ಮೈಸೂರು: ಮೈಸೂರಿನ ಹೂಟಗಳ್ಳಿಯ ಕೆ ಹೆಚ್ ಬಿ ಕಾಲೋನಿಯಲ್ಲಿರುವ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ಶಾಲಾ ವಾರ್ಷಿಕ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ.ಎನ್.ಶ್ರೀನಿವಾಸನ್ ಅವರು ಮಾತಾಡಿ, ಮಕ್ಕಳೇ ದೇವರು ಅವರಲ್ಲಿ ಯಾವುದೇ ತರದ ಕಲ್ಮಶ ಇರುವುದಿಲ್ಲ ಎಂದು ತಿಳಿಸಿದರು.
ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡುವುದು ನಮ್ಮ ಉದ್ದೇಶವಾಗಿದೆ, ಮಕ್ಕಳಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಲು ಈ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡೆಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಮಕ್ಕಳೆಲ್ಲ ಭಾಗವಹಿಸುತ್ತಿರುವುದು ನೋಡಿ ತುಂಬಾ ಖುಷಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗುರುರಾಜ್ ರವಿ, ಶ್ರೀಮತಿ ಪುಷ್ಪಾ ಅಯ್ಯಂಗಾರ್, ವೈದೇಹಿ ಅಯ್ಯಂಗಾರ್, ಶಾಲಾ ಮುಖ್ಯೋಪಧ್ಯಾಯರಾದ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.
