ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಸಿಎಂ ಬದಲಾವಣೆ ವಿಚಾರ ಮಾತನಾಡುತ್ತಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಸಿಎಂ ಬದಲಾವಣೆ ವಿಚಾರ ಬರುತ್ತಿದೆ ಇಂತಹ ವಿಚಾರಗಳಿಗೆ ವಿರಾಮ ಹಾಕಬೇಕು ಎಂದು ಮನವಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಸಿಎಂ ಬದಲಾಬಣೆ ಬಗ್ಗೆ ಯಾರು ಮಾತನಾಡುತ್ತಿಲ್ಲ. ರಾಜಕೀಯದ ಯಾವ ವಿಷಯವನ್ನ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಪಕ್ಷದ ಆಂತರಿಕ ವಿಚಾರವನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಾ.ಯತೀಂದ್ರ ಹೇಳಿದರು.