ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಒಂದು ದೇಶ, ಒಂದು ಚುನಾವಣೆ ನಿರ್ಣಯ ಸಮರ್ಥ ನಿರ್ಧಾರವಾಗಿದೆ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಶ್ಲಾಘಿಸಿದ್ದಾರೆ.
ಕೇಂದ್ರದ ಈ ನಿರ್ಣಯ ಚುನಾವಣೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿರುವುದರಿಂದ ಒಂದೇ ಮತದಾರರ ಪಟ್ಟಿ ಎಲ್ಲಾ ಚುನಾವಣೆಗೂ ಬಳಕೆಗೆ ಅವಕಾಶವಿದೆ,ಹಾಗಾಗಿ ಸಮಯದ ಜತೆಗೆ ಹಣ ಉಳಿತಾಯವಾಗಲಿದೆ ಎಂದು ಹೇಮಾನಂದೀಶ್ ತಿಳಿಸಿದ್ದಾರೆ.