ಮೈಸೂರು: ಮರು ಬಳಕೆ ಮಾಡಲು ಸಾಧ್ಯವಿಲ್ಲದ ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ. ಆದ್ದರಿಂದ ಪ್ಲಾಸ್ಟಿಕ್ ಚೀಲಗಳ ಬದಲು ಬಟ್ಟೆ ಚೀಲಗಳನ್ನು ಬಳಸಲು ವರ್ತಕರು-ಗ್ರಾಹಕರು ಗಂಭೀರವಾಗಿ ಚಿಂತಿಸಬೇಕು ಎಂದು ಕ್ಷೇಮ ಧಾಮ ಟ್ರಸ್ಟ್ ಕಾರ್ಯದರ್ಶಿ ಎಚ್ ವಿ ಎಲ್ ಏನ್ ಆಚಾರ್ ತಿಳಿಸಿದರು.
ಕ್ಷೇಮ ಧಾಮ ಟ್ರಸ್ಟ್ ಹಾಗೂ ಅರಿವು ಸಂಸ್ಥೆ
ವತಿಯಿಂದ ಗುರುವಾರ ಮೈಸೂರಿನ ಶ್ರೀರಾಂಪುರದ ಮಾರುಕಟ್ಟೆಯ ತರಕಾರಿ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಬಟ್ಟೆ ಚೀಲ ವಿತರಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರ, ಮನುಷ್ಯರ ಆರೋಗ್ಯ ಹಾಗೂ ಪ್ರಾಣಿ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತದೆ. ಜಲಮೂಲಗಳು ಕಲುಷಿತಗೊಳ್ಳುತ್ತವೆ. ಪ್ಲಾಸ್ಟಿಕ್ ವಿಷಕಾರಿ ರಾಸಾಯನಿಕ ಬಿಡುಗಡೆ ಮಾಡುವ ಕಾರಣ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ
ಎಂದು ಎಚ್ಚರಿಸಿದರು.
ಪ್ಲಾಸ್ಟಿಕ್ ಬಾಟಲ್ನಲ್ಲಿನ ನೀರು ಶುದ್ಧವೆಂದು ಭಾವಿಸಿ ಸೇವಿಸುವುದು ಫ್ಯಾಷನ್ ಆಗಿದೆ. ಭವಿಷ್ಯದಲ್ಲಿ ಖಾಲಿ ಬಾಟಲ್ಗಳನ್ನು ವಿಲೇವಾರಿ ಮಾಡುವುದೇ ಬಹುದೊಡ್ಡ ಸಮಸ್ಯೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ನೀರನ್ನು ರೆಫ್ರಿಜರೇಟ ರ್ನಲ್ಲಿಟ್ಟು ತಣ್ಣಗೆ ಮಾಡಿಕೊಂಡು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಬದಲಿಗೆ ನೀರನ್ನು ಮಣ್ಣಿನ ಮಡಿಕೆಯಲ್ಲಿ ಹಾಕಿ ಕುಡಿಯುವುದು ಉತ್ತಮ’ ಎಂದು ಆಚಾರ್ ಸಲಹೆ ನೀಡಿದರು.
ಸಂದರ್ಭದಲ್ಲಿ ಕ್ಷೇಮ ಧಾಮ ಟ್ರಸ್ಟ್ ಅಧ್ಯಕ್ಷರಾದ ಶೇಖರ್, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಮೈಸೂರು ಮಹಾನಗರ ಪಾಲಿಕೆಯ ಸ್ಥಳೀಯ ಹಿರಿಯ ಆರೋಗ್ಯ ನಿರೀಕ್ಷಕರಾದ ಅಶ್ವಥ್, ಲಯನ್ ನಾಗೇಶ್ ಮೂರ್ತಿ, ಬಿಜೆಪಿ ಮುಖಂಡರಾದ ದೂರ ರಾಜಣ್ಣ, ಸತೀಶ್, ರಾಮಲಿಂಗ, ಮಂಜುನಾಥ್, ವಿಹಾ ಎಸ್ ಆಚಾರ್ಯ ಮತ್ತಿತರರು ಹಾಜರಿದ್ದರು.
