ಮೈಸೂರು: ಹತ್ತು ವರ್ಷದ ಹಿಂದೆ ಮಾಡಿದ ಜಾತಿಗಣತಿ ಇಟ್ಕೊಂಡು ಈಗ ಏನು ಮಾಡುತ್ತೀರಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದು ಸಿದ್ದರಾಮಯ್ಯ ಆಫೀಸಲ್ಲಿ ಕುಳಿತು ಮಾಡಿದ ವರದಿ ಅಂತ ಕಾಂಗ್ರೆಸ್ ನವರೇ ಹೇಳುತ್ತಿದ್ದಾರೆ ಅಲ್ಲಿಗೆ ಆ ವರದಿ ಅದೆಷ್ಟು ಸರಿ ಇದ್ದೀತು ಎಂದು ವಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿ, ನಿನ್ನೆ ಕ್ಯಾಬಿನೆಟ್ ನಲ್ಲಿ ಎಸ್ಐಟಿ ತನಿಖೆ ಮಾಡ್ತೀವಿ ಅಂದಿದ್ದಾರೆ. ಅವರ ನಿರ್ಧಾರಕ್ಕೆ ನಮ್ಮದೇನು ತಕರಾರಿಲ್ಲ ಎಂದು ಹೇಳಿದರು.
ಆದರೆ ಇವರು ವಿರೋಧಪಕ್ಷದಲ್ಲಿದ್ದಾಗ ಕೋವಿಡ್ ಬಗ್ಗೆ ಚರ್ಚೆ ಮಾಡ್ತಿದ್ರು. ಇದೇ ಸಿದ್ದರಾಮಯ್ಯ ಸದನದಲ್ಲಿ ಚರ್ಚೆ ಮಾಡಿದ್ರು. ಸರ್ಕಾರ ರಚನೆ ಆಗಿ 15 ತಿಂಗಳಾಗಿದೆ. ಇಷ್ಟುದಿನ ಸುಮ್ಮನಿದ್ದರು, ಈಗ ತನಿಖೆ ಮಾಡ್ತಾರಾ, ಅವರ ವೈಫಲ್ಯ ಮುಚ್ಚಿಕೊಳ್ಳಲು ಇವೆಲ್ಲ ಮಾಡ್ತಿದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ನವರು ಇಂದು ಪೇಪರ್ ನಲ್ಲಿ ಅದ್ಯಾವುದೋ ಜಾಹಿರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ. ಕರ್ನಾಟಕ ರಾಜ್ಯವನ್ನ ವಾಮಾಮಾರ್ಗ, ಮೋಸದಿಂದ ಅಸ್ತಿರಗೊಳಿಸ್ತಿದ್ದಾರೆ ಅಂತ ಕೊಟ್ಟಿದ್ದಾರೆ. ಆದರೆ ವಾಮಾಮಾರ್ಗ, ಮೋಸವನ್ನ ಸ್ಥಿರಗೊಳಿಸಲು ಹೊರಟಿರೋ ಸರ್ಕಾರ ಇದು. ಇವರು ಯಾವತ್ತು ಸತ್ಯ ಧರ್ಮ ಉಳಿಸಿದಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.