Uncategorized - https://varshininews.co.in Tue, 21 Apr 2026 17:34:48 +0000 en-US hourly 1 https://wordpress.org/?v=6.9.4 ತ್ರಿಶೂರ್ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ,13 ಮಂದಿ ಸಜೀವ ದಹನ https://varshininews.co.in/trissur-crackers-wing-blast/?utm_source=rss&utm_medium=rss&utm_campaign=trissur-crackers-wing-blast Tue, 21 Apr 2026 17:34:45 +0000 https://varshininews.co.in/?p=31855 ದೇಶದಲ್ಲೇ‌ ಪ್ರಸಿದ್ದವಾಗಿರುವ ತ್ರಿಶೂರ್ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ‌13 ಮಂದಿ ಸುಟ್ಟುಹೋದ ಘನಘೋರ ಘಟನೆ ನಡೆದಿದೆ.

The post ತ್ರಿಶೂರ್ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ,13 ಮಂದಿ ಸಜೀವ ದಹನ first appeared on .

]]>
ಕೇರಳ/ತ್ರಿಶೂರ್: ದೇಶದಲ್ಲೇ‌ ಪ್ರಸಿದ್ದವಾಗಿರುವ ತ್ರಿಶೂರ್ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ‌13 ಮಂದಿ ಸುಟ್ಟುಹೋದ ಘನಘೋರ ಘಟನೆ ನಡೆದಿದೆ.

ತ್ರಿಶೂರ್ ನ ಮುಂಡತಿಕ್ಕೋಡ್​​ನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ,
ಹಲವಾರು ಮಂದಿ ಗಾಯಗೊಂಡಿದ್ದಾರೆ.

ತ್ರಿಶೂರ್ ಪೂರಂ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದೆ.

13 ಕಾರ್ಮಿಕರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇರಳಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ‌

ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ದಟ್ಟ ಹೊಗೆಯಿಂದಾಗಿ ಅಗ್ನಿಶಾಮಕದಳ ಸಿಬ್ಬಂದಿಗೆ ಘಟಕದ ಒಳಗೆ ಹೋಗಲುಉ ಸಾಧ್ಯವಾಗಿರಲಿಲಲಲ್ಲ.

ಸ್ಪೋಟದ ತೀವ್ರತೆಗೆ ಕುಸಿದ ಗೋದಾಮಿನ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವಾರು ಕಾರ್ಮಿಕರು ಸಿಲುಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆ ಗೋದಾಮಿನಲ್ಲಿ ಉತ್ಸವದಲ್ಲಿ ಪಟಾಕಿ ಪ್ರದರ್ಶನಗಳಿಗಾಗಿ ಬೃಹತ್ ಪ್ರಮಾಣದ ಗನ್‌ಪೌಡರ್ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್, ಅಗ್ನಿಶಾಮಕ, ಆರೋಗ್ಯ, ಕಂದಾಯ ಮತ್ತು ವಿಪತ್ತು ನಿರ್ವಹಣೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ರಕ್ಷಣಾ ಪ್ರಯತ್ನಗಳಿಗಾಗಿ ಸಮನ್ವಯಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಕಾರ್ಯವಿಧಾನವನ್ನು ಸ್ಥಾಪಿಸಲಾಗಿದೆ.

ಜೀವಹಾನಿಗೆ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ. ಬಿಕ್ಕಟ್ಟನ್ನು ನಿರ್ವಹಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೆಚ್ಚುವರಿ 108 ಆಂಬ್ಯುಲೆನ್ಸ್‌ಗಳು ಸೇರಿದಂತೆ ವಿಶೇಷ ವೈದ್ಯಕೀಯ ಸೌಲಭ್ಯಗಳಿಗೆ ಆದೇಶಿಸಿದ್ದಾರೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ.

The post ತ್ರಿಶೂರ್ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ,13 ಮಂದಿ ಸಜೀವ ದಹನ first appeared on .

]]>
ಗುಂಡ್ಲುಪೇಟೆ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ https://varshininews.co.in/110-lakes-water-filling-yojana/?utm_source=rss&utm_medium=rss&utm_campaign=110-lakes-water-filling-yojana Tue, 21 Apr 2026 16:24:18 +0000 https://varshininews.co.in/?p=31853 ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ತಾಲೂಕಿನ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

The post ಗುಂಡ್ಲುಪೇಟೆ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ first appeared on .

]]>
(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 475 ಕೋಟಿ ರೂ. ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ಒಟ್ಟು 523 ಕೋಟಿ ರೂ. ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದ್ದು, ಗುಂಡ್ಲುಪೇಟೆ ತಾಲೂಕು ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ತಾಲೂಕಿನ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಂಜನಗೂಡು ತಾಲೂಕಿನ ಗಾಂಧಿ ಗ್ರಾಮದ ಬಳಿ ಕಬಿನಿ ನದಿಯಿಂದ ನೀರನ್ನು ಎತ್ತಿ ಗುಂಡ್ಲುಪೇಟೆ ತಾಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸಲಾಗುತ್ತಿದೆ. ಇದರಿಂದ ತಾಲೂಕಿನಲ್ಲಿ ಅಂತರ್ಜಲ ಹೆಚ್ಚಾಗಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಅನುದಾನ ನೀಡಿ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸಲಾಗುತ್ತಿದೆ. ಸ್ಥಳೀಯ ಶಾಸಕರ ಒತ್ತಾಸೆಯಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.

ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಸಾಧಿಸುತ್ತಿರುವುದಕ್ಕೆ ಇಂದು ಗುಂಡ್ಲುಪೇಟೆಯಲ್ಲಿ ನಡೆದಿರುವ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ನುಡಿದರು.

ಸರ್ಕಾರ ನುಡಿದಂತೆ ನಡೆದಿದೆ. ಸರ್ಕಾರ ಜಾರಿಗೆ ಬಂದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಒಟ್ಟು 1 ಲಕ್ಷ 60 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಸಮಾಜದಲ್ಲಿ ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಸೇರಿದಂತೆ ಎಲ್ಲರ ವರ್ಗಗಳ ಪರವಾಗಿ ಕೆಲಸ ಮಾಡುತ್ತಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ಸರ್ಕಾರವು ನಂಬಿಕೆ ಇಟ್ಟಿದೆ ಎಂದು ಸಿಎಂ ಹೇಳಿದರು.

ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ,ಇಂಧನ,ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳ ಮೂಲಕ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತೆರಕಣಾಂಬಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 30 ಹಾಸಿಗೆಗಳ ಆಸ್ಪತ್ರೆಯನ್ನಾಗಿಸಲಾಗಿದೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ನಾಳೆಯಿಂದಲೇ ಪ್ರಾರಂಭವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

 ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಧೈರ್ಯ ತುಂಬಿವೆ. ಅಂತರ್ಜಲ ವೃದ್ಧಿಸಲು ಕೆರೆಗಳನ್ನು ತುಂಬಿಸಲಾಗುತ್ತಿದೆ. ಕ್ಷೇತ್ರದ ಮಾಜಿ ಸಚಿವರಾದ ದಿ. ಎಚ್.ಎಸ್. ಮಹದೇವಪ್ರಸಾದ್ ಅಭಿವೃದ್ಧಿ ಕೆಲಸಗಳನ್ನು ಅವರ ಪುತ್ರರಾದ ಗಣೇಶ್ ಪ್ರಸಾದ್ ಅವರು ಮುಂದುವರೆಸುತ್ತಿದ್ದಾರೆ. ಹಸಿವುಮುಕ್ತ, ಬಡತನಮುಕ್ತ, ಅಸಮಾನತೆ ಮುಕ್ತ, ಅನಾರೋಗ್ಯ ಮುಕ್ತ ರಾಜ್ಯವನ್ನಾಗಿಸುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದರು. 

ಲೋಕೊಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾತನಾಡಿ ಕೆರೆಗೆ ನೀರು ತುಂಬಿಸುವ ಯೋಜನೆ ಗುಂಡ್ಲುಪೇಟೆಯಲ್ಲಿ ಮಾತ್ರವಲ್ಲ, ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಆಗಬೇಕು. ಜಿಲ್ಲೆಯ ಅಭಿವೃದ್ಧಿಗೆ ಕಳೆದ ವರ್ಷ ನಡೆದ ಸಂಪುಟ ಸಭೆಯಲ್ಲಿ ವಿಶೇಷ ಅನುದಾನ ನೀಡಲಾಗಿದೆ. ಜಿಲ್ಲೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿವೆ. ತಾಲೂಕು ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮನವಿ ಸಲ್ಲಿಸಿದ್ದಾರೆ. ಮನವಿಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಲೋಕಸಭಾ ಸದಸ್ಯ ಸುನೀಲ್ ಬೋಸ್ ಮಾತನಾಡಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಈ ಭಾಗದ ರೈತರಿಗೆ ತುಂಬಾ ಅನುಕೂಲವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಸರ್ಕಾರವು ಬಡವರು, ರೈತರ, ಮಹಿಳೆಯರ ಪರವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡಿದ್ದಾರೆ ಎಂದು ಹೇಳಿದರು.

ಪ್ರಾಸ್ತವಿಕವಾಗಿ ಮಾತನಾಡಿದ ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ತಾಲೂಕಿನ ಇತಿಹಾಸದಲ್ಲಿಯೇ ಇದೊಂದು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ್ದಾರೆ. ಇದರಿಂದ ತಾಲೂಕಿನ 100ಕ್ಕೂ ಹೆಚ್ಚು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ರಾಜ್ಯದಲ್ಲಿಯೇ ಮೊದಲಬಾರಿಗೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡ ಆರಂಭವಾಗಿದೆ. ಪಟ್ಟಣದ ಒಳಚರಂಡಿ ವ್ಯವಸ್ಥೆಗಾಗಿ ಅನುದಾನ ಸರ್ಕಾರದಿಂದ ಮಂಜೂರಾಗಿದೆ ಎಂದು ತಿಳಿಸಿದರು.

ಗುಂಡ್ಲುಪೇಟೆ ತಾಲೂಕು ಕೇರಳ ಹಾಗೂ ತಮಿಳುನಾಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದ್ದು, ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಸಂಚಾರಿ ಠಾಣೆ ಅತ್ಯವಶ್ಯಕವಾಗಿದೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಆರಂಭವಾಗಿದೆ. ಮುಖ್ಯಂಮತ್ರಿಗಳು ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನ ತಂದು ತಾಲೂಕು ಅಭಿವೃದ್ಧಿಗೆ ಕಾಳಜಿ ವಹಿಸಲಾಗುವುದೆಂದು ಗಣೇಶ್ ಪ್ರಸಾದ್ ಭರವಸೆ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ 25 ಮಂದಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.

ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಾಜಿ ಸಚಿವರಾದ ಗೀತಾ ಮಹದೇವಪ್ರಸಾದ್, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

The post ಗುಂಡ್ಲುಪೇಟೆ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ first appeared on .

]]>
ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಿ ನುಡಿದಂತೆ ನಡೆದಿದ್ದೇವೆ- ಡಿಕೆಶಿ https://varshininews.co.in/gundlupet-dcm-d-k-shivkumar/?utm_source=rss&utm_medium=rss&utm_campaign=gundlupet-dcm-d-k-shivkumar Tue, 21 Apr 2026 16:06:00 +0000 https://varshininews.co.in/?p=31850 ಗುಂಡ್ಲುಪೇಟೆ ತಾಲ್ಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ‌ ಡಿ.ಕೆ.ಶಿವಕುಮಾರ್ ಮಾತನಾಡಿದರು.

The post ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಿ ನುಡಿದಂತೆ ನಡೆದಿದ್ದೇವೆ- ಡಿಕೆಶಿ first appeared on .

]]>
ಗುಂಡ್ಲುಪೇಟೆ: ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ನೀಡುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಉದ್ಯೋಗ ನೀಡಿದ್ದರಿಂದ ಆ ಕುಟುಂಬದ ಮಹಿಳೆಯರು ಹಾಗೂ ಮಕ್ಕಳ ಮುಖದಲ್ಲಿ ನಗು ನೋಡಿ ನಮ್ಮ ಬದುಕು ಸಾರ್ಥಕವೆನಿಸಿದೆ ಎಂದು ನುಡಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿ.ಕೆ. ಶಿ ಮಾತನಾಡಿದರು.

