ಮೈಸೂರು: ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕ ಎಂದು ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ತಿಳಿಸಿದರು.
ನಗರದ ರಾಮನುಜ ರಸ್ತೆಯಲ್ಲಿರುವ ಜ್ಯೋತಿರ್ಗಮಯ ಉಚಿತ ವಿದ್ಯಾರ್ಥಿನಿಯರ ನಿಲಯದ ವಿದ್ಯಾರ್ಥಿನಿಯರಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ಹಂಪಲು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸ್ವಚ್ಛತೆ ಬಗ್ಗೆ ಅರಿವಿದ್ದರೆ ಅವರು ಸುತ್ತಲಿನ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ. ಪ್ರತಿಯೊಬ್ಬ ಮನುಷ್ಯನಿಗೆ ಅಗತ್ಯವಾಗಿ ಬೇಕಾಗಿರುವುದು ಆರೋಗ್ಯ ಭಾಗ್ಯ. ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸ್ವಚ್ಛತಾ ಆಂದೋಲನ ಮಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಈ ವೇಳೆ ಜ್ಯೋತಿರ್ಗಮಯ ವಿದ್ಯಾರ್ಥಿನಿಯರ ನಿಲಯದ ಮಾದೇಶ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್ , ವೀರಭದ್ರ ಸ್ವಾಮಿ, ಮಹದೇವ್,ರಾಜೇಶ್ ಕುಮಾರ್, ಯಶ್ವಂತ್ ಕುಮಾರ್, ಪುರುಷೋತ್ತಮ್,ಎಸ್. ಪಿ ಅಕ್ಷಯ್ ಪ್ರಿಯಾದರ್ಶನ್ ಮತ್ತಿತರರು ಹಾಜರಿದ್ದರು.