ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರಿಗೆ ಮೈಸೂರಿನಲ್ಲಿ ಮುಖಂಡರು ಹಾಗೂ ಅಭಿಮಾನಿಗಳು ಅಭಿನಂದನೆಯ ಮಹಾಪೂರವನ್ನೇ ಸುರಿಸಿದರು.
ಮೈಸೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಕೆ ಆರ್ ಬ್ಯಾಂಕ್ ಅಧ್ಯಕ್ಷ ಡಿ ಬಸವರಾಜು ಬಸವಪ್ಪ ಮತ್ತು ನವೀನ್ ಕೆಂಪಿ ಅವರ ನೇತೃತ್ವದಲ್ಲಿ ಅಭಿಮಾನಿಗಳ ತಂಡ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.
ಸಿದ್ದರಾಮಯ್ಯ ಅವರು ಇಂದಿಗೆ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಹಿನ್ನೆಲೆಯಲ್ಲಿ ಬಸವರಾಜು ಮತ್ತು ನವೀನ್ ಸಿಎಂಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
