ಮೈಸೂರು, ಏ.7: ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಖದೀಮರು ಪರಾರಿಯಾಗಿದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ.
ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಲಿ ರಸ್ತೆ ಬಳಿ ಈ ಘಟನೆ ನಡೆದಿದೆ.
1.45 ಲಕ್ಷ ರೂ ಮೌಲ್ಯದ 35 ಗ್ರಾಂ ಮಾಂಗಲ್ಯ ಸರವನ್ನು ಕಳ್ಳರು ದೋಚಿದ್ದಾರೆ.
ಲಲಿತ (53) ಚಿನ್ನದ ಸರ ಕಳೆದುಕೊಂಡ ಮಹಿಳೆ
ಈ ಮಹಿಳೆ ಮನೆ ಹಿಂಭಾಗದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಸ್ಕೂಟರ್ ನಲ್ಲಿ ಬಂದ ಇಬ್ಬರು ಸರ ಕಿತ್ತು ಪರಾರಿಯಾಗಿದ್ದಾರೆ.
ಈ ಸಂಬಂಧ ಲಲಿತರವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.