ಕೊಳ್ಳೇಗಾಲ: ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡ ಡಿ. ಎನ್ ನಟರಾಜು ಅರ್ಜಿ ಸಲ್ಲಿಸಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಎಐಸಿಸಿ) ನಾಯಕರಾದ ಶಬರಿನಾಥ್ ಅವರು ಮುಖಂಡ ಡಿ ಎನ್ ನಟರಾಜು ಅವರಿಂದ ಅರ್ಜಿ ಸ್ವೀಕರಿಸಿದರು.
ಚಾಮರಾಜನಗರ ಜಿಲ್ಲಾ ವಿಕ್ಷಕರಾಗಿ ಆಗಮಿಸಿದ್ದ ಶಬರಿನಾಥ್ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿ ಯಲ್ಲಿ ನಡೆದ ಸೃಜನ್ ಸಂಘಟನಾ ಅಭಿಯಾನ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು. ಈ ವೇಳೆ ಡಿ ಎನ್ ನಟರಾಜುರವರು ಶಬರಿನಾಥ್ ಅವರಿಗೆ ಮನವಿ ಸಲ್ಲಿಸಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿರುವ ನನಗೆ ಈ ಭಾರಿ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ತಮ್ಮ ನೂರಾರು ಬೆಂಬಲಿಗರ ಜೊತೆ ವರಿಷ್ಠರನ್ನು ಕೋರಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕಾವೇರಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ ಮರಿಸ್ವಾಮಿ ಉಪಸ್ಥಿತರಿದ್ದರು.
