ಚಾಮರಾಜನಾಗರ: ಕಾಯಕ ಸಮಾಜ ಚಾಮರಾಜನಗರ ಜಿಲ್ಲೆಯಲ್ಲಿ ಹಿಂದೆ ಉಳಿದಿದೆ ಎಂದು ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷರೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಸಿ ಪುಟ್ಟ ಸಿದ್ದಶೆಟ್ಟಿ ತಿಳಿಸಿದರು.
ಒಕ್ಕೂಟದ ವತಿಯಿಂದ ಚಾಮರಾಜನಗರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯದ ಉದ್ದಗಲಕ್ಕೂ ಹರಡಿರುವ ಕಾಯಕ ಸಮಾಜ ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ ಹಿಂದುಳಿದಿದೆ ಎಂಬುದು ಗೊತ್ತಾಗಿದೆ ಆದ ಕಾರಣ ಚಾಮರಾಜನಗರ ಜಿಲ್ಲೆಯಲ್ಲಿ ಕಾಯಕ ಸಮಾಜವನ್ನು ಒಗ್ಗೂಡಿಸಿ ಇನ್ನೂ ಉನ್ನತ ಮಟ್ಟಕ್ಕೆ ಸೇರಿಸುವ ಬಗ್ಗೆ ಸಮಾಜದವರು ಶ್ರಮಿಸಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕೆ.ಸಿ ಪುಟ್ಟ ಸಿದ್ದಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಯಕ ಸಮಾಜದ ಒಕ್ಕೂಟದ ಶಿವಪ್ಪ ಶೆಟ್ಟಿ, ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಕೊಣಸೂರು ಶಿವರಾಜ್ ಉಪಸ್ಥಿತರಿದ್ದರು.