ಜೀವನಕ್ಕಿಂತ ಮಿಗಿಲಾದದ್ದು ನೆಮ್ಮದಿ, ನೆಮ್ಮದಿಗಿಂತ ಮಿಗಿಲಾದದ್ದು ನಂಬಿಕೆ, ನಂಬಿಕೆಗಿಂತ ಮಿಗಿಲಾದದ್ದು ಆತ್ಮವಿಶ್ವಾಸ, ಆತ್ಮವಿಶ್ವಾಸಕ್ಕಿಂತ ಮಿಗಿಲಾದದ್ದು ನಾವು ನುಡಿದಂತೆ ನಡೆದ ಮಾತು. ನಾನು ಹಾಗೂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಬಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಲ್ಲಿ ನಡೆದ 33 ಮಂದಿಯ ಕೊಲೆ ಪರಿಶೀಲನೆ ಮಾಡಿದ್ದೆವು. ಅಂದು ಬಿಜೆಪಿ ಸರ್ಕಾರ ಆಸ್ಪತ್ರೆಯಲ್ಲಿ ಸತ್ತವರು ಕೇವಲ 3 ಮಂದಿ ಎಂದು ಹೇಳಿತ್ತು. ನಾನು, ಸಿದ್ದರಾಮಯ್ಯ ಹಾಗೂ ಧ್ರುವನಾರಾಯಣ್, ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ ಅವರು ಎಲ್ಲರ ಗಮನ ಸೆಳೆದು ಮೃತರ ಕುಟುಂಬಕ್ಕೆ ಭೇಟಿ ಮಾಡಿ ಅವರಿಗೆ ನ್ಯಾಯ ಒದಗಿಸುವ ಮಾತು ಕೊಟ್ಟಿದ್ದೆವು. ನಾವು ನುಡಿದಂತೆ ನಡೆದಿರುವುದು ನಮ್ಮ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ಕೆ ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್, ಶರಣಪ್ರಕಾಶ್ ಪಾಟೀಲ್ ಹಾಗೂ ಅಧಿಕಾರಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿಕೆಶಿ ಹೇಳಿದರು.

ಕೋವಿಡ್ ಸಮಯದಲ್ಲಿ ಲಕ್ಷಾಂತರ ಮಂದಿ ಸತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸಲು ಸಾಧ್ಯವಾಗದೇ ಇರಬಹುದು. ಆದರೆ ಈ ಜಿಲ್ಲೆಯಲ್ಲಿ ಸತ್ತವರ ಕುಟುಂಬವನ್ನು ಭೇಟಿ ಮಾಡಿ, ಪಕ್ಷದ ವತಿಯಿಂದ ಪರಿಹಾರ ನೀಡಿ, ಅವರಿಗೆ ಆತ್ಮಸ್ಥೈರ್ಯ ತುಂಬಿದ್ದೇವೆ ಎಂದು ತಿಳಿಸಿದರು.

ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ. ಈ ಕ್ಷೇತ್ರದಲ್ಲಿ ಮಹದೇವ ಪ್ರಸಾದ್ ಅವರು ನಿಮ್ಮ ಹೃದಯ ಗೆದ್ದು ಕೆಲಸ ಮಾಡಿಕೊಂಡು ಬಂದಿದ್ದರು. ಇಂದು ನೀವು ಅವರ ಮಗನನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ, ಅವರು ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ನಾನು ಚುನಾವಣೆ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಗುಂಡ್ಲುಪೇಟೆಗೆ ಬಂದಿದೆ. ಆಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಎಂದು ಹೇಳಿದ್ದೆ. ಈ ಕೈ ಅಧಿಕಾರದಲ್ಲಿ ಇದ್ದ ಕಾರಣಕ್ಕೆ ಜಿಲ್ಲೆಯ ಈ 25 ಸಂತ್ರಸ್ತ ಕುಟುಂಬ ಸದಸ್ಯರಿಗೆ ಉದ್ಯೋಗ ಸಿಕ್ಕಿದೆ. 500 ಕೋಟಿ ವೆಚ್ಚದಲ್ಲಿ ಈ ಭಾಗದ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಿಕ್ಕಿದೆ ಎಂದು ಸರ್ಕಾರ ನೀಡುತ್ತಿರುವ ಯೋಜನೆ ವಿವರಿಸಿದರು.

ನಾವು ಜಾತಿ, ಧರ್ಮ ಹಾಗೂ ಪಕ್ಷದ ಆಧಾರದ ಮೇಲೆ ಯೋಜನೆಗಳನ್ನು ನೀಡುತ್ತಿಲ್ಲ. ನಾನು ಅಸ್ಸಾಂ ವಿಧಾನಸಭಾ ಚುನಾವಣೆಗೆ ಹೋಗಿದ್ದೆ. ಅಲ್ಲಿನ ಬಿಜೆಪಿ ಸರ್ಕಾರ ನಮ್ಮ ಕಾರ್ಯಕ್ರಮ ನೋಡಿ ಅಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಅಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಗ್ಯಾರಂಟಿ ಯೋಜನೆ ನೀಡುತ್ತಿದ್ದಾರೆ. ನಾವು ನಮ್ಮ ರಾಜ್ಯದಲ್ಲಿ ದಳ, ಬಿಜೆಪಿ ಎಂದು ನೋಡದೇ ಎಲ್ಲ ಅರ್ಹ ಫಲಾನುಭವಿಗಳಿಗೆ ಯೋಜನೆ ನೀಡುತ್ತಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಇತಿಹಾಸ ಎಂದು ಹೇಳಿದರು.

ಗಣೇಶ್ ಪ್ರಸಾಸ್ ಅವರ ಬೇಡಿಕೆಯಂತೆ ಇಂದು ಈ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು 475 ಕೋಟಿ ವೆಚ್ಚದಲ್ಲಿ 110 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂತಹ ಯಾವುದಾದರೂ ಒಂದು ಕಾರ್ಯಕ್ರಮ ಕೊಟ್ಟಿದ್ದರಾ ಅವರದ್ದು ಏನಿದ್ದರೂ ಖಾಲಿ ಬುಟ್ಟಿ ಬೇವಿನ ಸೋಪ್ಪು ಎಂದು ಡಿಕೆಶಿ ಟೀಕಿಸಿದರು.

