ಮೈಸೂರು: ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೇಗೆ ಲೆಕ್ಕಾಚಾರ ಹಾಕುತ್ತಿದ್ದಾರೋ ಅದೇ ರೀತಿ ನಾವೂ ಕೂಡಾ ಲೆಕ್ಕಚಾರ ಹಾಕಿ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ ಎಂದು
ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಾವು ಗೆಲ್ಲಬೇಕು ಅಷ್ಟೇ, ಅದಕ್ಕೆ ಪೂರಕವಾಗಿಯೇ ಅಭ್ಯರ್ಥಿ ಆಯ್ಕೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ನಾವು ಶೀಘ್ರದಲ್ಲೇ ತೀರ್ಮಾನ ಮಾಡಿ ಪ್ರಕಟಿಸುತ್ತೇವೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ,ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣದಲ್ಲಿ ಯಾರು ಅಭ್ಯರ್ಥಿ, ಯೋಗೇಶ್ವರ್ ಅವರು ಪಕ್ಷಕ್ಕೆ ಸೇರುವ ಮಾಹಿತಿ ಇದೆಯೆ ಎಂಬ ಪ್ರಶ್ನೆಗೆ ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ. ಪಕ್ಷದ ಚಿಹ್ನೆ ಮೇಲೆಯೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ, ಯೋಗೇಶ್ವರ್ ಅವರ ವಿಚಾರ ನಾನು ಮಾತನಾಡಲು ಆಗುವುದಿಲ್ಲ, ನಾನು ಯಾರ ಜತೆಗೂ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದರು.
ಜೆಡಿಎಸ್ ಅಭ್ಯರ್ಥಿ ಘೋಷಣೆಗೆ ಕಾಯುತ್ತಿದ್ದೀರಾ ಎಂಬ ಪ್ರಶ್ನೆಗೆ ಹಾಗೇನಿಲ್ಲ, ಇನ್ನೂ ಸಮಯವಿದೆ, ನಾನು ಅಲ್ಲೇ ಇರುತ್ತೇನೆ,ನಾನೇ ಬಿ ಫಾರಂ ನೀಡುವುದು. ಈಗಾಗಲೇ ಪ್ರಧಾನ ಕಾರ್ಯದರ್ಶಿಗಳು, ಸಿಎಂ ಹಾಗೂ ನಾನು ಕೂತು ಚರ್ಚೆ ಮಾಡಿದ್ದೇವೆ, ಖರ್ಗೆ ಅವರಿಂದ ಅನುಮತಿ ಪಡೆದು ಬಿ ಫಾರಂಗೆ ನಾನೇ ಸಹಿ ಹಾಕಿ ಕೊಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.