ಚಾಮರಾಜನಗರ,ಏ.1: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನಲ್ಲಿ ನಡೆದಿದೆ.
ಬೆಂಡರವಾಡಿ ತಾವರೆ ಕೆರೆಯಲ್ಲಿ ಈ ಘಟನೆ ನಡೆದಿದ್ದು,ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸ್ಥಳಕ್ಕೆ ಇನ್ಸ್ ಪೆಕ್ಟರ್ ಶೇಷಾದ್ರಿ,ಅಪರಾಧ ವಿಭಾಗದ ಎಸ್ಸೈ ಸೀಗಯ್ಯ, ಎಎಸ್ಸೈ ಚಂದ್ರಶೇಖರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.
ಈ ವ್ಯಕ್ತಿ ಬೆಳಿಗ್ಗೆ ಬೈಕು, ಚಪ್ಪಲಿಯನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ್ದಾರೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನು ಮೇಲಕ್ಕೆ ಎತ್ತಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬ ವರ್ಗದವರಿಗೆ ಹಸ್ತಾಂತರ ಮಾಡಿದರು.
ಬೈಕ್ ನೋಂದಣಿ ಸಂಖ್ಯೆಯಿಂದ ಇವರು ಮಂಡ್ಯ ಜಿಲ್ಲೆಯವರು ಎಂಬುದು ಗೊತ್ತಾಗಿದೆ
ಮೃತರು ವಿವಾಹಿತರಾಗಿದ್ದು ಮದ್ಯ ವ್ಯಸನಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