ನಾನು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಹೇಳುವುದೊಂದೆ. ಟೀಕೆಗಳನ್ನು ಮಾಡುವುದು ಬಹಳ ಸುಲಭ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಮೇಕೆದಾಟು ಯೋಜನೆಗೆ ಸಂಕಲ್ಪ ಮಾಡಿದ್ದೇವೆ. ಮನಸ್ಸಿದ್ದಲ್ಲಿ ಮಾರ್ಗವಿದೆ. ಶ್ರಮವಿದ್ದಲ್ಲಿ ಫಲವಿದೆ. ಗಣೇಶ್ ಪ್ರಸಾದ್ ಅತ್ಯುತ್ತಮ ಶಾಸಕ, ಮಹದೇವ್ ಪ್ರಸಾದ್ ಅವರ ಸ್ಥಾನವನ್ನು ತುಂಬುವ ಶಕ್ತಿ ಅವರಿಗಿದೆ. ನಾವು ಅವರನ್ನು ಬೆಳೆಸಬೇಕು. ಅವರು ನಿಮ್ಮ ಆಸ್ತಿಯಾಗಿ ಬೆಳೆಯಲಿದ್ದಾರೆ. ನಮ್ಮ ಧ್ರುವನಾರಾಯಣ್ ಅವರ ಪುತ್ರ ದರ್ಶನ್, ಪುಟ್ಟರಂಗಶೆಟ್ಟಿ, ಕೃಷ್ಣಮೂರ್ತಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇಡೀ ಸರ್ಕಾರ ನಿಮ್ಮ ಕೈ ಬಲಪಡಿಸಲು ಬಂದಿದ್ದೇವೆ. ಹಸಿವುಮುಕ್ತ, ಬಡತನಮುಕ್ತ, ಅಸಮಾನತೆ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದೇವೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಡಿ.ಕೆ.ಶಿವಕುಮಾರ್ ಜನತೆಯಲ್ಲಿ ಮನವಿ ಮಾಡಿದರು.

The post ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಿ ನುಡಿದಂತೆ ನಡೆದಿದ್ದೇವೆ- ಡಿಕೆಶಿ first appeared on .

]]>
ಧರ್ಮದ ರಕ್ಷಣೆ,ತತ್ವ ಸಿದ್ಧಾಂತಗಳ ಪ್ರಚಾರಕ್ಕೆ ಹಗಲಿರುಳು ಶ್ರಮಿಸಿದ ಶಂಕರಾಚಾರ್ಯರು-ಶ್ರೀವತ್ಸ https://varshininews.co.in/shankara-ratotsava-agrahar/?utm_source=rss&utm_medium=rss&utm_campaign=shankara-ratotsava-agrahar Tue, 21 Apr 2026 15:55:05 +0000 https://varshininews.co.in/?p=31847 ಅಗ್ರಹಾರದಲ್ಲಿ ಮಂಗಳವಾರ ಅಭಿನವ ಶಂಕರ ನಿಲಯದ ಶಂಕರ ಮಠದಲ್ಲಿ ಶಂಕರಾಚಾರ್ಯರ ಜಯಂತ್ಯುತ್ಸವ ಅಂಗವಾಗಿ ಶಂಕರ ರಥೋತ್ಸವಕ್ಕೆ‌ ಶ್ರೀವತ್ಸ ಚಾಲನೆ ನೀಡಿದರು.

The post ಧರ್ಮದ ರಕ್ಷಣೆ,ತತ್ವ ಸಿದ್ಧಾಂತಗಳ ಪ್ರಚಾರಕ್ಕೆ ಹಗಲಿರುಳು ಶ್ರಮಿಸಿದ ಶಂಕರಾಚಾರ್ಯರು-ಶ್ರೀವತ್ಸ first appeared on .

]]>
ಮೈಸೂರು: ದೇಶದಲ್ಲಿ ಸನಾತನ ಹಿಂದೂ ಧರ್ಮದ ರಕ್ಷಣೆ ಮತ್ತು ತತ್ವ ಸಿದ್ಧಾಂತಗಳ ಪ್ರಚಾರಕ್ಕೆ ಹಗಲಿರುಳು ಶ್ರಮಿಸಿದ ಆದಿ ಶಂಕರಾಚಾರ್ಯರು ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

ಸಹಸ್ರಾರು ವರ್ಷದ ಹಿಂದೆಯೇ 7ನೇ ಶತಮಾನದಲ್ಲಿ ಹಿಂದೂ ರಾಷ್ಟ್ರದ ಪ್ರಾತಃ ಸ್ಮರಣೀಯ ಆಚಾರ್ಯರಾಗಿ ವೇದ ಉಪನಿಷತ್ ಶಾಸ್ತ್ರ ಹಿಂದೂ ಧರ್ಮವನ್ನ ಪುನರ್ ಪ್ರತಿಪಾದಿಸಿದರು ಎಂದು ತಿಳಿಸಿದರು.

ನಗರದ ಅಗ್ರಹಾರದಲ್ಲಿ ಮಂಗಳವಾರ ಅಭಿನವ ಶಂಕರ ನಿಲಯದ ಶಂಕರ ಮಠದಲ್ಲಿ ಶಂಕರಾಚಾರ್ಯರ ಜಯಂತ್ಯುತ್ಸವ ಅಂಗವಾಗಿ
ಶಂಕರ ರಥೋತ್ಸವಕ್ಕೆ‌ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ಪೂಜಿಸುವವನೆ ನಿಜವಾದ ಸನ್ಯಾಸಿಯಾಗುತ್ತಾನೆ ಅಂತಹ ಮಹಾನ್ ಕಾರ್ಯವನ್ನು ಶಂಕರರು ಮಾಡಿದರು. ತಮ್ಮ 12ನೇ ವಯಸ್ಸಿನಲ್ಲಿಯೆ ಎಲ್ಲ ಶಾಸ್ತ್ರಗಳನ್ನು ಓದಿ ಕಾಲ್ನಡಿಗೆಯಲ್ಲಿಯೆ ದೇಶ ಸಂಚಾರ ಮಾಡಿ ಸಮಗ್ರ ಸನಾತನ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿದರು ಎಂದು ತಿಳಿಸಿದರು.

ನಂತರ ಭಕ್ತರಿಗೆ ಪೂಜೆ, ಅಭಿಷೇಕ, ತೀರ್ಥ ಪ್ರಸಾದ ಜರುಗಿತು.

