ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಿದ್ದು ಹೈಲೈಟ್ಸ್ ಕೆಳಗಿನಂತಿದೆ.
- ಬೆಳವಣಿಗೆಯನ್ನು ವೇಗಗೊಳಿಸುವುದು
- ಸಮಗ್ರ ಅಭಿವೃದ್ಧಿ
- ಖಾಸಗಿ ವಲಯದ ಹೂಡಿಕೆಗಳು
- ಗೃಹದ ಖರ್ಚುವೆಚ್ಚಗಳನ್ನು ನಿಭಾಯಿಸುವುದು
- ಭಾರತದಲ್ಲಿ ಮಧ್ಯಮ ವರ್ಗದವರಲ್ಲಿ ಹೆಚ್ಚಾಗುತ್ತಿರುವ ಖರ್ಚುವೆಚ್ಚಗಳನ್ನು ನಿಭಾಯಿಸುವ ಶಕ್ತಿಯನ್ನು ಹೆಚ್ಚಿಸುವುದು
12 ಲಕ್ಷ ರೂ.ವರೆಗಿನ ಆದಾಯದ ಮೇಲೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ.
ಮುಂದಿನ ವಾರ ಸರ್ಕಾರ ಹೊಸ ಆದಾಯ ತೆರಿಗೆ ಮಸೂದೆ ಪರಿಚಯಿಸಲಾಗುವುದು.
ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ.
ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ.
ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ.
1.7 ಕೋಟಿ ರೈತರಿಗೆ ಅನುಕೂಲ
ಎಸ್ಎಂಇ ಮತ್ತು ದೊಡ್ಡ ಕೈಗಾರಿಕೆಗಳಿಗೆ ಉತ್ಪಾದನಾ ಮಿಷನ್ ಸ್ಥಾಪನೆ.
ಕಾರ್ಮಿಕ-ಪ್ರೋತ್ಸಾಹಿ ವಲಯಗಳ ಉತ್ಪಾದಕತೆಯನ್ನು ಹೆಚ್ಚಿಸಲು ಕ್ರಮ
ಕ್ರೆಡಿಟ್ ಗ್ಯಾರಂಟಿ ಕವರ್ ನ್ನು 20 ಕೋಟಿ ರೂಪಾಯಿಗಳಿಗೆ ದ್ವಿಗುಣ.
ಗ್ಯಾರಂಟಿ ಶುಲ್ಕವನ್ನು ಶೇ. 1ಕ್ಕೆ ಮಧ್ಯಮಗೊಳಿಸಲಾಗುವುದು.
ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆಯ ಸಂಸ್ಥೆ ಸ್ಥಾಪನೆ.
2025-26ರ ಹಣಕಾಸು ವರ್ಷದಲ್ಲಿ ಅರ್ಬನ್ ಚಾಲೆಂಜ್ ಫಂಡ್ ಅಡಿಯಲ್ಲಿ ಸರ್ಕಾರ 10ಸಾವಿರ ಕೋಟಿ ರೂ.ಗಳ ಹಂಚಿಕೆ.
ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆಯನ್ನು ಘೋಷಣೆ.
ಕೃಷಿ ಜಿಲ್ಲೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ.
ತರಕಾರಿ, ಹಣ್ಣುಗಳ ಉತ್ಪಾದನೆ ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮ.
ಹತ್ತಿ ಉತ್ಪಾದನೆಯನ್ನು ಉತ್ತೇಜಿಸಲು ಐದು ವರ್ಷಗಳ ಧ್ಯೇಯ ಘೋಷಣೆ.
ತೊಗರಿ, ಉದ್ದು ಮತ್ತು ಮಸೂರ್ ಮೇಲೆ ವಿಶೇಷ ಗಮನ ಹರಿಸಿ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರಕ್ಕಾಗಿ 6 ವರ್ಷಗಳ ಕಾರ್ಯಕ್ರಮ.
ಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ 36 ಔಷಧಿಗಳನ್ನು ಮೂಲ ಕಸ್ಟಮ್ಸ್ ಸುಂಕದಿಂದ ವಿನಾಯಿತಿ.
ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಯನ್ನು ಶೇ. 100ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನ