ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌:30 ನಕ್ಸಲೀಯರ ಹತ್ಯೆ

Spread the love

ಛತ್ತೀಸ್‌ಗಢ: ಛತ್ತೀಸ್‌ಗಢದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 30 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.

ಬಿಜಾಪುರ ಜಿಲ್ಲೆಯಲ್ಲಿ 26 ನಕ್ಸಲೀಯರು ಹತ್ಯೆಯಾಗಿದ್ದರೆ, ಕಂಕೇರ್ ಪ್ರದೇಶದಲ್ಲಿ ಬಿಎಸ್‌ಎಫ್ ಮತ್ತು ರಾಜ್ಯ ಪೊಲೀಸರ ಡಿಆರ್‌ಜಿ ಸಿಬ್ಬಂದಿಯ ಜಂಟಿ ತಂಡ ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ.

ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಪೊಲೀಸ್ ಹುತಾತ್ಮರಾಗಿದ್ದಾರೆ.
ಬಿಜಾಪುರ ಎನ್‌ಕೌಂಟರ್‌:ಬಸ್ತಾರ್ ವಿಭಾಗದ ವ್ಯಾಪ್ತಿಯ ಬಿಜಾಪುರ ಮತ್ತು ಕಂಕೇರ್‌ನಲ್ಲಿ ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆಯುತ್ತಿವೆ ಎಂದು ಬಸ್ತಾರ್ ರೇಂಜ್ ಐಜಿ ಸುಂದರರಾಜ್ ಪಿ ಹೇಳಿದ್ದಾರೆ.

ಬಿಜಾಪುರ ಡಿಆರ್‌ಜಿ, ಸುಕ್ಮಾ ಡಿಆರ್‌ಜಿ, ಕೋಬ್ರಾ ಸಿಆರ್‌ಪಿಎಫ್ ಪಡೆಗಳು ಬಿಜಾಪುರ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದವು. ಬಿಜಾಪುರ ದಾಂತೇವಾಡ ಸುಕ್ಮಾದ ಗಡಿ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ನಕ್ಸಲೀಯರು ಹತರಾಗಿದ್ದಾರೆ. ಬಿಜಾಪುರದ ಡಿಆರ್‌ಜಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಭದ್ರತಾ ಪಡೆಗಳು ನಿರಂತರ ಶೋಧ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ.

ಕಂಕೇರ್ ಎನ್‌ಕೌಂಟರ್‌ನಲ್ಲಿ ಇದುವರೆಗೆ 4 ನಕ್ಸಲೀಯರ ಮೃತದೇಹಗಳು ಪತ್ತೆಯಾಗಿವೆ. ಎನ್‌ಕೌಂಟರ್ ಸ್ಥಳದಲ್ಲಿ ಇನ್ನೂ ಶೋಧ ನಡೆಯುತ್ತಿದೆ.