ಅಗ್ರಹಾರದ ಶಂಕರ ಮಠದ ರಸ್ತೆಯಿಂದ ಪ್ರಾರಂಭಗೊಂಡು ರಾಮಾನುಜ ರಸ್ತೆ ಹಾಗೂ ಉತ್ತರಾದಿ ಮಠ ರಸ್ತೆಯಲ್ಲಿ ನಾದಸ್ವರದೊಂದಿಗೆ ಶಂಕರರ ರಥೋತ್ಸವ ಸಾಗಿತು.

ಅಭಿನವ ಶಂಕರ್ ಆಲಯದ ಧರ್ಮಾಧಿಕಾರಿಗಳಾದ ಎಚ್ ರಾಮಚಂದ್ರ, ಭಾಸ್ಕರ್,ಡಿ ಟಿ ಪ್ರಕಾಶ್ ,ಎಂ.ಆರ್ ಬಾಲಕೃಷ್ಣ,ಎನ್ ಎಂ ನವೀನ್ ಕುಮಾರ್,
ವಿಕ್ರಂ ಅಯ್ಯಂಗಾರ್,ವ್ಯವಸ್ಥಾಪಕರಾದ ಶೇಷಾದ್ರಿ,ಪಾರ್ಥನಾರಾಯಣ,ಡಾ.ಲಕ್ಷ್ಮಿ,
ಸುಧೀಂದ್ರ,ಶ್ರೀನಿವಾಸ್ ಬಾಷ್ಯಂ,ಪ್ರಶಾಂತ್ ,ಅಚ್ಯುತ,ಅಜಯ್ ಶಾಸ್ತ್ರಿ,ಸತ್ಯನಾರಾಯಣ್ ,ವಾಸುದೇವಮೂರ್ತಿ,ಜಯಸಿಂಹ ,ರಂಗನಾಥ್, ಕಡಕೋಳ ಜಗದೀಶ್ ,ಕೇಬಲ್ ರಮೇಶ್ ಮತ್ತಿತರರು ಹಾಜರಿದ್ದರು.

The post ಧರ್ಮದ ರಕ್ಷಣೆ,ತತ್ವ ಸಿದ್ಧಾಂತಗಳ ಪ್ರಚಾರಕ್ಕೆ ಹಗಲಿರುಳು ಶ್ರಮಿಸಿದ ಶಂಕರಾಚಾರ್ಯರು-ಶ್ರೀವತ್ಸ first appeared on .

]]>
ಕುಡಿದ ಮತ್ತಲ್ಲಿ ರಾಡ್ ನಿಂದ ಹೊಡೆದು ಒಬ್ಬನ ಕೊಲೆ https://varshininews.co.in/drink-quarrel-man-murder/?utm_source=rss&utm_medium=rss&utm_campaign=drink-quarrel-man-murder Tue, 21 Apr 2026 10:05:15 +0000 https://varshininews.co.in/?p=31844 ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಒಬ್ಬನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನಲಗಲಿ ನಡೆದಿದೆ.

The post ಕುಡಿದ ಮತ್ತಲ್ಲಿ ರಾಡ್ ನಿಂದ ಹೊಡೆದು ಒಬ್ಬನ ಕೊಲೆ first appeared on .

]]>
ಕೊಳ್ಳೇಗಾಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಒಬ್ಬನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.

ಕುಣಗಳ್ಳಿಯ ರಾಮಕೃಷ್ಣ ಕೊಲೆಯಾದ ವ್ಯಕ್ತಿ, ಜೆಸಿಬಿ ಚಾಲಕ ಮಲ್ಲಿಕಾರ್ಜುನ ಕೊಲೆ ಮಾಡಿದ ಆರೋಪಿ.

ಭಾನುವಾರ ರಾತ್ರಿ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಜಗಳವಾಗಿ ಜೊತೆಯಲ್ಲಿದ್ದ ರಾಮಕೃಷ್ಣನ ಮೇಲೆ ಮಲ್ಲಿಕಾರ್ಜುನ ರಾಡಿನಿಂದ ಹೊಡೆದು ಕೊಲೆ ಮಾಡಿ ನಂತರ ಪೊಲೀಸರಿಗೆ ಶರಣಾಗಿದ್ದಾನೆ.

ಅಗರ ಮಾಂಬಳ್ಳಿ ಪೊಲೀಸರು ಸ್ಥಳ ಮಹಜರ್ ನಡೆಸಿದ್ದಾರೆ. ಎಸ್ಪಿ ಮುತ್ತುರಾಜ್ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹಳೇ ವೈಷಮ್ಯದಿಂದ ಕೊಲೆ ಮಾಡಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.

ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

The post ಕುಡಿದ ಮತ್ತಲ್ಲಿ ರಾಡ್ ನಿಂದ ಹೊಡೆದು ಒಬ್ಬನ ಕೊಲೆ first appeared on .

]]>
ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಬೆಂಗಳೂರು ‌ವಿದ್ಯಾರ್ಥಿ ನೀರುಪಾಲು https://varshininews.co.in/bangaluru-student-dies-river/?utm_source=rss&utm_medium=rss&utm_campaign=bangaluru-student-dies-river Tue, 21 Apr 2026 09:49:47 +0000 https://varshininews.co.in/?p=31841 ಹನೂರು ಸಮೀಪ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.

The post ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಬೆಂಗಳೂರು ‌ವಿದ್ಯಾರ್ಥಿ ನೀರುಪಾಲು first appeared on .

]]>
ಹಲಗೂರು: ಹನೂರು ಸಮೀಪ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ರ್ಘಟನೆ ನಡೆದಿದೆ.

ಮೃತ ಯುವಕ ಬೆಂಗಳೂರಿನ ಬೊಮ್ಮನಹಳ್ಳಿ ವಾರ್ಡ್ ನಿವಾಸಿ ನಿಂಗೇಗೌಡ ಅವರ ಪುತ್ರ ಎನ್. ಶ್ರೇಯಸ್(೧೯) ಎಂದು ಗುರುತಿಸಲಾಗಿದೆ.

ಈತ ಜಯನಗರದ ಎಸ್‌ಎಸ್‌ಆರ್‌ಎಂವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ.

ಐವರು ಸ್ನೇಹಿತರೊಂದಿಗೆ ಹಲಗೂರು ಸಮೀಪದ ಬೆನಮನಹಳ್ಳಿ ಗ್ರಾಮದ ಚೇತನ್ ಅವರ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ.

