ಯಾವುದೇ‌ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಿ: ಉಷಾ ರಾಣಿ

Spread the love

ಮೈಸೂರು: ಪ್ರತಿಯೊಬ್ಬರುಆ ಯಾವುದೇ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಹೋದಲ್ಲಿ ನಮ್ಮ ಕಾರ್ಯ ಹಾಗೂ ಚಟುವಟಿಕೆಗಳೊಂದಿಗೆ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾ ರಾಣಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಏರ್ಪಡಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮ ದಡಿ ಪಿಸಿಪಿಎನ್ ಡಿ ಟಿ ಕಾಯಿದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ, ಮಾನವ ಕಳ್ಳ ಸಾಗಣಿ ಇವುಗಳನ್ನು ನೋಡಿದಾಗ ಮಹಿಳೆಯರೆ ಹೆಚ್ಚು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ವಿಷಾದಿಸಿದರು.

ಹೆಣ್ಣು ಮಕ್ಕಳಿಗೆ ಕಡಿಮೆ ವಿದ್ಯಾಭ್ಯಾಸದ ಜೊತೆಗೆ ಗೌರವಯುತವಾಗಿ ಬಾಳಬೇಕು ಎಂಬ ಉದ್ದೇಶದಿಂದ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಶಿಕ್ಷಣದಿಂದ ವಂಚಿತರಾದ ಹೆಣ್ಣುಮಕ್ಕಳು ಬೇರೆ ಕಡೆ ಕೆಲಸಮಾಡಲು ಹೋಗುತ್ತಿದ್ದಾರೆ. ಅಂತಹ ಕಡೆಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚು ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಗುಲಾಮಗಿರಿ ಮಾಡುವಂತಹ ದುಸ್ಥಿತಿ ಅವರಿಗೆ ಬರುತ್ತಿದೆ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಈ ಕಾರ್ಯಗಾರದ ಉದ್ದೇಶ ನಮ್ಮೆಲ್ಲರ ಮೇಲಿರುವಂತಹ ಜವಾಬ್ದಾರಿಯನ್ನು ಹೆಚ್ಚು ಮಾಡುವುದಲ್ಲದೆ ಎಲ್ಲಾ ಜನತೆಗೆ ಇದರ ಉದ್ದೇಶ ಮತ್ತು ಸಂದೇಶವನ್ನು ಕೊಡುವುದು. ದೇಶದ ಸಂಪತ್ತಾದ ಮಕ್ಕಳ ಹಕ್ಕುಗಳಿಗೆ ಆಪತ್ತು ಬಾರದಂತೆ ನೋಡಿಕೊಳ್ಳಲು ಕರ್ತವ್ಯವನ್ನು ನಿರ್ಭಿತಿಯಿಂದ ನಿಷ್ಪಕ್ಷಪಾತವಾಗಿ ಸರಾಗವಾಗಿ ನೆರವೇರಿಸಿ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯತ್ರಿ ಕೆ. ಎಂ ಅವರು ಮಾತನಾಡಿ,ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಎಂಬುವುದರ ಬಗ್ಗೆ ತಿಳಿಸಿಕೊಡಬೇಕು. ಜೊತೆಗೆ ಅವರಿಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ತಿಳುವಳಿಕೆಯನ್ನು ಮೂಡಿಸುವುದರ ಜೊತೆ ಸ್ವಯಂ ಶಕ್ತಿಯನ್ನು ತುಂಬಬೇಕು ಎಂದು ತಿಳಿಸಿದರು.

ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳು ಇಬ್ಬರಿಗೂ ಸಹ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಗಂಡು ಮಕ್ಕಳು ಹೆಣ್ಣು ಮಕ್ಕಳಿಗೆ ಹೇಗೆ ಗೌರವ ಕೊಡಬೇಕು ಎಂಬುದುರ ಬಗ್ಗೆ ಸಹ ತಿಳಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಇದರಿಂದ ಅನೇಕ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ. ಜಿ ಅವರು ಮಾತನಾಡಿ ಹದಿಹರೆಯದ ವಯಸ್ಸಿನ ಮಕ್ಕಳಲ್ಲಿ ಏನೆಲ್ಲಾ ಬದಲಾವಣೆ ಆಗುತ್ತಿದೆ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ಪ್ರತಿಯೊಂದು ಶಾಲೆಗಳಲ್ಲಿ ಕೌನ್ಸಿಲ್ ಗಳು ಇರಬೇಕು. ಇಲ್ಲದಿದ್ದರೆ ಶಿಕ್ಷಕರಿಗೆ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ನೀಡಬೇಕು ಇದರಿಂದ ಶಿಕ್ಷಕರು ಮಕ್ಕಳಿಗೆ ಜಾಗೃತಿಯನ್ನು ಮೂಡಿಸುತ್ತಾರೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್ ಅವರು ಮತನಾಡಿ ವಿದ್ಯವಂತರಾಗಿರುವವರೆ ಹೆಚ್ಚು ಮೋಸಹೋಗುತ್ತಾ ಇರುವುದರಿಂದ ಈ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ ಇದರ ಬಗ್ಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚು ಗಮನ ಕೊಡಬೇಕು, ಸಹಾಯಕ್ಕಾಗಿ ಪೊಲೀಸ್ ಅಧಿಕಾರಿಗಳು ಯಾವಾಗಲೂ ಸಹ ನಿಮ್ಮ ಜೊತೆ ಇರುತ್ತೇವೆ ಎಂದು ಭರವಸೆ ನೀಡಿದರು.

ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಹೆಚ್ಚು ದೌರ್ಜನ್ಯ ನಡೆಯುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಮಕ್ಕಳನ್ನು ಯಾವ ರೀತಿಯಲ್ಲಿ ಮುಟ್ಟುತ್ತಾ ಇದ್ದಾರೆ ಎಂಬ ಅರಿವು ಸಹ ಅವರಲ್ಲಿ ಇರುವುದಿಲ್ಲ ಆದ್ದರಿಂದ ಪೋಷಕರು ಮಕ್ಕಳಿಗೆ ಇಂತಹ ವಿಚಾರಗಳಲ್ಲಿ ತಿಳುವಳಿಕೆಯನ್ನು ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿ.ಪಿ.ಒ ಪ್ರಭು ಸ್ವಾಮಿ, ಉಪಕಾರ್ಯದರ್ಶಿ ಸವಿತಾ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಾದ ಬಸವರಾಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಪ್ಯಾನಲ್ ವಕೀಲರಾದ ಎನ್. ಸುಂದರ್ ರಾಜ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಎನ್. ಗೀತಾ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಡಿ. ಜೆ. ಮಮತ ಉಪಸ್ಥಿತರಿದ್ದರು.