ಮೈಸೂರು: ಆಧುನಿಕ ಮೈಸೂರಿನ ನಿರ್ಮಾತೃ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142 ನೇ ಜಯಂತಿ ಅಂಗವಾಗಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕೆ ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆ ಹಾಗೂ ಅವರ ದೂರದೃಷ್ಟಿ ಯೋಜನೆ ಮತ್ತು ಆಡಳಿತವನ್ನು
ಮುಖಂಡರು ಕೊಂಡಾಡಿದರು.
ನಮನ ಸಲ್ಲಿಸಿದ ನಂತರ ಸಾರ್ವಜನಿಕರಿಗೆ ಮೈಸೂರು ಪಾಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,ಜಿ ರಾಘವೇಂದ್ರ,
ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ,ಜಿ.ರಾಘವೇಂದ್ರ,ಲೋಕೇಶ್,ಕನಕ
ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ,ಎಸ್ ಎನ್ ರಾಜೇಶ್,
ಫ್ರಾನ್ಸಿಸ್,ಕೃಷ್ಣಪ್ಪ( ಗಂಟಯ್ಯ),ಸೇವಾದಳ ಮೋಹನ್,ಜಯಪ್ರಕಾಶ್ ಮತ್ತಿತರರು ಹಾಜರಿದ್ದರು.