ಕಾರ್ಯಕ್ರಮ ಮುಗಿದ ನಂತರ ಮುತ್ತತ್ತಿ ಪ್ರವಾಸಿ ತಾಣಕ್ಕೆ ತೆರಳಿದ ವೇಳೆ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದಾನೆ. ಈ ಸಂದರ್ಭದಲ್ಲಿ ನೀರಿನ ಸುಳಿಗೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ.

ಹಲಗೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

The post ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಬೆಂಗಳೂರು ‌ವಿದ್ಯಾರ್ಥಿ ನೀರುಪಾಲು first appeared on .

]]>
ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನ ಗುರಿಯಾಗಿಸಿದೆ ಇಡಿ ದಾಳಿ-ಸಿಎಂ https://varshininews.co.in/ed-raid-centrak-govt-truck-cm/?utm_source=rss&utm_medium=rss&utm_campaign=ed-raid-centrak-govt-truck-cm Tue, 21 Apr 2026 09:29:57 +0000 https://varshininews.co.in/?p=31838 ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ.

The post ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನ ಗುರಿಯಾಗಿಸಿದೆ ಇಡಿ ದಾಳಿ-ಸಿಎಂ first appeared on .

]]>
ಚಾಮರಾಜನಗರ: ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಶಾಸಕ ಹ್ಯಾರಿಸ್ ಅವರ ಪುತ್ರ ನಲಪಾಡ್ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ
ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಬಾರಿ ಭೇಟಿ ನೀಡುತ್ತಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಎಂದು ಮಾಧ್ಯಮದರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ಗೊತ್ತಾಗಿದೆ ಅದಕ್ಕೇನೆ
ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಅದನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಿಎಂ ತಮ್ಮ ಕ್ಷೇತ್ರದಲ್ಲಿ ಸತ್ತವರಿಗೆ ಮಾತ್ರ ಪರಿಹಾರ ನೀಡುತ್ತಿರುವ ಬಗ್ಗೆ ಜೆಡಿಎಸ್ ಶಾಸಕ ಶರಣಗೌಡ ಚಂದಾಪುರ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ,ಎಲ್ಲರಿಗೂ ನೀಡಲಾಗುತ್ತಿದೆ, ನಮ್ಮ ಗಮನಕ್ಕೆ ಬಂದರೆ ಪರಿಹಾರ ನೀಡುತ್ತೇವೆ. ಶಾಸಕರು ಕೇಳಿದರೂ ಖಂಡಿತ ಕೊಡುತ್ತೇವೆ ಎಂದು ಮುಖ್ಯ ಮಂತ್ರಿಗಳು ಹೇಳಿದರು.

ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ನವರು. ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಸೇರಿಸಿ ಮಸೂದೆ ಮಂಡಿಸಿದ್ದಾರೆ,ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದು ಸಿದ್ದರಾಮಯ್ಯ ಪುನರುಚ್ಛರಿಸಿದರು.

ತೃತೀಯ ಭಾಷೆಗೆ ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಿ ಅಂಕಗಳನ್ನು ನೀಡಬೇಕೆಂದು ಉಚ್ಚ ನ್ಯಾಯಾಲಯ ಹೇಳಿ, ಮುಂದಿನ ತೀರ್ಮಾನ ಮಾಡಲು ಸೂಚಿಸಿದೆ,ಅದರಂತೆ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ಸಿಎಂ ತಿಳಿಸಿದರು.

ಆಮ್ಲಜನಕ ದುರಂತದಲ್ಲಿ ತಪ್ಪಿತಸ್ಥರ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರುವ ಬಗ್ಗೆ ಅಲ್ಪಸಂಖ್ಯಾತರು ಹೈಕಮಾಂಡ್ ಅವರಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುವಾಗ ಅಲ್ಪಸಂಖ್ಯಾತರ ನಾಯಕರು ಉಪಸ್ಥಿತರಿದ್ದರು. ಅವರೆದುರೇ ತೀರ್ಮಾನವಾಗಿತ್ತು, ನಂತರ ಅವರು ವಿರೋಧ ಮಾಡಿದರು ಎಂದು ಪ್ರತಿಕ್ರಿಯಿಸಿದರು.

ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

The post ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನ ಗುರಿಯಾಗಿಸಿದೆ ಇಡಿ ದಾಳಿ-ಸಿಎಂ first appeared on .

]]>
ಮೈಸೂರು ಬಿಜೆಪಿ ಕಾರ್ಯಾಲಯದಲ್ಲಿ ಶಂಕರ ಜಯಂತಿ ಆಚರಣೆ https://varshininews.co.in/shankara-jayanti-bjp-office/?utm_source=rss&utm_medium=rss&utm_campaign=shankara-jayanti-bjp-office Tue, 21 Apr 2026 08:56:37 +0000 https://varshininews.co.in/?p=31835 ಮೈಸೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಕ್ತಿ ಭಾವದಿಂದ ಶಂಕರ ಜಯಂತಿ ಆಚರಿಸಲಾಯಿತು.

The post ಮೈಸೂರು ಬಿಜೆಪಿ ಕಾರ್ಯಾಲಯದಲ್ಲಿ ಶಂಕರ ಜಯಂತಿ ಆಚರಣೆ first appeared on .

]]>
ಮೈಸೂರು: ಮೈಸೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಕ್ತಿ ಭಾವದಿಂದ ಶಂಕರ ಜಯಂತಿ ಆಚರಿಸಲಾಯಿತು.

ಶಂಕರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಿಹಿ ವಿತರಿಸಿ, ಶಂಕರಾಚಾರ್ಯರ ಭಜನೆಯನ್ನು ಹಾಡಲಾಯಿತು.

ವಿದುಷಿ ನಾಗಲಕ್ಷ್ಮಿಯವರು ಶಂಕರರ ಬದುಕು, ಸಾಧನೆ, ರಚನೆಗಳ ಕುರಿತು ಮಾತಾಡಿದರು. ಅದ್ವೈತ ವೇದಾಂತ, ಇಂದಿಗೆ ಅದರ ಪ್ರಸ್ತುತತೆ, ಅದರಲ್ಲಿ ಪ್ರಸ್ತಾಪಿಸಿರುವ ಸಮಾನತೆ ಸೇರಿದಂತೆ ಅನೇಕ ವಿಚಾರಗಳನ್ನು ಮಂಡಿಸಿದರು.

