ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ತೀವ್ರ ಸಂತಾಪ

Spread the love

ಬೆಂಗಳೂರು: ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ.

ಸುಕ್ರಿ ಬೊಮ್ಮಗೌಡ ಅವರ ನಿಧನ‌ಕ್ಕೆ ಮುಖ್ಯ ಮಂತ್ರಿಗಳು ಟ್ವೀಟ್ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ,ಸುಕ್ರಜ್ಜಿ‌ ಅವರು ಹುಟ್ಟು ಕಲಾವಿದೆ ಎಂದು ‌ಬಣ್ಣಿಸಿದ್ದಾರೆ.

ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು ಎಂದು ಹೇಳಿದ್ದಾರೆ.

ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು.

ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.