಟ್ಟವರನ್ನು ಬಿಡಲ್ಲ-ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ Read More

ಐರನ್ ಮ್ಯಾನ್ ಆಗಿ ಹೊರಹೊಮ್ಮಿದ ಐಜಿಪಿ ಸಂದೀಪ ಪಾಟೀಲ

ಬೆಂಗಳೂರು: ಡೆನ್ಮಾರ್ಕನ ಕೊಪನ್ ಹೆಗನ್ ನಲ್ಲಿ ಡಬ್ಲ್ಯು ಟಿ ಸಿ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರ ಮಟ್ಟದ ಗ್ಲೋಬಲ್ ಚಾಲೆಂಜ್ ಫಿಟ್ನೆಸ್ ಸ್ಪರ್ಧೆಯಲ್ಲಿ ಐಜಿಪಿ ಸಂದೀಪ ಪಾಟೀಲ ಅವರು ಐರನ್ ಮ್ಯಾನ್’ ಆಗಿ ಹೊರಹೊಮ್ಮಿದ್ದಾರೆ.

2004ನೇ ಬ್ಯಾಚನ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯಾದ ಸಂದೀಪ್ ಪಾಟೀಲ ‘ಐರನ್ ಮ್ಯಾನ್’ ಆಗಿ ಹೊರಹೊಮ್ಮುವ ಮೂಲಕ ಭಾರತೀಯ ಪೊಲೀಸ್ ಹಾಗೂ ರಾಜ್ಯ ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿದ್ದಾರೆ.

ಟ್ರೈಯಥ್ಲಾನ್ ಸ್ಪರ್ಧೆಯು ಸಮುದ್ರದಲ್ಲಿ 3.8ಕಿಮೀ ಈಜು, ಅದೇ ಕ್ಷಣ 180ಕಿಮೀ ಸೈಕ್ಲಿಂಗ್ ಹಾಗೂ ಮರುಕ್ಷಣವೇ 45ಕಿಮೀ ರನ್ನಿಂಗ್ ಬಿಟ್ಟುಬಿಡದೇ 14.45 ಗಂಟೆಯಲ್ಲಿ ಮುಗಿಸುವ ಮೂಲಕ ಜಾಗತಿಕ ದಾಖಲೆ ನಿರ್ಮಿಸುವ ಚಾಲೆಂಜ್ ಆಗಿದ್ದು, ಇದರ ಸಾಧಕರನ್ನು ಐರನ್ ಮ್ಯಾನ್ ಎಂದು ಕರೆಯಲಾಗುತ್ತದೆ.

ಈ ಸ್ಪರ್ಧೆಗೆ ಕನಿಷ್ಠ ಒಂದು ವರ್ಷ ಮುಂಚೆಯಿಂದಲೇ ತಯ್ಯಾರಿ ಮಾಡಲಾಗುತ್ತದೆ, ಆಹಾರದಲ್ಲಿ ಮಾರ್ಪಾಡು ಮಡಿಕೊಂಡು ಮಾನಸಿಕವಾಗಿ ಸಿದ್ಧವಾಗಬೇಕಾಗುತ್ತದೆ.

ಮಾನವನ ದೇಹದ ಪಿಟ್ನೆಸ್ ಕಾಯ್ದುಕೊಳ್ಳುವ ಗರಿಷ್ಠ ಕಸರತ್ತು ಇದಾಗಿದೆ.

ಸಂದೀಪ ಪಾಟೀಲ ಅವರ ಸಾಧನೆಗೆ ಭಾರತ ಸರಕಾರ, ಕ್ರೀಡಾ ಪ್ರಾಧಿಕಾರ, ಕರ್ನಾಟಕ ಸರಕಾರ, ಐಪಿಎಸ್ ಅಸೋಸಿಯೇಷನ್ ಹಾಗೂ ರಾಜ್ಯ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ.

2011ರಲ್ಲಿ ಸಂದೀಪ ಪಾಟೀಲ ಬೆಳಗಾವಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಐರನ್ ಮ್ಯಾನ್ ಆಗಿ ಹೊರಹೊಮ್ಮಿದ ಐಜಿಪಿ ಸಂದೀಪ ಪಾಟೀಲ Read More