ಚಂದ್ರವನ ಆಶ್ರಮಕ್ಕೆ ಜೀವದಾರ ರಕ್ತ ನಿಧಿ ಕೇಂದ್ರದಿಂದ‌1 ಲಕ್ಷ ರೂ ದೇಣಿಗೆ

Spread the love

ಮೈಸೂರು: ಶ್ರೀರಂಗಪಟ್ಟಣದಲ್ಲಿರುವ
ಚಂದ್ರವನ ಆಶ್ರಮ ದಾಸೋಹಕ್ಕೆ ಗುರುಪೂರ್ಣಿಮೆ ಪ್ರಯುಕ್ತ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಒಂದು ಲಕ್ಷ ದೇಣಿಗೆ ನೀಡಲಾಯಿತು.

ಚೆಕ್ ಮುಖಾಂತರ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳವರಿಗೆ ಒಂದು ಲಕ್ಷ ರೂ ದೇಣಿಗೆ ಹಸ್ತಾಂತರಿಸಲಾಯಿತು.

ಈ‌ ವೇಳೆ ಮಾತನಾಡಿದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳು,
ಜೀವದಾರ ರಕ್ತ ನಿಧಿ ಕೇಂದ್ರ ಯಶಸ್ವಿಯಾಗಿ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ, ಸಾಮಾಜಿಕ ಹಾಗೂ ಧಾರ್ಮಿಕತೆ ಹಾಗೂ ಸನಾತನ ಧರ್ಮದ ಕೆಲಸವನ್ನು ಮಾಡುತ್ತಿರುವುದು ಬಹಳ ಸಂತೋಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜೀವದಾರ ರಕ್ತ ನಿಧಿ ಕೇಂದ್ರ
ರಾಷ್ಟ್ರಮಟ್ಟದಲ್ಲಿ ಯಶಸ್ವಿ ಕಾಣಲಿ ಎಂದು ಹಾರೈಸಿದರು.

ಭಾರತೀಯ ಪರಂಪರೆಯಲ್ಲಿ ಮಠಗಳ ಪಾತ್ರ ಅಮೋಘವಾಗಿದ್ದು, ಪ್ರತಿಯೊಂದು ಮಠಗಳಿಗೆ ಭಕ್ತರೇ ಆಧಾರ ಸ್ಥಂಬ, ಧರ್ಮ ಪರಂಪರೆ ಉಳಿಸಿಕೊಂಡು ಬರುವಲ್ಲಿ ಮಠಮಾನ್ಯಗಳ ಸೇವೆ ಅಮೋಘ, ಹೆತ್ತ ತಂದೆ ತಾಯಿ ಮತ್ತು ಋಣ ತೀರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ಗುರುಪೂರ್ಣಿಮೆ ಆಚರಿಸಲಾಗುತ್ತಿದೆ, ಪ್ರತಿಯೊಂದರ ಹಿಂದೆ ಗುರುವಿನ ಅವಶ್ಯಕತೆ ಇದ್ದು, ಗುರುವಿನ ಆಶೀರ್ವಾದವಿದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಯಪ್ರಕಾಶ್, ಪರೀಕ್ಷಿತ್ ರಾಜ ಅರಸ್, ಮಂಜುನಾಥ್ ಮತ್ತಕತರರು ಹಾಜರಿದ್ದರು.