ಯಳಂದೂರು: ಯಳಂದೂರಿನ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳು,ಇಂದಿರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಶ್ರೀ ರೂಪ ಭೇಟಿ ನೀಡಿ ಪರಿಶೀಲಿಸಿದರು.
ಮೊದಲು ಪಟ್ಟಣದಲ್ಲಿರುವ ಪುರತತ್ವ ಇಲಾಖೆಯ ಮಳೆ ಮಂಟಪವನ್ನು ವೀಕ್ಷಣೆ ಮಾಡಿ ದೇವಾಲಯದ ಅರ್ಚಕರು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು.
ಈ ದೇವಾಲಯವು ಪ್ರಸಿದ್ಧ ಹೊಂದಿದ್ದು ದೇವಾಲಯಕ್ಕೆ ಅಗತ್ಯವಾದ ಮೂಲಭೂತ ಸೌಲಭ್ಯ ಕಲ್ಪಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
ಇದೇ ವೇಳೆ ಪಟ್ಟಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಬಳೆಪೇಟೆ, ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ದುರಸ್ತಿ ಕಾಮಗಾರಿ ಪರಿಶೀಲಿಸಿದರು.
ದುರಸ್ತಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿರುವ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಮತ್ತು ಇಂಜನಿಯರ್ ಗೆ ಇನ್ನು ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸ ಕೊಡಬೇಕು ಹಾಗೂ ವಿದ್ಯಾರ್ಥಿ ನಿಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕಡಕ್ ಸೂಚನೆ ನೀಡಿದರು.
ತಾಲ್ಲೂಕು ಮತ್ತು ಜಿಲ್ಲಾ ಅಧಿಕಾರಿಗಳು ಕಾಲಕಾಲಕ್ಕೆ ನಿಲಯಗಳಿಗೆ ಭೇಟಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಹಾಗೂ ಸರ್ಕಾರದಿಂದ ದೊರಕುವ ಸೌಲಭ್ಯವನ್ನು ಸಕಾಲದಲ್ಲಿ ತಲುಪಿಸಬೇಕು ವಿದ್ಯಾರ್ಥಿನಿಲಯಗಳ ಹಾಜರಾತಿ ಹೆಚ್ಚಳ ಮಾಡುವ ಮೂಲಕ ವಿದ್ಯಾರ್ಥಿ ನಿಲಯವನ್ನು ತಕ್ಷಣವೇ ಪ್ರಾರಂಭಿಸಿ, ಮಕ್ಕಳಿಗೆ ಊಟ ಉಪಚಾರ ನೀಡಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಿದರು.
ನಂತರ ಪಟ್ಟಣದ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದು ತಾಕೀತು ಮಾಡಿದರು.
ಈ ವೇಳೆ ಕ್ಯಾಂಟೀನ್ ನಲ್ಲಿ ಶುದ್ಧ ಕುಡಿಯುವ ನೀರಿಲ್ಲದ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಸ್ಥಳದಲ್ಲಿದ್ದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿಗಳಿಗೆ ಒಂದು ವಾರದೊಳಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮುನಿರಾಜ್, ಯಳಂದೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೇಶವಮೂರ್ತಿ, ನಿರ್ಮಿತಿ ಕೇಂದ್ರ ವ್ಯವಸ್ಥಾಪಕ ನಿರ್ದೇಶಕರಾದ ರಮೇಶ್, ಇಂಜಿನಿಯರ್ ನಂದೀಶ್, ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಟ್ಟಣ ಪಂಚಾಯಿತಿ ಇಂಜಿನಿಯರ್ ವೈ ಎಂ ನಾಗೇಂದ್ರ, ಪಟ್ಟಣ ಪಂಚಾಯತಿ ಆರೋಗ್ಯ ನಿರೀಕ್ಷಕ ರಾಘವೇಂದ್ರ, ವಿದ್ಯಾರ್ಥಿ ನಿಲಯದ ನಿಲಯಪಾಲಕರಾದ ವಿಜಯ, ಭಾಗ್ಯಮ್ಮ ಸುರೇಶ, ಮುಖಂಡ ಉಮಾಶಂಕರ್, ಅರ್ಚಕರಾದ ಚಂದ್ರ ಮೌಳಿ,ಮಹೇಶ್ ಹಾಗೂ ಪಟ್ಟಣ ಪಂಚಾಯತಿಯ ಸಿಬ್ಬಂದಿ ಹಾಜರಿದ್ದರು.
