ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎನ್. ಚಂದ್ರಶೇಖರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ಮೈಸೂರಿನ ವಿಜಯನಗರದಲ್ಲಿರುವ ಸೆಸ್ಕ್ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್. ಲೋಕೇಶ್, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ನೂತನ ವ್ಯವಸ್ಥಾಪಕ ನಿರ್ದೇಶಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.
2017ನೇ ಬ್ಯಾಚ್ನ ಐಎಎಸ್ ಅಧಿಕಾರಿ ಎನ್. ಚಂದ್ರಶೇಖರ್ ಅವರು ಈ ಹಿಂದೆ ಕರ್ನಾಟಕ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
