ಮೈಸೂರು: ಮೈಸೂರಿನಲ್ಲಿ ಮಾದಕವಸ್ತು ವಿರುದ್ಧ ಸಮರ ಸಾರಿರುವ ಪೊಲೀಸರು ಸಿಸಿಬಿ ಸುಮಾರು 1.60 ಕೋಟಿ ರೂ ಮೌಲ್ಯದ 280 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬನ್ನೂರು ಚೆಕ್ಪೋಸ್ಟ್ ಬಳಿ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 1.60 ಕೋಟಿ ರೂ ಮೌಲ್ಯದ 280 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಮದ್ ಜುಬೇರ್, ಮುದಾಸಿರ್ ಅಹಮದ್, ಅಬೂಬಕರ್ ಸಿದ್ದಿಕ್, ಸೈಯದ್ ಮಜಾರ್ ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ಗಾಂಜಾವನ್ನು ಪತ್ತೆ ಹಚ್ಚಿದ್ದಾರೆ.
ಕಾರ್ಯಾಚರಣೆ ವೇಳೆ ಗಾಂಜಾ ಸಾಗಣೆಗೆ ಬಳಸುತ್ತಿದ್ದ ಒಂದು ಕಾರು ಮತ್ತು ಒಂದು ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
