ಮೈಸೂರು: ಯೂಟ್ಯೂಬ್ ಚಾನೆಲ್ ಮಾಲೀಕ ತನಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮೈಸೂರಿನ
ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಗಸ್ಟ್ 4 ರಂದು ಯೂಟ್ಯೂಬ್ ಚಾನೆಲ್ ಮಾಲಿಕ ತಮ್ಮನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಲೈಂಗಿಕ ಕಿರುಕುಳ ನೀಡಿದರು. ಇದನ್ನು ವಿರೋಧಿಸಿದಕ್ಕೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ
ನಂತರ ತಮ್ಮ ಬಳಿಯಿದ್ದ 12 ಸಾವಿರ ನಗದು ಹಾಗೂ 25 ಗ್ರಾಂ ತೂಕದ ಚಿನ್ನದ ಸರವನ್ನು ತೆಗೆದುಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
