ಮೈಸೂರು: ಮನೆಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ನಾಲ್ಕು ಮಂದಿ ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿ, 45,00,000 ರೂ ಮೌಲ್ಯದ 551 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
400 ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು, 3 ಕಾರುಗಳು, ದ್ವಿಚಕ್ರವಾಹನಗಳು, 2 ಮೊಬೈಲ್ ಫೋನ್ ಹಾಗೂ 2 ಪಿಸ್ತೂಲ್, ಜೀವಂತ ಗುಂಡುಗಳು, ಮತ್ತು 4 ಕೆ.ಜಿ 66ಗ್ರಾಂ ಗಾಂಜಾ ಕೂಡಾ ವಶಪಡಿಸಿಕೊಳ್ಳಲಾಗಿದೆ.
ಜೂನ್ 6ರಂದು ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ಯಾದನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸುಮಾರು 11,40,000 ರೂ ಬೆಲೆ ಬಾಳುವ ಚಿನ್ನಾಭರಣಗಳು ಕಳ್ಳತನವಾಗಿತ್ತು.
ಈ ಬಗ್ಗೆ ಸಿಸಿಬಿ ಘಟಕದ ವಿಶೇಷ ತಂಡವನ್ನು ರಚಿಸಲಾಗಿತ್ತು,ಆ ತಂಡವು ಜುಲೈ15 ರಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಆರೋಪಿಯನ್ನು ಎನ್.ಆರ್. ಮೊಹಲ್ಲಾದಲ್ಲಿ ಬಂಧಿಸಿ ಆತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ವಿಚಾರಣೆ ವೇಳೆ ಆತ ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ಮೈಸೂರು ನಗರ ಮತ್ತು ಜಿಲ್ಲೆಗಳಲ್ಲಿ ವಿವಿಧ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಮಾಹಿತಿಯನ್ನು ನೀಡಿದ್ದ.
ಈತ ನೀಡಿದ ಮಾಹಿತಿ ಮೇರೆಗೆ ಎರಡು ದಿನಗಳ ಹಿಂದೆ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಬಂಧಿತ ಆರೋಪಿಗಳಲ್ಲಿ 3 ಆರೋಪಿಗಳು ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಒಟ್ಟು 11 ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.
ಆರೋಪಿಗಳಿಂದ ಒಟ್ಟು 45,00,000ರೂ ಮೌಲ್ಯದ 501 ಗ್ರಾಂ ತೂಕದ ಚಿನ್ನಾಭರಣ, 1 ಕೆ.ಜಿ 400 ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು, 02 ಕಾರುಗಳು, 0ಡಿ ದ್ವಿಚಕ್ರ ವಾಹನಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮತ್ತೊಬ್ಬ ಆರೋಪಿ ಬಳಿ 4 ಕೆ.ಜಿ 66 ಗ್ರಾಂ ತೂಕದ ಗಾಂಜಾ, 01 ಪಿಸ್ತೂಲ್, ಹಾಗೂ 1 ಕಾರು ದೊರೆತಿದೆ.
ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್. ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಎಸ್.ಎನ್ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಮೋಹನ್‌ಕುಮಾರ್ ಎಂ, ಪಿಎಸ್ಐ ಮಾರುತಿ ಅಂತರಗಟ್ಟಿ, ಎಎಸ್ಐ ಗಳಾದ ಅಜ್ಜರ್‌ಖಾನ್, ಗಣೇಶ್ ಎಂ.ಆರ್. ರಾಮೇಗೌಡ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.