ಶಾಸಕ ಟಿ ಎಸ್ ಶ್ರೀವತ್ಸ ಅವರು ಮಾತನಾಡಿ ಪಕ್ಷದ ಕಚೇರಿಯಲ್ಲಿ ಅನೇಕ ಮಹಾನುಭಾವರ ಜಯಂತಿಯನ್ನು ಆಚರಿಸುತ್ತೇವೆ, ತನ್ಮೂಲಕ ಪಕ್ಷದ ಕಾರ್ಯಕರ್ತರಿಗೆ ಎಲ್ಲಾ ಮಹನೀಯರ ವಿಚಾರ ತಲುಪಿ ಸಮಾನತೆ, ಭ್ರಾತೃತ್ವದ ಭಾವನೆ ಬೆಳೆಯುತ್ತದೆ ಎಂದು ತಿಳಿಸಿದರು.

ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಪ್ರಕೋಷ್ಟಗಳ ರಾಜ್ಯ ಸಹ ಸಂಚಾಲಕರಾದ ಎನ್ ವಿ ಫನೀಶ್, ವಿಭಾಗ ಪ್ರಭಾರಿ ಸ್ವಾಮಿ ಮರುಳಾಪುರ, ಸಹ-ಪ್ರಭಾರಿ ಡಾ.ಈ.ಸಿ ನಿಂಗರಾಜಗೌಡ, ನಗರ ಪ್ರಧಾನ ಕಾರ್ಯದರ್ಶಿಗಳಾದ ಸಿ.ಕೆ ರುದ್ರಮೂರ್ತಿ, ವಿ. ಸೋಮಸುಂದರ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೆಚ್.ಜಿ ಗಿರಿಧರ್, ಚಾಮುಂಡೇಶ್ವರಿ ನಗರ ಮಂಡಲದ ಅಧ್ಯಕ್ಷರಾದ ರಾಕೇಶ್ ಭಟ್, ಹಿರಿಯ ಮುಖಂಡರಾದ ಗೋಪಾಲ್ ರಾವ್, ಮಾಜಿ ಮಹಾ ಪೌರರಾದ ಶಿವಕುಮಾರ್, ಬ್ರಾಹ್ಮಣ ಸಂಘಟನೆಗಳ ಮುಖಂಡರಾದ ಡಿ ಟಿ ಪ್ರಕಾಶ್, ಡಾ. ಲಕ್ಷ್ಮಿದೇವಿ, ನಂ ಶ್ರೀಕಂಠಕುಮಾರ್, ಕೆ ಆರ್ ಸತ್ಯನಾರಾಯಣ, ಸಾಹಿತಿ ಲೀಲಾ ಪ್ರಕಾಶ್, ಬಿಜೆಪಿ ಪದಾಧಿಕಾರಿಗಳಾದ ಎಂ ಆರ್ ಬಾಲಕೃಷ್ಣ, ಕೆ ಎಂ ನಿಶಾಂತ್, ಬ್ರಾಹ್ಮಣ ಯುವ ಮುಖಂಡರಾದ ವಿಕ್ರಮ್ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಜಯಸಿಂಹ ಸೇರಿದಂತೆ ಬಿಜೆಪಿ ಮಂಡಲ ಅಧ್ಯಕ್ಷರು, ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಬ್ರಾಹ್ಮಣ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

The post ಮೈಸೂರು ಬಿಜೆಪಿ ಕಾರ್ಯಾಲಯದಲ್ಲಿ ಶಂಕರ ಜಯಂತಿ ಆಚರಣೆ first appeared on .

]]>
ಮೈ ಸಿಇಎಂ ಕಾಲೇಜಿನ ಮೈಸಿರಿ ಸಂಭ್ರಮ- ದಲ್ಲಿ ಪಾಲ್ಗೊಂಡ ನಟಿ ರಾಗಿಣಿ https://varshininews.co.in/my-cem-collage-ragini-dwi/?utm_source=rss&utm_medium=rss&utm_campaign=my-cem-collage-ragini-dwi Tue, 21 Apr 2026 08:39:48 +0000 https://varshininews.co.in/?p=31831 ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ವತಿಯಿಂದ ಎರಡು ದಿನ ಹಮ್ಮಿಕೊಂಡಿದ್ದ ವಾರ್ಷಿಕ ಮೈಸಿರಿ ಸಂಭ್ರಮದಲ್ಲಿ ನಟಿ ರಾಗಿಣಿ ದ್ವಿವೇದಿ ಪಾಲ್ಗೊಂಡಿದ್ದರು.

The post ಮೈ ಸಿಇಎಂ ಕಾಲೇಜಿನ ಮೈಸಿರಿ ಸಂಭ್ರಮ- ದಲ್ಲಿ ಪಾಲ್ಗೊಂಡ ನಟಿ ರಾಗಿಣಿ first appeared on .

]]>
ಮೈಸೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ವತಿಯಿಂದ ಎರಡು ದಿನ ಹಮ್ಮಿಕೊಂಡಿದ್ದ ವಾರ್ಷಿಕ ಮೈಸಿರಿ ಸಂಭ್ರಮ-2026 ವಿಶಿಷ್ಟವಾಗಿ ನೆರವೇರಿತು.

ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಖುಷಿ ಪಟ್ಡರು.

ವಿಶೇಷವಾಗಿ ನೃತ್ಯ, ಫ್ಯಾಷನ್ ವಾಕ್ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.

ಏಪ್ರಿಲ್ 18ರಂದು ಬೆಳಗಿನಿಂದಲೇ ವಿವಿಧ ಮನರಂಜನಾ ಮತ್ತು ಸ್ಪರ್ಧಾತ್ಮಕ ಕಾರ್ಯಕ್ರಮಗಳು ಜರುಗಿದವು.

ಪೆಟ್ ಶೋ, ಮ್ಯೂಸಿಕಲ್ ಚೇರ್ ಹಾಗೂ ಟ್ರೆಷರ್ ಹಂಟ್ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ಮೂಡಿಸಿತು.

