ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೈಸೂರಿಗೆ ಆಗಮಿಸಿದ್ದು,ಅಭಿಮಾನಿಗಳು ಖುಷ್ ಆಗಿದ್ದಾರೆ.
ಅವರು ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದರುಶನ ಪಡೆದು ಪೂಜೆ ಸಲ್ಲಿಸಿದರು.
ಅಭಿಮಾನಿಗಳ ಪ್ರೀತಿಯ ಶಿವಣ್ಣ ತಮ್ಮ ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್ ಅವರು ಶಿವರಾಜ್ ಕುಮಾರ್ ಕುಟುಂಬಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು.