ಚಾಮರಾಜನಗರ: ಅಖಿಲ ಕರ್ನಾಟಕ ಕನ್ನಡ ಮಹಾ ಸಭಾ ರಾಜ್ಯ ಘಟಕದ ವತಿಯಿಂದ
ಚಾಮರಾಜನಗರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು ಯಶಸ್ವಿಯಾಗಿ ಆಚರಿಸಲಾಯಿತು.
ಚಾಮರಾಜನಗರದ ವರನಟ ಡಾ. ರಾಜ್ ಕುಮಾರ್ ಸಭಾಂಗಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಕೊಳ್ಳೇಗಾಲ ಶಾಸಕರಾದ ಎ ಆರ್ ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜನಗರ ಶಾಸಕರಾದ ಪುಟ್ಟ ರಂಗ ಶೆಟ್ಟಿ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಹನೂರು ಮಾಜಿ ಶಾಸಕರಾದ ನರೇಂದ್ರ ಅವರನ್ನು ವಿಶೇಷ ಸನ್ಮಾನ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಜವರೇಗೌಡ, ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಸುರೇಶ್ ನಾಯ್ಕ, ಪುಣ್ಯದ ಹುಂಡಿ ರಾಜು, ಸುಶೀಲ ನಂಜಪ್ಪ, ಎಸ್ ಪಿ ಶಿವು, ನಂಜುಂಡಸ್ವಾಮಿ, ಹನುಮಂತಯ್ಯ ಮತ್ತಿತರರು ಪಾಲ್ಗೊಂಡಿದ್ದರು.