ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ:ಶಾ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ

ಮೈಸೂರು: ಸಂಸತ್ತಿನಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ
ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಮೈಸೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ‌ ಎಲ್ಲಾ‌ ವಿಭಾಗಗಳ ಮುಖಂಡರು ಮತ್ತು ಕೆಪಿಸಿಸಿ ಮೈಸೂರು ಘಟಕದ ಸದಸ್ಯರು ಅಮಿತ್ ಶಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಅಮಿತ್ ಶಾ ಭಾವಚಿತ್ರಗಳನ್ನು ಹರಿದು ಎಸೆದು ಚಿತ್ರಕ್ಕೆ ಬೆಂಕಿ ಹಚ್ಚಿ ಕಿಡಿಕಾರಿದರು.ಬಿಜೆಪಿ ಮತ್ತು ಅಮಿತ್ ಶಾ‌ ವಿರುದ್ದ ಘೋಷಣೆ ಕೂಗಿದರು.

ಪ್ರತಿಭಟನೆ ವೇಳೆ ಪೊಲೀಸರು ಬಂಧಿಸಲು ಮುಂದಾದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡಾ ನಡೆಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಅಮಿತ್ ಶಾ ಗೃಹ ಸಚಿವ ಸ್ಥಾನದಲ್ಲಿರಲು ಅರ್ಹರಲ್ಲ,ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಇಡೀ ದೇಶ ಅಂಬೇಡ್ಕರ್ ಅವರ ಬಗ್ಗೆ ಪೂಜನೀಯ ಭಾವನೆ ಇಟ್ಟುಕೊಂಡಿದ್ದಾರೆ,ದೇಶಕ್ಕೆ ಸಂವಿಧಾನ ಕೊಟ್ಟ ಮಹಾತ್ಮರ ಬಗ್ಗೆ ಅಪಮಾನವಾಗುವಂತಹ ಹೇಳಿಕೆಗಳನ್ನು ಯಾರೆ ನೀಡಿದರು ನಮ್ಮ ಪಕ್ಷ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.