ಬಡವರಿಗೆ ಸಹಾಯ ಮಾಡಿ ಸಮಾಜಕ್ಕೆ ಕೊಡುಗೆ ನೀಡಿ: ಕೆ ಆರ್ ಸತ್ಯನಾರಾಯಣ್

ಮೈಸೂರು: ಉಳ್ಳವರು ಸ್ವ ಇಚ್ಛೆಯಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಡವರಿಗೆ ಸಹಾಯ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ ಆರ್ ಸತ್ಯನಾರಾಯಣ್ ತಿಳಿಸಿದರು.

ನಗರದ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆಎಂಪಿ ಕೆ ಟ್ರಸ್ಟ್ 18ನೇ ವಾರ್ಷಿಕೋತ್ಸವ ಅಂಗವಾಗಿ ಕೊಡಮಾಡಿದ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿ ಸತ್ಯನಾರಾಯಣ್ ಮಾತನಾಡಿದರು.

ಸಮಾಜ ನಮ್ಮನ್ನ ಬೆಳಸಿದ ಮೇಲೆ ಸಮಾಜದ ಋಣ ನಮ್ಮ ಮೇಲಿರುತ್ತದೆ ಹಾಗಾಗಿ ಅಶಕ್ತರಿಗೆ ನೆರವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಅವರನ್ನು ಬೆಂಬಲಿಸಿ ಬೆಳಸಬೇಕಿದೆ ಎಂದು ಅವರು ತಿಳಿಸಿದರು.

ಈ‌ ವೇಳೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್,ಎಂ ಆರ್ ಬಾಲಕೃಷ್ಣ, ನಾಗರಾಜ್, ಕಡಕೋಳ ಜಗದೀಶ್, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕರಾದ ಜಯಸಿಂಹ, ವಿಜಯ್ ಕುಮಾರ್, ಚಕ್ರಪಾಣಿ, ಲತಾ ಬಾಲಕೃಷ್ಣ, ನಾಗಶ್ರೀ ಸುಚಿಂದ್ರ, ವಿಜಯ ಮಂಜುನಾಥ್, ಗುರುರಾಜ್ ಮತ್ತಿತರರು ಹಾಜರಿದ್ದರು.