ಶ್ರಮಜೀವಿಗಳ ಆಸ್ತಿ ಜಾನಪದ: ಡಾ.ಜಾನಪದ ಬಾಲಾಜಿ

Spread the love

ಚಿಕ್ಕಮಗಳೂರು: ಶ್ರಮಜೀವಿಗಳ ಆಸ್ತಿ ಜಾನಪದ ಎಂದು ‌ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್ ಬಾಲಾಜಿ ತಿಳಿಸಿದರು.

ಅಜ್ಜಂಪುರದ ಚಿಕ್ಕಾನಂಗಲ ಗ್ರಾಮದ ಬಸವೇಶ್ವರ ಸಮುದಾಯ ಭವನದಲ್ಲಿ ಕನ್ನಡ ಜಾನಪದ ಪರಿಷತ್ ಶಿವನಿ ಹೋಬಳಿ ಮಹಿಳಾ ಘಟಕದ ಉದ್ಘಾಟನೆ ಹಾಗೂ ಪದ ಪ್ರಧಾನ ನೆರವೇರಿಸಿ ಅವರು ಮಾತನಾಡಿದರು.

ಜಾನಪದ ಮಹಿಳಾ ಪ್ರಧಾನವಾದದ್ದು, ಇದು ನಮ್ಮ ಪೂರ್ವಜರಿಂದ ಬಂದ ಬಳುವಳಿ, ಅದನ್ನು ಮುಂದಿನ ಪೀಳಿಗೆಗೆ ಕೊಂಡಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಜಾನಪದ ನಮ್ಮ ಸಂಸ್ಕೃತಿಯ ಮೂಲ ಬೇರು ಇದನ್ನು ತರಬೇತಿ ಹಾಗೂ ದಾಖಲಿಕರಣದ ಮೂಲಕ ಉಳಿಸಿ ಬೆಳೆಸುವ ಕಾರ್ಯ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಮೂಲಕ ಆಗುತ್ತಿದೆ, ಸರ್ಕಾರ ಕಲಾವಿದರ ಮಾಶಾಸನ ಹೆಚ್ಚಿಸಬೇಕೆಂದು ಸರ್ಕಾರವನ್ನು ಡಾ.ಜನಪದ ಬಾಲಾಜಿ ಆಗ್ರಹಿಸಿದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಜಾನಪದ ಪರಿಷತ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿಶಾಲಕ್ಷಮ್ಮ ಎಂ ಎಸ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಜ್ಯಮಟ್ಟದ ಪ್ರಥಮ ಮಹಿಳಾ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಮಹಿಳಾ ಘಟಕಗಳನ್ನು ಶೀಘ್ರದಲ್ಲಿ ಸ್ಥಾಪಿಸಲಾಗುವುದು ಹಾಗೂ ಶಾಲಾ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷವಾಗಿ ಜನಪದ ಕಲಾ ಪ್ರಾಕಾರಗಳು ತರಬೇತಿಗಳನ್ನು ನೀಡಲಾಗುವುದು ಎಂದು ಹೇಳಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ಸಂಜು ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಭರಾಟೆಯಿಂದ ನಮ್ಮ ಸಂಸ್ಕೃತಿ ಸಂಸ್ಕಾರಗಳು ಕುಸಿಯುತ್ತಿದೆ, ಇದನ್ನು ತಿಳಿಯುವ ಕೆಲಸ ಮಹಿಳಾ ಘಟಕದಿಂದ ಆಗಲಿ ಎಂದು ಸಲಹೆ ನೀಡಿದರು.

ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಉದ್ದೇಶ ಹಾಗೂ ಮುಂದಿನ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜಯಕುಮಾರಿ ತಿಳಿಸಿದರು.

ಅಜ್ಜಂಪುರ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ತಾಲೂಕ ಅಧ್ಯಕ್ಷೆ ಪುಷ್ಪ ಮಾತನಾಡಿ ಡಿಸೆಂಬರ್ ತಿಂಗಳ ಒಳಗಾಗಿ
ಅಜ್ಜಂಪುರ ತಾಲೂಕಿನ ಎಲ್ಲಾ ಗ್ರಾಮ ಘಟಕಗಳನ್ನು ರಚಿಸಲಾಗುವುದು ಎಂದು ಹೇಳಿದರು.

ಶಿವನಿ ಹೋಬಳಿ ಅಧ್ಯಕ್ಷರಾಗಿ ಮಧು ನಿಂಗ ಪ್ಪ ಅವರಿಗೆ ಪದ ಪ್ರಧಾನ ಮಾಡಲಾಯಿತು.

ಮೂಲ ಜನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮೀದೇವಮ್ಮ, ಶಿವಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಶಿವ ಮೂರ್ತಿ, ಸಹಾಯಕ ನಿರ್ದೇಶಕ ನವೀನ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿಡಿಒ ಹರ್ಷ ಕೆ ಎಸ್, ತಿಕನಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸಮ್ಮ, ಓಂಕಾರಯ್ಯ, ಕಲಾವಿದರಾದ ಶಂಕ್ರಪ್ಪ, ತಿಪ್ಪೇಶ್, ಕಲೆನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ನೂತನ ಪದಾಧಿಕಾರಿಗಳಾದ ಪುಣ್ಯವತಿ, ಮಹಾದೇವಿ, ಪ್ರೇಮ, ಗಿರಿಜಾ, ಸವಿತಾ, ಕಡೂರು ತಾಲೂಕ ಅಧ್ಯಕ್ಷರಾದ ಶೋಭಾ ಶ್ರೀನಿವಾಸ್, ಮಧುಮಾಲತಿ ಸತೀಶ್ ಲೋಕೇಶ್ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.