ಪೆಟ್ ಶೋನಲ್ಲಿ ಹಲವು ವಿಧದ ಸಾಕುಪ್ರಾಣಿಗಳನ್ನು ಪ್ರದರ್ಶಿಸಲಾಯಿತು. ವಿಶೇಷವಾಗಿ ದೇಶಿ ತಳಿ ಹಳ್ಳಿಕಾರ್‌ ಗೋವುಗಳು ಹಾಗೂ ವಿವಿಧ ಜಾತಿಯ ನಾಯಿಗಳು ಎಲ್ಲರ ಗಮನ ಸೆಳೆದವು.

ಇದೇ ದಿನ ರಾತ್ರಿ 8 ಗಂಟೆಗೆ ನಡೆದ ಮುಖ್ಯ ಸಮಾರಂಭವನ್ನು ಖ್ಯಾತ ನಟಿ ರಾಗುಣಿ‌ ದ್ವುವೇದಿ ಅವರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಈ ವೇಳೆ ಮಾತನಾಡಿದ ಅವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಮೆಚ್ಚಿ, ಇಂತಹ ವೇದಿಕೆಗಳು ಯುವಜನತೆಗೆ ಅತ್ಯಂತ ಅಗತ್ಯವೆಂದು ಅಭಿಪ್ರಾಯಪಟ್ಟರು.

ಈ ಉತ್ಸವವು ವಿದ್ಯಾರ್ಥಿಗಳ ಸೃಜನಾತ್ಮಕತೆ ಮತ್ತು ಸಾಮರ್ಥ್ಯವನ್ನು ಹೊರಹಾಕುವ ವೇದಿಕೆಯಾಗಿದ್ದು, ಭಾಗವಹಿಸಿದ ಎಲ್ಲರಿಗೂ ಮರೆಯಲಾಗದ ಅನುಭವವನ್ನು ನೀಡಿತು.

ಸಮಾರಂಭದಲ್ಲಿ ಕಾಲೇಜಿನ ಅದ್ಯಕ್ಷರು ಶಿವಪ್ಪ , ಕಾರ್ಯದರ್ಶಿ ಮಂಜುನಾಥ , ಟ್ರೆಶರರ್ ಪೂರ್ಣಿಮಾ , ಟ್ರಸ್ಟಿ ಗಣಪತಿ , ಕಾಂಗ್ರೆಸ್ ಯುವ ಮುಖಂಡರು ಮಹಾಪ್ರಸಾದ್ ಕಿಟ್ಟಿ , ಮಿಸೆಸ್ ಇಂಡಿಯಾ ರನ್ನರ್ ಅಪ್ ಖುಶಿ ವಿನು , ಚಿರಾಯು ಮಂಜೇಶ್ , ಪ್ರಭು ಸ್ವಾಮಿ , ಅಕ್ಷಯ್ , ಸುಧಾಕರ್ , ಜಾನಕಿ ರೆಡ್ಡಿ ,ಎಂಎಂ ಗ್ರೂಪ್ ಸಂಸ್ಥಾಪಕ ಮಹಾನ್ ಶ್ರೇಯಸ್ ಮತ್ತಿತರರು ಪಾಲ್ಗೊಂಡಿದ್ದರು.

The post ಮೈ ಸಿಇಎಂ ಕಾಲೇಜಿನ ಮೈಸಿರಿ ಸಂಭ್ರಮ- ದಲ್ಲಿ ಪಾಲ್ಗೊಂಡ ನಟಿ ರಾಗಿಣಿ first appeared on .

]]>
ಶ್ರೀ ಶಂಕರಾಚಾರ್ಯರ ರಥಯಾತ್ರೆ https://varshininews.co.in/shankaracharya-ratha-yatra/?utm_source=rss&utm_medium=rss&utm_campaign=shankaracharya-ratha-yatra Tue, 21 Apr 2026 08:27:44 +0000 https://varshininews.co.in/?p=31828 ಶ್ರೀ ಶಂಕರ ಜಯಂತಿ ಅಂಗವಾಗಿ ಚಾಮರಾಜಪುರಂ ನಲ್ಲಿರುವ ಶ್ರೀ ಪ್ರಸನ್ನ ವಿಶ್ವೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಶ್ರೀ ಶಂಕರಾಚಾರ್ಯರ ರಥಯಾತ್ರೆ ಹಮ್ಮಿಕೊಳ್ಳಲಾಯಿತು.

The post ಶ್ರೀ ಶಂಕರಾಚಾರ್ಯರ ರಥಯಾತ್ರೆ first appeared on .

]]>
ಮೈಸೂರು: ಶ್ರೀ ಶಂಕರ ಜಯಂತಿ ಅಂಗವಾಗಿ ಚಾಮರಾಜಪುರಂ ನಲ್ಲಿರುವ ಶ್ರೀ ಪ್ರಸನ್ನ ವಿಶ್ವೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಶ್ರೀ ಶಂಕರಾಚಾರ್ಯರ ರಥಯಾತ್ರೆ ಹಮ್ಮಿಕೊಳ್ಳಲಾಯಿತು.

ಚಾಮರಾಜಪುರಂ, ಕೃಷ್ಣಮೂರ್ತಿಪುರಂ, ಲಕ್ಷ್ಮಿಪುರಂ ಮತ್ತು ಜಯನಗರ ಬಡಾವಣೆಯ ಮುಖ್ಯಬೀದಿಗಳಲ್ಲಿ ಸಾಗಿದ ಶ್ರೀಶಂಕರಾಚಾರ್ಯರ ರಥಯಾತ್ರೆಯಲ್ಲಿ ಪುರೋಹಿತರ ವೇದಬಳಗ, ಮಹಿಳಾ ಭಜನಾ ತಂಡ, ನಾದಸ್ವರ, ಮಂಗಳಾವಾದ್ಯ ಜನರ ಗಮನ ಸೆಳೆಯಿತು,

ಶ್ರೀಶಂಕರ ರಥಯಾತ್ರೆಯಲ್ಲಿ
ಎಂ ಎನ್ ಜಯರಾಮ್, ಶ್ರೀಮಧು, ಮೋಹನ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಬಿ.ಎನ್ ಜಯರಾಮ್, ನಂಜುಂಡಸ್ವಾಮಿ, ಮಂಜುನಾಥ್, ಮುರಳಿ ಮತ್ತಿತರರು ಪಾಲ್ಗೊಂಡಿದ್ದರು.

The post ಶ್ರೀ ಶಂಕರಾಚಾರ್ಯರ ರಥಯಾತ್ರೆ first appeared on .

]]>